Homeಕರ್ನಾಟಕಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ...

ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸಿಜೆಐಗೆ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ: ಬಿ.ಕೆ ಹರಿಪ್ರಸಾದ್

- Advertisement -
- Advertisement -

ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೇ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಕೀಲನೊಬ್ಬರ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್, ಯಾವ ಸಿದ್ದಾಂತ ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದಿಯೋ, ಯಾವ ಸಿದ್ದಾಂತ ದೇಶದ ಭಾವೈಕ್ಯತೆಗೆ ಧಕ್ಕೆ ತರುತ್ತಿದೆಯೋ, ಯಾವ ಸಿದ್ದಾಂತ ಸಂವಿಧಾನದ ಮೇಲೆಯೇ ದಾಳಿ ನಡೆಸುತ್ತಿದಿಯೋ, ಯಾವ ಸಿದ್ದಾಂತ ದೇಶದಲ್ಲಿ ಭಯೋತ್ಪದಾನೆಯನ್ನು ಹುಟ್ಟು ಹಾಕುತ್ತಿದೆಯೋ, ಅದೇ ಸಿದ್ದಾಂತವೇ ಇಂದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆಯುವಂತೆ ಮಾಡಿರುವುದು ಸ್ಪಷ್ಟ ಎಂದಿದ್ದಾರೆ.

ದೇಶದ ಸರ್ವೋಚ್ಛ ನ್ಯಾಯಾಧೀಶರ ಮೇಲೆ ಶೂ ಎಸೆದಿರುವ ದುಷ್ಕರ್ಮಿಯ ಪರದೆಯ ಹಿಂದಿನ ಸೂತ್ರದಾರರು ಯಾರು? ದೇಶದ ಅಮಾಯಕ ಜನರ ತಲೆಯಲ್ಲಿ ಮನುಷ್ಯ ವಿರೋಧಿ ಮನಸ್ಥಿತಿ ತುಂಬುತ್ತಿರುವವವರು ಯಾರು? ಅದಕ್ಕೆ ಮೂಲ ಕಾರಣವೇ ಸಮಾಜದಲ್ಲಿ ಆರ್.ಎಸ್.ಎಸ್ ಬಿತ್ತುತ್ತಿರುವ ದ್ವೇಷ….! ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್ ಸಿದ್ದಾಂತದ ವಿರೋಧಿಗಳಾದ ಸಂವಿಧಾನದ ರಕ್ಷಕರು, ಪ್ರಜಾಪ್ರಭುತ್ವವಾದಿಗಳು, ಸಮಾನತಾವಾದಿಗಳು, ಜಾತ್ಯಾತೀತವಾದಿಗಳನ್ನು ಇಲ್ಲವಾಗಿಸುವ ವಿಷಕಾರಿ,ದ್ವೇಷಮಯ ವಾತಾವರಣವನ್ನು ಸಮಾಜದಲ್ಲಿ ಆರ್‌ಎಸ್‌ಎಸ್ ಹುಟ್ಟು ಹಾಕಿದೆ. ಇಂತಹ ವಿಚ್ಛದ್ರಕಾರಿ ಶಕ್ತಿಗಳ ವಿರುದ್ಧ ದೇಶ ಒಟ್ಟಾಗಿ ಮುಖಾಮುಖಿಯಾಗಬೇಕಿದೆ ಎಂದಿದ್ದಾರೆ.

ದಲಿತ ಸಮುದಾಯವನ್ನು ಪ್ರತಿನಿಧಿಸುವ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ಮೇಲಿನ ದಾಳಿಯನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಸಿಜೆಐ ಗವಾಯಿಯವರ ಬೆನ್ನಿಗೆ ದೇಶದ ಪ್ರಜ್ಞಾವಂತ ಜನರು ಗಟ್ಟಿಯಾಗಿ ನಿಲ್ಲಬೇಕಿದೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ ಮನುವಾದಿಗಳ ಜಾತಿ ಅಸಮಾನತೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...