Homeಮುಖಪುಟಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

- Advertisement -
- Advertisement -

ಮಂಗಳವಾರ ಮಂಡನೆಯಾಗಿರುವ ಕೇಂದ್ರ ಬಜೆಟ್‌ನಲ್ಲಿ ಜನಸಾಮಾನ್ಯರು, ಮಧ್ಯಮ ವರ್ಗದವರಿಗೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಯೋಚಿಸದೆ, ಪೆಗಾಸಸ್ ವಿವಾದ ಮರೆಮಾಚುತ್ತಿರುವ ಬಜೆಟ್” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

“ನಿರುದ್ಯೋಗ ಮತ್ತು ಹಣದುಬ್ಬರದಿಂದ ನಲುಗಿ ಹೋಗುತ್ತಿರುವ ಜನಸಾಮಾನ್ಯರಿಗೆ ಬಜೆಟ್ ಒದಗಿಸಿರುವುದು ಶೂನ್ಯ. ಸರ್ಕಾರವು ದೊಡ್ಡ-ದೊಡ್ಡ ಮಾತುಗಳ ಮೂಲಕ ಬೊಗಳೆ ಬಿಡುತ್ತಿದೆ. ಇದು ಪೆಗಾಸೆಸ್ ಮರೆಮಾಚುತ್ತಿರುವ ಬಜೆಟ್” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಮೋದಿ ಸರ್ಕಾರದ ಶೂನ್ಯ ಮೊತ್ತದ ಬಜೆಟ್ ಇದಾಗಿದೆ ಎಂದಿದ್ದಾರೆ. “ಮೋದಿ ಸರ್ಕಾರದ ಶೂನ್ಯ ಮೊತ್ತದ ಬಜೆಟ್! ಸಂಬಳ ಪಡೆಯುವ ವರ್ಗ, ಮಧ್ಯಮ ವರ್ಗ, ಬಡವರು ಮತ್ತು ವಂಚಿತರು, ಯುವಕರು, ರೈತರು ಹಾಗೂ ಎಂಎಸ್ಎಂಇಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ” ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಸಿಪಿಎಂ ಪಕ್ಷದ ಸೀತಾರಾಮ್ ಯೆಚೂರಿ ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ಬಜೆಟ್ ಮಂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಜನವಿರೋಧಿ ಬಜೆಟ್. ಕಳೆದ ಎರಡು ವರ್ಷಗಳಲ್ಲಿ ಜನರು ಸಂಕಷ್ಟಲ್ಲಿರುವಾಗ ಆಹಾರ, ರಸಗೊಬ್ಬರ ಮತ್ತು ಪೆಟ್ರೋಲಿಯಂ ಮೇಲಿನ ಸಬ್ಸಿಡಿಗಳನ್ನು ಕಡಿತಗೊಳಿಸಲಾಯಿತು. ಇದು ಜನರ ಜೀವನೋಪಾಯದ ಮೇಲೆ ಸರ್ಕಾರ ಮಾಡಿದ ಕ್ರೂರ ದಾಳಿ” ಎಂದು ತಿಳಿಸಿದ್ದಾರೆ.

ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್‌ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. “ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆಯವರು ಬಜೆಟ್ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ರಾಜ್ಯಕ್ಕೆ ಯಾವುದೇ ನೆರವು ದೊರೆತಿಲ್ಲ ಎಂಬುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಿಂದ ಆಯ್ಕೆಯಾಗಿ, ರಾಜ್ಯಕ್ಕೆ 2022-23ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆ/ವಿಶೇಷ ನೆರವು ಒದಗಿಸದೇ ನಿರ್ಮಲಾ ಸೀತಾರಾಮನ್ ವಂಚಿಸಿದ್ದಾರೆ. ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯಗಳ ತಲೆ ಮೇಲೆ 1 ಲಕ್ಷ ಕೋಟಿ ಸಾಲ ಕಟ್ಟಿರುವುದೇ ಈ ಬಜೆಟ್ ನ ಸಾಧನೆಯಾಗಿದೆ. ಸ್ಟಾರ್ಟ್ ಅಪ್ ಉತ್ತೇಜಿಸಲು ಯಾವುದೇ ಕ್ರಮವಿಲ್ಲ. ಆದಾಯ ತೆರಿಗೆ ಕಡಿಮೆ ಆಗಿಲ್ಲ. ಫಸಲ್ ಭೀಮಾ ಯೋಜನೆ ನಿಯಮಗಳಲ್ಲಿ ಬದಲಾವಣೆ ಇಲ್ಲ. ಕೃಷಿ ಕನಿಷ್ಠ ಬೆಂಬಲ ಬೆಲೆ ಕೂಡಾ ಇಳಿಸಲಾಗಿದೆ. ಮೂಲಸೌಕರ್ಯಕ್ಕೆ ಇತಿಹಾಸದಲ್ಲೇ ಅತ್ಯಂತ ಕಡಿಮೆ ಹಣ. ಹೀಗಿರುವಾಗ ಇದನ್ನು ಜನಪರ ಎನ್ನುವುದಾದರೂ ಹೇಗೆ?” ಎಂದು ಪ್ರಿಯಾಂಕ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಬಜೆಟ್‌‌ 2022: ಒಕ್ಕೂಟ ಸರ್ಕಾರದ ಮೇಲೆ ಜನರ ನಿರೀಕ್ಷೆಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...