Homeಮುಖಪುಟ'ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ'ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

‘ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ’ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

- Advertisement -
- Advertisement -

ಬಿಹಾರದಿಂದ ತಮಿಳುನಾಡಿಗೆ ವಲಸೆ ಬಂದಿರುವ ಕಾರ್ಮಿಕರ ಮೇಲೆ ದಾಳಿ ನಡೆಯುತ್ತಿದೆ ಎಂಬ ಸುಳ್ಳು ಸುದ್ದಿ ಜೊತೆಗೆ ಹಲ್ಲೆಯ ಕೆಲವು ನಕಲಿ ವೀಡಿಯೊಗಳನ್ನು ಹಂಚಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಬೇಕಾಗಿದ್ದ ಯೂಟ್ಯೂಬರ್ Manish Kashyap, ಶನಿವಾರ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ತಮಿಳುನಾಡಿನಲ್ಲಿ ವಲಸಿಗರನ್ನು ಕೊಲ್ಲುವ ಮತ್ತು ಥಳಿಸುವ ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ತೊಡಗಿದೆ” ಎಂಬ ಆರೋಪದ ಮೇಲೆ ಬಿಹಾರ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕ (ಇಒಯು) ಕಶ್ಯಪ್ ಮತ್ತು ಇತರರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದೆ.

ಮಜೌಲಿಯಾದಲ್ಲಿ ಡಿಐಜಿ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಯೂಟ್ಯೂಬರ್‌ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಗೆ ಮುಂದಾದಗ ಯೂಟ್ಯೂಬರ್‌ ಕಶ್ಯಪ್ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ಶರಣಾದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಶ್ಯಪ್‌ನನ್ನು ಬಿಹಾರ ಮತ್ತು ತಮಿಳುನಾಡು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. “ಬಿಹಾರ ಪೊಲೀಸರು ಅವರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದ್ದರೆ, ತಮಿಳುನಾಡು ಪೊಲೀಸರು ಒಂಬತ್ತು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಆರ್ಥಿಕ ಅಪರಾಧ ಘಟಕದ (ಇಒಯು) ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಎನ್‌ಎಚ್ ಖಾನ್ ಮಾಹಿತಿ ನೀಡಿದ್ದಾರೆ.

ಕಶ್ಯಪ್ ಮತ್ತು ಮತ್ತೊಬ್ಬ ಆರೋಪಿ ಯುವರಾಜ್ ಸಿಂಗ್ ರಜಪೂತ್ ವಿರುದ್ಧ ಪೊಲೀಸರು ಅರೆಸ್ಟ್‌ ವಾರೆಂಟ್‌ ಹೊರಡಿಸಿದ್ದರು. ಶರಣಾಗತಿಗಾಗಿ ಅವರ ಮೇಲೆ ಒತ್ತಡ ಹೇರಲು ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರು.

”ಆರ್ಥಿಕ ಅಪರಾಧ ಘಟಕ ರಚಿಸಿರುವ ಆರು ತಂಡಗಳು ಪಾಟ್ನಾ ಮತ್ತು ಚಂಪಾರಣ್ ಪೊಲೀಸರೊಂದಿಗೆ ನಿನ್ನೆಯಿಂದ (ಶುಕ್ರವಾರ) ವಿವಿಧ ಸ್ಥಳಗಳು ಮತ್ತು ಅಡಗುತಾಣಗಳಲ್ಲಿನ ಅವರ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಬಂಧನ ಮತ್ತು ಇತರ ಕಾನೂನು ಕ್ರಮಗಳ ಭಯದಿಂದ ಅವರು ಶನಿವಾರ ಬೆಟ್ಟಿಯ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ” ಎಂದು ಎಡಿಜಿ ತಿಳಿಸಿದ್ದಾರೆ.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕ ಮಾರ್ಚ್ 6ರಂದು ಕಶ್ಯಪ್ ಸೇರಿದಂತೆ ಅಮನ್ ಕುಮಾರ್, ರಾಕೇಶ್ ತಿವಾರಿ ಮತ್ತು ಯುವರಾಜ್ ಸಿಂಗ್ ರಜಪೂತ್ ಎನ್ನುವ ನಾಲ್ವರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಿದೆ. ಮೊದಲ ಎಫ್‌ಐಆರ್‌ನ ತನಿಖೆಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕವು ಈಗಾಗಲೇ ಜಮುಯಿಯಿಂದ ಅಮನ್ ಕುಮಾರ್‌ನನ್ನು ಬಂಧಿಸಿದೆ.

ತಮಿಳುನಾಡಿನಲ್ಲಿ ವಲಸಿಗರನ್ನು ಹೊಡೆದು ಕೊಲ್ಲುವ 30 ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಕಾರ್ಮಿಕರಲ್ಲಿ ಭೀತಿಯನ್ನು ಹರಡಿದೆ ಎಂದು ಆರ್ಥಿಕ ಅಪರಾಧ ಘಟಕದ ತನಿಖೆಯು ಕಂಡುಹಿಡಿದಿದೆ ಎಂದು ಬಿಹಾರ ಪೊಲೀಸ್ (ಪ್ರಧಾನ ಕಚೇರಿ) ಹೆಚ್ಚುವರಿ ಮಹಾನಿರ್ದೇಶಕ ಜೆಎಸ್ ಗಂಗ್ವಾರ್ ಕಳೆದ ವಾರ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಬಗ್ಗೆ ತನಿಖೆ ನಡೆಸಲು ತಮಿಳುನಾಡು ಪೊಲೀಸರು 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದಕ್ಕೂ ಮೊದಲು, ಬಿಹಾರ ಸರ್ಕಾರವು ತಮಿಳುನಾಡಿಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಉನ್ನತ ಅಧಿಕಾರಿಗಳ ತಂಡವನ್ನು ಕಳುಹಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...