ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ನನಗೆ ತಿಳಿದಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ದೇಶದಲ್ಲಿ ಆಯಾ ರಾಮ್-ಗಯಾ ರಾಮ್ ಅವರಂತಹ ಅನೇಕ ಜನರಿದ್ದಾರೆ ಎಂದು ಹೇಳಿದ್ದಾರೆ.
ಮೊದಲು ಅವರು ಮತ್ತು ನಾವು ಒಟ್ಟಿಗೆ ಹೋರಾಡುತ್ತಿದ್ದೆವು, ನಾನು ಲಾಲು ಜಿ ಮತ್ತು ತೇಜಸ್ವಿ ಅವರೊಂದಿಗೆ ಮಾತನಾಡುವಾಗ, ಅವರು ನಿತೀಶ್ ಹೋಗುತ್ತಿದ್ದಾರೆ ಎಂದು ಹೇಳಿದರು, ಅವರು ಉಳಿಯಲು ಬಯಸಿದ್ದರೆ ಅವರು ಉಳಿಯುತ್ತಿದ್ದರು ಆದರೆ ಅವರು ಹೋಗಬೇಕೆಂದು ಬಯಸುತ್ತಾರೆ. ಈ ಮಾಹಿತಿಯನ್ನು ಈಗಾಗಲೇ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ನಮಗೆ ನೀಡಿದ್ದಾರೆ. ಇಂದು ಅದು ನಿಜವಾಯಿತು. ದೇಶದಲ್ಲಿ ಆಯಾ ರಾಮ್-ಗಯಾ ರಾಮ್ ಅವರಂತಹ ಅನೇಕ ಜನರಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್ INDIA ಮೈತ್ರಿಕೂಟದ ನಾಯಕರಲ್ಲಿ ಮುಂಚೂಣಿಯಲ್ಲಿದ್ದರು. ಅವರನ್ನು ಮೈತ್ರಿ ಬಣದ ಸಂಚಾಲಕರನ್ನಾಗಿ ನೇಮಿಸಲಾಗಿತ್ತು. ಇದಲ್ಲದೆ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದರು. ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಹುದ್ದೆಗೆ ಪ್ರಸ್ತಾಪಿಸಿದಾಗ ನಿತೀಶ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ನಿತೀಶ್ ಕುಮಾರ್ ಅವರು ಪ್ರತಿಪಕ್ಷಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಪ್ರಾರಂಭದಲ್ಲಿ ತಮ್ಮ ಪ್ರಯತ್ನಕ್ಕೆ ಅವರು ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿಯ ಜೊತೆ ಭಿನ್ನಾಭಿಪ್ರಾಯಗಳನ್ನು ಎದುರಿಸಿದ್ದರು.
ನಿತೀಶ್ ಕುಮಾರ್ ಬಿಹಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಲ್ಲವೂ ಸರಿಯಿಲ್ಲ ಎಂದು ಹೇಳುವ ಮೂಲಕ ಮಹಾಘಟಬಂಧನ್‌ನ್ನು ಕೊನೆಗೊಳಿಸಿದ್ದಾರೆ. ನಿತೀಶ್ ಕುಮಾರ್ ತಮ್ಮ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ ನಂತರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾಮೈತ್ರಿಕೂಟಕ್ಕೆ ಧಕ್ಕೆ ಉಂಟಾಗಿದೆ. ಈಗಾಗಲೇ ಪ.ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದು, INDIA ಮೈತ್ರಿಕೂಟದಲ್ಲಿ ಬಿರುಕು ಉಂಟಾಗಿದೆ. ಸೀಟು ಹಂಚಿಕೆ ಬಿಕ್ಕಟ್ಟು, ಮೈತ್ರಿಯಲ್ಲಿ ನಿರುತ್ಸಾಹ, ಪ್ರಧಾನಿ ಅಭ್ಯರ್ಥಿ ಕುರಿತು ಒಮ್ಮತವಿಲ್ಲದಿರುವುದು ಸೇರಿದಂತೆ ಹಲವು ವಿಚಾರಗಳು INDIA ಮೈತ್ರಿಕೂಟದಲ್ಲಿ ಬಿರುಕಿಗೆ ಕಾರಣವಾಗಿದೆ.
ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಜೆಪಿ ಭಾನುವಾರ ಅಂಗೀಕರಿಸಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ಜನರ ಕಲ್ಯಾಣಕ್ಕಾಗಿ ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾವನೆಯನ್ನು ಎಲ್ಲಾ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.
ಸಭೆಯಲ್ಲಿ ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ನಿತೀಶ್ ಕುಮಾರ್ ಅವರ ನೂತನ ಎನ್‌ಡಿಎ ಸರಕಾರದಲ್ಲಿ ಬಿಜೆಪಿಯಿಂದ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ ಡಿಸಿಎಂಗಳಾಗಿ ಅಧಿಕಾರವನ್ನು ಸ್ವೀಕರಿಸಲಿದ್ದಾರೆ.
"There are many 'Aya Ram, Gaya Ram' in the country," says @INCIndia President @kharge over @NitishKumar's decision to breakaway from opposition's INDIA bloc.
Says @laluprasadrjd & @yadavtejashwi had flagged this possible fallout https://t.co/eREVwcJItn pic.twitter.com/LZTnPdGEqu— Anusha Ravi Sood (@anusharavi10) January 28, 2024
ಇದನ್ನು ಓದಿ: ಸಾಮಾಜಿಕ ನ್ಯಾಯ ಕಲ್ಪಿಸಲು ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು: ನಾಗರಾಜ್ ಯಾದವ್


