Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್:ಐಪಿಸಿಯಲ್ಲಿ ಹಿಂದೂ ಧರ್ಮ ನಿಂದಿಸುವವರ ವಿರುದ್ಧ ಸೆಕ್ಷನ್ 295 (1), 502 (2) ಅಡಿಯಲ್ಲಿ ಪ್ರಕರಣ...

ಫ್ಯಾಕ್ಟ್‌ಚೆಕ್:ಐಪಿಸಿಯಲ್ಲಿ ಹಿಂದೂ ಧರ್ಮ ನಿಂದಿಸುವವರ ವಿರುದ್ಧ ಸೆಕ್ಷನ್ 295 (1), 502 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗದು. ಏಕೆಂದರೆ ಐಪಿಸಿಯಲ್ಲಿ ಆ ಸೆಕ್ಷನ್‌ಗಳೆ ಇಲ್ಲ!

- Advertisement -
- Advertisement -

ಹಿಂದೂಗಳನ್ನೂ, ಹಿಂದೂ ಧರ್ಮವನ್ನು ನಿಂದಿಸುವವರ ವಿರುದ್ಧ  ಐಪಿಸಿಯ 295 (1) ಮತ್ತು 502 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದು ಶೇರ್‌  ಮಾಡುತ್ತಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಆದರೆ, ಈ 295 (1) ಮತ್ತು 502 (2) ವಿಭಾಗಗಳು ಭಾರತೀಯ ದಂಡ ಸಂಹಿತೆ (IPC) ಯಲ್ಲಿಲ್ಲ.

ಐಪಿಸಿಯ ಸೆಕ್ಷನ್ 295 ಮತ್ತು 295ಎ ಧಾರ್ಮಿಕ ಅಪರಾಧಗಳಿಗೆ ಸಂಬಂಧಿಸಿದೆ. ನಿರ್ದಿಷ್ಟವಾಗಿ ಹಿಂದೂ ಧರ್ಮದ ಬಗ್ಗೆ ಅಲ್ಲದೇ, ಇದು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದೆ.

“ಯಾವುದೇ ಪಂಗಡದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳಗಳನ್ನು ನಾಶಪಡಿಸುವುದು ಅಥವಾ ಅಪವಿತ್ರಗೊಳಿಸುವ ಉದ್ದೇಶವನ್ನು ಹೊಂದಿದ್ದರೆ ” ಸೆಕ್ಷನ್ 295 ಅನ್ವಯಿಸುತ್ತದೆ.

ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

“ಉದ್ದೇಶಪೂರ್ವಕ ಮತ್ತು ದ್ವೇಷಪೂರಿತ ಕಾರ್ಯಗಳಿಂದ ಯಾವುದೇ ಪಂಥದ ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರುವಾಗ”  ಸೆಕ್ಷನ್ 295A ಅನ್ವಯಿಸುತ್ತದೆ.

ಐಪಿಸಿ ಸೆಕ್ಷನ್ 502 ಧರ್ಮಕ್ಕೆ ಸಂಬಂಧಿಸಿದ್ದಲ್ಲ, ಮಾನನಷ್ಟಕ್ಕೆ ಸಂಬಂಧಿಸಿದ್ದು. “ಮಾನಹಾನಿಕರ ವಾದದ್ದನ್ನು  ಮುದ್ರಿತ ಅಥವಾ ಕೆತ್ತಿದ ಯಾವುದಾದರೂ ರೂಪದಲ್ಲಿ ಮಾರಾಟ ಮಾಡುವುದಕ್ಕೆ ಸಂಬಂಧಿಸಿದೆ.

ಒಟ್ಟಾರೆ, ಭಾರತೀಯ ದಂಡ ಸಂಹಿತೆಯಲ್ಲಿ ಯಾವುದೇ 295 (1), 502 (2) ವಿಭಾಗಗಳು ಇಲ್ಲ. IPC ಯ 295 ಮತ್ತು 295A ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ. ವಿಶೇಷವಾಗಿ ಹಿಂದೂ ಧರ್ಮಕ್ಕೆ ಮಾತ್ರ ಅನ್ವಯಿಸುವುದಿಲ್ಲ.

ಪ್ರತಿಪಾದನೆ: ಹಿಂದೂ ಧರ್ಮದ ವಿರುದ್ಧ ಧರ್ಮನಿಂದನೆ ಮಾಡುವವರ ವಿರುದ್ಧ ಐಪಿಸಿಯ 295 (1), 502 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು.

ನಿಜಾಂಶ: ಭಾರತೀಯ ದಂಡ ಸಂಹಿತೆ (IPC) ಯಲ್ಲಿ 295 (1), 502 (2) ವಿಭಾಗಗಳು ಅಸ್ತಿತ್ವದಲ್ಲಿಲ್ಲ. ಐಪಿಸಿಯ ಸೆಕ್ಷನ್ 295 ಮತ್ತು 295ಎ ಧಾರ್ಮಿಕ ಅಪರಾಧಗಳಿಗೆ ಸಂಬಂಧಿಸಿದೆ. ನಿರ್ದಿಷ್ಟವಾಗಿ ಹಿಂದೂ ಧರ್ಮ ಮಾತ್ರವಲ್ಲದೆ, ಇದು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದೆ. ಐಪಿಸಿಯ ಸೆಕ್ಷನ್ 502 ಮಾನನಷ್ಟಕ್ಕೆ ಸಂಬಂಧಿಸಿದ್ದೇ ಹೊರತು ಧರ್ಮದ ಬಗ್ಗೆ ಅಲ್ಲ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...