Homeಮುಖಪುಟಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ ಅಜಿತ್‌ ಮೋಹನ್‌ ತಿಳಿಸಿದ್ದು, ಇದನ್ನು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಸಂಸದೀಯ ಸಮಿತಿಗೆ ಬುಧವಾರ ತಿಳಿಸಿದ್ದಾರೆ.

ಈ ಹಿಂದೆ ಜೂನ್‌ ತಿಂಗಳಲ್ಲಿ ದೆಹಲಿಯ ಚರ್ಚ್‌ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊವನ್ನು ಬಜರಂಗದಳವು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದಿದ್ದರೂ ಸಹ ಬಜರಂಗದಳವನ್ನು ನಿಷೇಧಿಸಲು ಫೇಸ್‌ಬುಕ್‌ ಮುಂದಾಗಿರಲಿಲ್ಲ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಅಜಿತ್‌ ಮೋಹನ್‌ ಅವರಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

“ಬಜರಂಗದಳದ ಪೋಸ್ಟ್‌ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು ನಿಷೇಧಿಸಿಸುವ ಅನಿವಾರ್ಯತೆ ಫೇಸ್‌ಬುಕ್‌ ಇಂಡಿಯಾ ಕಂಪನಿಗೆ ಇರಲಿಲ್ಲ” ಎಂದು ಅಜಿತ್‌ ಮೋಹನ್‌ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...