Homeಮುಖಪುಟಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದಿದ್ದಾರೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ 50 ದಿನಗಳಿಂದಲೂ ಇಲ್ಲೇ ಠಿಕಾಣಿ ಹೂಡಿವೆ. ಇವುಗಳ ಮಧ್ಯೆ ಸಣ್ಣ-ಸಣ್ಣ ಅಂಗಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಾಮಾನ್ಯ ಜನ ಕೂಡ ರೈತರ ಸೇವೆಗೆ ಆಗಮಿಸಿದ್ದಾರೆ. ಅವರಲ್ಲಿ ಪಂಜಾಬ್‌ನ ದಲವೀರ್‌ ಸಿಂಗ್‌ ಕೂಡ ಒಬ್ಬರು.

ಪಂಜಾಬ್‌ನ ಬರ್ನಾಲ್‌ ಎಂಬಲ್ಲಿ ಬಟ್ಟೆ ಹೊಲಿಗೆ ಅಂಗಡಿ ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲವೀರ್‌ ಸಿಂಗ್‌, ದುಬೈನಲ್ಲಿ ಕೆಲಸ ಮಾಡಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ವೀಸಾ ದೊರೆತಿತ್ತು. ವೀಸಾ ಪಡೆದು ಇನ್ನೇನು ದುಬೈಗೆ ಹಾರಲು ಹೊರಟಿದ್ದ ಇವರಿಗೆ, ರೈತರು ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ದೆಹಲಿಗೆ ಬಂದು ಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆ ಆರಂಭಿಸಿದ್ದು ತಿಳಿಯಿತು. ನಂತರ ಸಿಂಘು ಗಡಿಯಲ್ಲಿ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಮತ್ತೆ ತಮ್ಮ ಹಳೆ ಕೆಲಸವನ್ನು ಸೇವೆ ರೀತಿಯಲ್ಲಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

“ವೀಸಾ ದೊರೆತಿದೆ. ಯುಎಇಗೆ ಹೊರಡಬೇಕು. ಅಲ್ಲಿ ಒಳ್ಳೆಯ ಕೆಲಸ ಸಿಕ್ಕಿದೆ. ಆದರೆ ನಮ್ಮ ದೇಶ ರೈತರು ಸಂಕಷ್ಟದಲ್ಲಿ ಇರುವಾಗ ನಾನು ವಿದೇಶಕ್ಕೆ ಹೋಗುವುದು ಸರಿ ಕಾಣಲಿಲ್ಲ. ಮೊದಲು ನಮ್ಮವರ ಸಂಕಷ್ಟಕ್ಕೆ ನಾವಾಗಬೇಕು. ಅದಕ್ಕೆ ನಾನು ಇಲ್ಲಿ ಬಂದು ನನ್ನ ಹಳೆ ಕೆಲಸವನ್ನು ಸೇವೆ ರೀತಿಯಾಗಿ ಮಾಡುತ್ತಿದೇನೆ” ಎಂದಿದ್ದಾರೆ.

“ಜನವರಿ 26 ರಂದು ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ಆಯೋಜಿಸಿದ್ದೇವೆ. ಅಂದು ರೈತರ ಪರವಾಗಿ ನಿರ್ಣಯ ಆಗಲಿದೆ. ನಾವು ಅಂದು ಈ ಹೋರಾಟದಲ್ಲಿ ವಿಜಯ ಸಾಧಿಸಿ ಪಂಜಾಬ್‌ಗೆ ವಾಪಸ್‌ ತೆರಳುತ್ತೇವೆ. ಅಲ್ಲಿಂದ ನಾನು ದುಬೈಗೆ ಹೋಗಿ ಹೊಸ ಕೆಲಸಕ್ಕೆ ಸೇರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇವರಂತೆಯೇ ಮತ್ತೊಂದು ದಂಪತಿ ಕೂಡ ಸಿಂಘು ಗಡಿಯಲ್ಲಿ ಉಚಿತ ಹೊಲಿಗೆ ಸೇವೆ ನೀಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ರೈತರು ಹರಿದ ಬಟ್ಟೆಗಳು ಹಾಕಿಕೊಂಡು ಓಡಾಡುವುದನ್ನು ನೋಡಲು ನಮಗೆ ಸಾಧ್ಯವಾಗಲಿಲ್ಲ. ನಮ್ಮ ಕೆಲಸ ಸಣ್ಣದಿರಬಹುದು ಆದರೆ ಅದು ನಮ್ಮಿಂದ ಆಗುವ ಸೇವೆ ಹಾಗಾಗಿ ನಾವು ಇಲ್ಲಿ ಇದ್ದೇವೆ ಎಂದು ಈ ದಂಪತಿ ತಿಳಿಸುತ್ತಾರೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...