Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...