Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...