Homeಮುಖಪುಟಯುದ್ಧ ನೌಕೆ 'INS ವಿಕ್ರಾಂತ್’‌ ಉಪಕರಣಗಳ ಕಳ್ಳತನ; ಪ್ರಕರಣ ಭೇದಿಸಿದ NIA

ಯುದ್ಧ ನೌಕೆ ‘INS ವಿಕ್ರಾಂತ್’‌ ಉಪಕರಣಗಳ ಕಳ್ಳತನ; ಪ್ರಕರಣ ಭೇದಿಸಿದ NIA

- Advertisement -
- Advertisement -

ಭಾರತ ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಿಂದ ಹಾರ್ಡ್ ಡಿಸ್ಕ್, ರಾಮ್‌ಗಳು ಹಾಗೂ ಪ್ರೊಸೆಸರ್‌ಗಳ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣವನ್ನು ಭೇದಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಹೇಳಿಕೊಂಡಿದೆ.

2019 ರ ಸೆಪ್ಟೆಂಬರ್‌ನಲ್ಲಿ ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಹಡಗು ನಿರ್ಮಾಣದ ಸಂದರ್ಭದಲ್ಲಿ  ಕಳ್ಳತನ ವರದಿಯಾಗಿತ್ತು.

ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರು ವಲಸೆ ಕಾರ್ಮಿಕರನ್ನು ಬಂಧಿಸಿದ್ದು, ಬಂಧಿತರಲ್ಲಿ ಒಬ್ಬ ವ್ಯಕ್ತಿ ಬಿಹಾರ ಮೂಲದವನು ಇನ್ನೊಬ್ಬ ವ್ಯಕ್ತಿ ರಾಜಸ್ಥಾನದ ನಿವಾಸಿಯಾಗಿದ್ದಾರೆ. ಇಬ್ಬರೂ ಹಡಗಿನಲ್ಲಿ ಪೈಂಟಿಂಗ್‌ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಗುತ್ತಿಗೆದಾರನೊಂದಿಗೆ ವಾಗ್ವಾದವಾಗಿದ್ದರಂದ ಅವರನ್ನು ಕೆಲಸದಿಂದ ಅವರನ್ನು ವಜಾಗೊಳಿಸಲಾಗಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಅವರು ಈ ಉಪಕರಣಗಳನ್ನು ಕದ್ದಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಹಡಗಿನಿಂದ ಕಳ್ಳತನವಾದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳ ಪೊಲೀಸರ ನೆರವಿನೊಂದಿಗೆ 5,000 ಕ್ಕೂ ಹೆಚ್ಚು ಜನರ ಬೆರಳಚ್ಚುಗಳನ್ನು ಪರೀಕ್ಷಿಸಿತ್ತು.

naanu gauri,ನಾನು ಗೌರಿ,
ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಐಎನ್ಎಸ್ ವಿಕ್ರಾಂತ್ .

ಘಟನೆಯ ನಂತರ ಹೆಚ್ಚುವರಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಹಡಗುಕಟ್ಟೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬಯೋಮೆಟ್ರಿಕ್ ಸ್ಕ್ಯಾನಿಂಗ್ ಮತ್ತು ಬಾಡಿ ಸ್ಕ್ಯಾನಿಂಗ್ ಅನ್ನು ಸಹ ಗೇಟ್‌ಗಳಲ್ಲಿ ಕಡ್ಡಾಯಗೊಳಿಸಲಾಗಿದೆ.

ಕೊಚ್ಚಿನ್ ಶಿಪ್‌ಯಾರ್ಡ್ ಭಾರತದ ಅತಿದೊಡ್ಡ ಹಡಗು ನಿರ್ಮಾಣ ಮತ್ತು ನಿರ್ವಹಣಾ ಕೇಂದ್ರವಾಗಿದೆ.

ಐಎನ್ಎಸ್ ವಿಕ್ರಾಂತ್ ನೌಕೆಯ ವಿನ್ಯಾಸದ ಕೆಲಸವು 1999 ರಲ್ಲಿ ಪ್ರಾರಂಭವಾಗಿ, ನೌಕೆಯನ್ನು ಕಟ್ಟಲು ಫೆಬ್ರವರಿ 2009 ರಲ್ಲಿ ಪ್ರಾರಂಭಿಸಲಾಗಿದೆ. ಈ ಬೃಹತ್ ನೌಕೆಯು ಫೆಬ್ರವರಿ 2021 ರಲ್ಲಿ ಸಮುದ್ರ ಪ್ರಯೋಗಗಳನ್ನು ಪ್ರಾರಂಭಿಸಿ 2023 ರಲ್ಲಿ ಸೇವೆಗೆ ಪ್ರವೇಶಿಸುವ ನಿರೀಕ್ಷೆಯಿದೆ. ಈ ಯೋಜನೆಯ ವೆಚ್ಚವು 20,000 ಕೋಟಿ ರೂ. ಆಗಿದೆ.

ಐಎನ್‌ಎಸ್ ವಿಕ್ರಾಂತ್ ಪೂರ್ಣಗೊಳ್ಳುವುದರೊಂದಿಗೆ, ವಿಮಾನವಾಹಕ ನೌಕೆಗಳ ನಿರ್ಮಾಣದಲ್ಲಿ ಭಾರತವು ಅಮೇರಿಕಾ, ಇಂಗ್ಲೆಂಡ್, ರಷ್ಯಾ, ಫ್ರಾನ್ಸ್ ಮತ್ತು ಚೀನಾ ಶ್ರೇಣಿಯನ್ನು ಸೇರಲಿದೆ.


ಓದಿ: ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...