Homeಮುಖಪುಟಹಿಂದೂ ದೇವಾಲಯಗಳ ಅಡಿಯಲ್ಲಿ ಬೌದ್ಧ ವಿಹಾರಗಳಿವೆ: ಎಸ್‌ಪಿ ನಾಯಕ ಮೌರ್ಯ ಹೇಳಿಕೆ

ಹಿಂದೂ ದೇವಾಲಯಗಳ ಅಡಿಯಲ್ಲಿ ಬೌದ್ಧ ವಿಹಾರಗಳಿವೆ: ಎಸ್‌ಪಿ ನಾಯಕ ಮೌರ್ಯ ಹೇಳಿಕೆ

- Advertisement -
- Advertisement -

ಬಿಜೆಪಿಯು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ, ಜನರು ಶೀಘ್ರದಲ್ಲೇ ಪ್ರತಿ ದೇವಾಲಯದಲ್ಲಿ ಬೌದ್ಧ ವಿಹಾರಗಳನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು ಭಾನುವಾರ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಜುಲೈ 27ರಂದು ಅಲಹಾಬಾದ್ ಹೈಕೋರ್ಟ್ ವಾರಣಾಸಿಯ ಆಗಸ್ಟ್ 3 ರವರೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು. ಈ ವಿಚಾರವಾಗಿಯೇ ಮೌರ್ಯ ಅವರ ಈ ಹೇಳಿಕೆಗಳು ಬಂದಿವೆ.

ಮಸೀದಿಯೊಳಗೆ ಸಮೀಕ್ಷೆ ನಡೆಸುವುದಾದರೆ ಹಿಂದೂ ದೇವಾಲಯದ ಮೊದಲು ಏನಿದೆ ಎಂಬುದನ್ನು ಸಹ ಸಮೀಕ್ಷೆ ಮಾಡಬೇಕು ಎಂದು ಮೌರ್ಯ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

”ಈಗಿನ ಹೆಚ್ಚಿನ ಹಿಂದೂ ದೇವಾಲಯಗಳು ಮಠಗಳು ಅಥವಾ ಕಲಿಕಾ ಕೇಂದ್ರಗಳು ಈ ಹಿಂದೆ ಬೌದ್ಧ ಧಾರ್ಮಿಕ ಸ್ಥಳಗಳಾಗಿದ್ದವು ಎಂದು ನಾನು ನಂಬುತ್ತೇನೆ. ಅವುಗಳನ್ನು ಕೆಡವಿ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ” ಎಂದು ಮೌರ್ಯ ಹೇಳಿದರು.

ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು ಏಳನೇ ಶತಮಾನ ಮತ್ತು ಎಂಟನೇ ಶತಮಾನದ ನಡುವೆ ಬೌದ್ಧ ವಿಹಾರಗಳಾಗಿದ್ದವು ಎಂದು ತೋರಿಸಲು ಪುರಾವೆಗಳಿವೆ. ಆದಾಗ್ಯೂ, ಹಿಂದೂ ವಿದ್ವಾಂಸ ಶಂಕರಾಚಾರ್ಯರು ಅವುಗಳನ್ನು ಹಿಂದೂ ದೇವಾಲಯಗಳಾಗಿ ಪರಿವರ್ತಿಸಿದರು ಎಂದು ಮೌರ್ಯ ಪ್ರತಿಪಾದಿಸಿದರು.

ಬೌದ್ಧ ವಿಹಾರಗಳನ್ನು ನೆಲಸಮಗೊಳಿಸಿ ಈ ಪುರಿಯ ಜಗನ್ನಾಥ ದೇವಾಲಯ, ಶಬರಿಮಲೆಯ ಅಯ್ಯಪ್ಪ ದೇವಾಲಯ ಮತ್ತು ಪಂಢರಪುರದ ವಿಠ್ಠಲ ದೇವಾಲಯಗಳು ಹಿಂದೂ ಧಾರ್ಮಿಕ ಮಂದಿರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮಾಜಿ ಸಚಿವರ ಹೇಳಿಕೆಯಿಂದ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಟೀಕೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೌರ್ಯ, ”ನಿಮ್ಮ ನಂಬಿಕೆ ನಿಮಗೆ ಮುಖ್ಯವಾದರೆ ಅವುಗಳನ್ನು ಅನುಸರಿಸುವವರಿಗೂ ನಂಬಿಕೆಗಳು ಮುಖ್ಯ. ನೀವು ನಿಮ್ಮ ಧರ್ಮದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ನೀವು ಇತರ ಧರ್ಮಗಳ ಬಗ್ಗೆಯೂ ಪರಿಗಣಿಸಬೇಕು” ಎಂದು ಮೌರ್ಯ ಹೇಳಿದ್ದಾರೆ.

”ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ಅವರ ಉದ್ದೇಶವಲ್ಲ, ಆದರೆ ಮಸೀದಿಗಳಲ್ಲಿ ದೇವಾಲಯಗಳನ್ನು ಹುಡಕಬೇಡಿ ಎಂದು ಹೇಳುವುದು ನನ್ನ ಉದ್ದೇಶವಾಗಿದೆ” ಎಂದು ಮೌರ್ಯ ಹೇಳಿದರು.

”ದೇವಾಲಯಗಳ ಮೇಲೆ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂಬ ಸಮರ್ಥನೆಯನ್ನು ಬೆಂಬಲಿಸಲು ಸಾಕಷ್ಟು ಪುರಾವೆಗಳಿಲ್ಲದಿರಬಹುದು, ಆದರೆ ಬೌದ್ಧ ವಿಹಾರಗಳ ಮೇಲೆ ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂದು ತೋರಿಸಲು ಸಾಕಷ್ಟು ಪುರಾವೆಗಳಿವೆ” ಎಂದು ಅವರು ಹೇಳಿದರು.

ಮೌರ್ಯ ಅವರ ಹೇಳಿಕೆಗಳು ಹೊಸ ವಿವಾದಗಳಿಗೆ ಕಾರಣವಾಗಬಹುದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಹೇಳಿದ್ದಾರೆ.

”ಮೌರ್ಯ ಅವರು ಬಿಜೆಪಿ ಸರ್ಕಾರದಲ್ಲಿ ಸುದೀರ್ಘ ಕಾಲ ಸಚಿವರಾಗಿದ್ದಾಗ, ಈ ವಿಷಯದಲ್ಲಿ ಪಕ್ಷ ಮತ್ತು ಸರ್ಕಾರದ ಮೇಲೆ ಏಕೆ ಅಂತಹ ಒತ್ತಡ ಹೇರಲಿಲ್ಲ. ಈಗ ಚುನಾವಣೆಯ ಸಮಯದಲ್ಲಿ ಇಂತಹ ಧಾರ್ಮಿಕ ವಿವಾದವನ್ನು ಸೃಷ್ಟಿಸುವುದು ಅವರ ಮತ್ತು ಸಮಾಜವಾದಿ ಪಕ್ಷದ ಅಸಹ್ಯಕರ ರಾಜಕೀಯವಾಗಿದೆ. ಬೌದ್ಧ ಮತ್ತು ಮುಸ್ಲಿಂ ಸಮಾಜಗಳು ಅವರಿಂದ ದಾರಿ ತಪ್ಪುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಸಿಂಗ್ ಚೌಧರಿ ಅವರು, ”ಮೌರ್ಯ ಅವರ ಹೇಳಿಕೆಗಳು ಹಿಂದೂ ಧರ್ಮವನ್ನು ಅವಮಾನಿಸುತ್ತಿವೆ ಮತ್ತು ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

”ಈ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಬೇಕು ಮತ್ತು ಸಮಾಜವಾದಿ ಪಕ್ಷವು ಅದನ್ನು ಒಪ್ಪುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಚೌಧರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....