Homeಮುಖಪುಟಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿರುದ್ಧ, ‘ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ)’ ಯನ್ನು ಕಠಿಣವಾಗಿ ಬಳಸಲಾಗಿಲ್ಲ ಎಂದು ಗೃಹಸಚಿವಾಲಯ ಹೇಳಿದೆ.

- Advertisement -
- Advertisement -

ದೇಶದಲ್ಲಿ ಇಂಟರ್‌ನೆಟ್‌‌ ಬ್ಯಾನ್‌‌ ಬಗ್ಗೆ ಯಾವುದೇ ಕೇಂದ್ರೀಕೃತ ಮಾಹಿತಿಯಿಲ್ಲ ಮತ್ತು ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಯ ಬಗ್ಗೆ ಸರ್ಕಾರವು ರಾಷ್ಟ್ರೀಯ ದತ್ತಾಂಶವನ್ನು ಸಹ ನಿರ್ವಹಿಸುವುದಿಲ್ಲ ಎಂದು ಗೃಹ ಸಚಿವಾಲಯ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದೆ. ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ನಿಯಂತ್ರಿಸುವ ವಿಧಾನದ ಬಗ್ಗೆಗಿನ ವಿವರಗಳನ್ನು ಸಚಿವಾಲಯ ಒದಗಿಸಿದ್ದು, ಇಂಟರ್‌ನೆಟ್‌ ಬ್ಯಾನ್‌ ಮಾಡುವುದರಿಂದ ವದಂತಿಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

“ಇಂಟರ್‌‌ನೆಟ್‌ನಲ್ಲಿ ಮಾಹಿತಿಯು ವೇಗವಾಗಿ ಹರಿಯುತ್ತದೆ ಹಾಗೂ ದುರುಪಯೋಗದ ಸಾಧ್ಯತೆಯು ಇದೆ. ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಂಬಂಧಪಟ್ಟ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಧಿಕಾರಿಗಳು ಟೆಲಿಕಾಂ ಸೇವೆಗಳನ್ನು / ಇಂಟರ್ನೆಟ್ ಬ್ಯಾನ್‌ ಮಾಡುತ್ತಾರೆ” ಎಂದು ಗೃಹ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಸದನಕ್ಕೆ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಕ್ರಿಶ್ಚಿಯನ್ನರ ಮೇಲಿನ ಹಿಂಸಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಯ್, “ಒಂದು ನಿರ್ದಿಷ್ಟ ಸಮುದಾಯಗಳ ವಿರುದ್ಧ ಅಥವಾ ಅವರ ಧಾರ್ಮಿಕ ಸಂಸ್ಥೆಗಳ ಮೇಲಿನ ದಾಳಿಯ ಬಗ್ಗೆ ನಿರ್ದಿಷ್ಟ ಡೇಟಾವನ್ನು ಕೇಂದ್ರೀತವಾಗಿ ನಿರ್ವಹಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಹಿಂದೂ ದೇವಾಲಯಗಳ ಮೇಲಿನ ದಾಳಿಯಲ್ಲಿ ಹಠಾತ್ ಏರಿಕೆ ಕಂಡುಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ಸಾರ್ವಜನಿಕ ಆದೇಶ ಮತ್ತು ಪೊಲೀಸರು ರಾಜ್ಯದ ವಿಷಯವಾಗಿರುವುದರಿಂದ, ಅಪರಾಧ ತಡೆಗಟ್ಟುವಿಕೆ, ಪತ್ತೆ, ನೋಂದಣಿ, ತನಿಖೆ ಮತ್ತು ವಿಚಾರಣೆ ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಅಡಿಯಲ್ಲಿ ಬರುತ್ತದೆ” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಯನ್ನು ಕಠಿಣವಾಗಿ ಬಳಸಲಾಗಿಲ್ಲ ಎಂದು ಗೃಹಸಚಿವಾಲಯ ತಿಳಿಸಿದೆ. ಆದಾಗ್ಯೂ, ಸಚಿವಾಲಯ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ 2017 ರಿಂದ ಯುಎಪಿಎ ಮತ್ತು ದೇಶದ್ರೋಹ ಕಾನೂನುಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳು ಸ್ಥಿರವಾಗಿ ಏರಿಕೆಯಾಗಿದೆ. 2015 ರಿಂದ ಯುಎಪಿಎ ಅಡಿಯಲ್ಲಿ 5,128 ಮತ್ತು ದೇಶದ್ರೋಹದ ಆರೋಪದ ಅಡಿಯಲ್ಲಿ 229 ಪ್ರಕರಣಗಳು ಭಾರತದಾದ್ಯಂತ ದಾಖಲಾಗಿವೆ.

ರಾಜ್ಯಸಭೆಯ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ, ಕೇಂದ್ರ ಗೃಹ ಸಚಿವ ಜಿ. ಕಿಶನ್ ರೆಡ್ಡಿ, ಇಂಟರ್‌ನೆಟ್‌‌ನಿಂದ ಎದುರಾಗುವ ಸವಾಲುಗಳು ಹಲವು, ಅದು ಅದರ ವಿಶಾಲತೆ ಮತ್ತು ಗಡಿ ರಹಿತವಾಗಿ ಹರಿಯುತ್ತದೆ. ಅಲ್ಲದೆ ಇಂಟರ್‌ನೆಟ್‌ನಲ್ಲಿನ ಮಾಹಿತಿಯು ವೇಗವಾಗಿ ಹರಿಯುತ್ತದೆ ಮತ್ತು ಇದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯು ಇದೆ ಎಂದು ಹೇಳಿದ್ದಾರೆ.

“ಉದ್ವಿಗ್ನತೆ ಮತ್ತು ಗಲಭೆಗಳ ಸಮಯದಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಸರ್ಕಾರದ ಅಧಿಕಾರಿಗಳು, ‘ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ತಿದ್ದುಪಡಿ) ನಿಯಮಗಳು-2020’ ರಲ್ಲಿ ವ್ಯಾಖ್ಯಾನಿಸಲಾದ ಕಾರ್ಯವಿಧಾನಗಳ ಪ್ರಕಾರ ಟೆಲಿಕಾಂ ಸೇವೆಗಳನ್ನು ಸ್ಥಗಿತಗೊಳಿಸುವುದು ಮತ್ತು ಇಂಟರ್ನೆಟ್ ಬ್ಯಾನ್ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ವಿಡಿಯೋ ನೋಡಿ>> ರೈತರಿಗೆ ಸಬ್ಸಿಡಿ ಎಂಬುದು ಸುಳ್ಳು. ಬದಲಿಗೆ ರೈತರೇ ಸರ್ಕಾರಕ್ಕೆ ಸಬ್ಸಿಡಿ ನೀಡುತ್ತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...