Homeಮುಖಪುಟಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಬಿಜೆಪಿ ಕುರಿತು ಟೀಕಾಪ್ರಹಾರ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್‌ಎಸ್‌ನಲ್ಲಿ ಹಲವಾರು ಏಕನಾಥ್ ಶಿಂಧೆಗಳು ಇದ್ದಾರೆ” ಎಂದಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್, “ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಏನಾಗುತ್ತದೆ ಎಂದು ಮುಖ್ಯಮಂತ್ರಿ ಕೆಸಿಆರ್‌ಗೆ ಹೇಗೆ ಗೊತ್ತು? ಬಿಜೆಪಿಗೆ ಯಾವುದೇ ತಂತ್ರವಿಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ ನೀವು. ಬಿಜೆಪಿಯ ಬಳಿ ಯಾವುದೇ ತಂತ್ರವಿಲ್ಲ ಎಂದಾದರೆ 18 ರಾಜ್ಯಗಳಲ್ಲಿ ಅಧಿಕಾರದಲ್ಲಿರಲು ಹೇಗೆ ಸಾಧ್ಯ? ಮುಖ್ಯಮಂತ್ರಿ ಬಳಸುತ್ತಿರುವ ಭಾಷೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕೆಸಿಆರ್ ನಡುವೆ ಅಜಗಜಾಂತರ ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನೀವು ದೇಶ್ ಕಿ ನೇತಾ (ದೇಶದ ನಾಯಕ) ಆಗಿದ್ದೀರಾ? ನೀವು ನಿಮ್ಮನ್ನು ಪ್ರಧಾನಿ ಮೋದಿಯೊಂದಿಗೆ ಹೋಲಿಸುತ್ತಿದ್ದೀರಿ. ಪ್ರಧಾನಿ ಮೋದಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನೀವು ನಿಮ್ಮ ಫಾರ್ಮ್‌ಹೌಸ್‌ನಿಂದ ಹೊರಗೆ ಬರುವುದಿಲ್ಲ. ಎಲ್ಲರೂ ನಿಮ್ಮನ್ನು ನೋಡಿ ನಗುತ್ತಿದ್ದಾರೆ” ಎಂದು ಕರೀಂನಗರದ ಸಂಸದರೂ ಆಗಿರುವ ಬಂಡಿ ಸಂಜಯ್ ಟೀಕಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಕೆಸಿಆರ್ ಹೇಳಿಕೆಯನ್ನು ಉಲ್ಲೇಖಿಸಿದ ಬಂಡಿ ಸಂಜಯ್, “ನೀವು ಏಕನಾಥ್ ಶಿಂಧೆ ಬಗ್ಗೆ ಮಾತನಾಡುತ್ತಿದ್ದೀರಿ, ಮೊದಲು ನಿಮ್ಮ ಸ್ವಂತ ಪಕ್ಷವನ್ನು ನೋಡಿ. ಟಿಆರ್‌ಎಸ್‌ನಲ್ಲಿ ಅನೇಕ ಏಕನಾಥ್ ಶಿಂಧೆಗಳಿದ್ದಾರೆ ಎಂದು ನಾನು ಭಾವಿಸುತ್ತೇನೆ. ಏಕನಾಥ್ ಶಿಂಧೆಯಂತಹ ನಾಯಕರು ತಮ್ಮದೇ ಪಕ್ಷದಲ್ಲಿ ಬೆಳೆಯುತ್ತಿದ್ದಾರೆ ಎಂದು ಕೆಸಿಆರ್‌ ಭಯಪಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರ ಪಕ್ಷದಲ್ಲಿ ಯಾರಾದರೂ ಏಕನಾಥ್ ಶಿಂಧೆ ಆಗಬಹುದು, ಅದು ಅವರ ಮಗ ಕೆಟಿಆರ್, ಮಗಳು (ಕೆ.ಕವಿತಾ), ಅಥವಾ ಸೋದರಳಿಯ (ಹರೀಶ್ ರಾವ್) ಆಗಬಹುದು” ಎಂದು ಭವಿಷ್ಯ ನುಡಿದಿದ್ದಾರೆ.

ಕೆಸಿಆರ್ ಅವರು ಭಾನುವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿದ ನಂತರ ಬಿಜೆಪಿ ಪ್ರತಿದಾಳಿ ನಡೆಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾವ್, “ನರೇಂದ್ರ ಮೋದಿ ಸರ್ಕಾರ ಹೋಗಬೇಕು, ಬಿಜೆಪಿಯೇತರ ಸರ್ಕಾರ ಬರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

“ಇಂದಿರಾ ಗಾಂಧಿ ಅವರಿಗೆ ಧನ್ಯವಾದಗಳು, ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವಷ್ಟು ಧೈರ್ಯಶಾಲಿಯಾಗಿದ್ದರು. ಅದು ನೇರವಾಗಿ ಘೋಷಿಸಿದ ತುರ್ತು ಪರಿಸ್ಥಿತಿಯಾಗಿತ್ತು. ಆದರೆ ಇಂದು ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ” ಎಂದು ಕೆಸಿಆರ್‌ ಬೇಸರ ವ್ಯಕ್ತಪಡಿಸಿದ್ದರು.

ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಕುರಿತು ಮಾತನಾಡಿದ್ದ ಕೆಸಿಆರ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಡೆಯನ್ನು ಶ್ಲಾಘಿಸಿದ್ದರು.

“ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಸ್ಟಿಸ್ ಪಾರ್ದಿವಾಲಾ ಅವರಿಗೆ ನಮಸ್ಕರಿಸುತ್ತೇನೆ. ಭಾರತವನ್ನು ಉಳಿಸಲು ದಯವಿಟ್ಟು ಅದೇ ಮನೋಭಾವವನ್ನು ಇಟ್ಟುಕೊಳ್ಳಿ. ನ್ಯಾಯಾಂಗವು ದೇಶವನ್ನು ಈ ದೇಶದ್ರೋಹಿಗಳು, ರಾಕ್ಷಸರು ಮತ್ತು ಸರ್ವಾಧಿಕಾರಿಗಳಿಂದ ರಕ್ಷಿಸಬೇಕಾಗಿದೆ” ಎಂದು ಕೆಸಿಆರ್‌ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...