Homeಮುಖಪುಟಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

- Advertisement -
- Advertisement -

ಹಸಿರು ಪಟಾಕಿ ಸೇರಿದಂತೆ ಎಲ್ಲಾ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುವ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಪಟಾಕಿಗಳನ್ನು ಬಳಸಬಹುದು ಎಂದಿದೆ.

ಪಶ್ಚಿಮ ಬಂಗಾಳದಲ್ಲಿ ಈ ವಾರದಿಂದ ಕಾಳಿ ಪೂಜೆ, ದೀಪಾವಳಿ ಮತ್ತು ಇತರ ಹಬ್ಬಗಳು ಪ್ರಾರಂಭವಾಗಲಿದ್ದು ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಸಲಾಗುತ್ತದೆ. ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ವಾಯು ಮಾಲಿನ್ಯ ಅಧಿಕಗೊಂಡ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಎಂದು ಕಲ್ಕತ್ತಾ ಹೈಕೋರ್ಟ್‌ ಪಟಾಕಿ ನಿಷೇಧಿಸಿತ್ತು.

“ಪಟಾಕಿಯನ್ನು ಸಂಪೂರ್ಣ ನಿಷೇಧಿಸಲು ಸಾಧ್ಯವಿಲ್ಲ. ‌ಆದರೆ, ಪಟಾಕಿಯ ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ” ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಇದನ್ನೂ ಓದಿ: ರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಅಜಯ್ ರಸ್ತೋಗಿ ಅವರು ನಿಷೇಧಿತ ಪಟಾಕಿ ಮತ್ತು ಅದಕ್ಕೆ ಸಂಬಂಧಿತ ವಸ್ತುಗಳನ್ನು ರಾಜ್ಯದಲ್ಲಿ ಆಮದು ಮಾಡಿಕೊಳ್ಳುವುದಿಲ್ಲ ಎಂಬುದನ್ನು  ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸಿದ್ದಾರೆ.

ಕಳೆದ ಶುಕ್ರವಾರ ರಾಜ್ಯದಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟ, ಬಳಕೆ ಮತ್ತು ಖರೀದಿಯನ್ನು ನಿಷೇಧಿಸಿ ಕಲ್ಕತ್ತಾ ಹೈಕೋರ್ಟ್‌ ಆದೇಶ ನೀಡಿದೆ. ಇದರ ವಿರುದ್ಧ ತಯಾರಕರು ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಚಾರಣೆ ನಡೆಸಿದರು.

ಪಟಾಕಿ ತಯಾರಕರ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್, “ಹಸಿರು ಪಟಾಕಿಗಳ ಬಗ್ಗೆ ಸುಪ್ರೀಂ ಕೋರ್ಟ್‌ನ ಮೂರು ಆದೇಶಗಳು ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಎರಡು ಆದೇಶಗಳ ಹೊರತಾಗಿಯೂ, ಕಲ್ಕತ್ತಾ ಹೈಕೋರ್ಟ್ ಹಸಿರು ಪಟಾಕಿಗಳನ್ನು ನಿಷೇಧಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಉತ್ತಮವಾಗಿದ್ದರೆ, ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಗಳು ಹೇಳುತ್ತವೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಈ ವರ್ಷ ಕಾಳಿ ಪೂಜೆ, ದೀಪಾವಳಿ ಆಚರಣೆಗಳು, ಛತ್ ಪೂಜೆ, ಜಗಧಾತ್ರಿ ಪೂಜೆ, ಗುರುನಾನಕ್ ಅವರ ಜನ್ಮದಿನ ಮತ್ತು ಕ್ರಿಸ್ಮಸ್ ಮತ್ತು ಹೊಸ ವರ್ಷದ ಮುನ್ನಾದಿನದ ಆಚರಣೆಗಳಲ್ಲಿ ಯಾವುದೇ ರೀತಿಯ ಪಟಾಕಿಗಳ ಬಳಕೆ, ಪ್ರದರ್ಶನ ಅಥವಾ ಪಟಾಕಿಗಳನ್ನು ಸಿಡಿಸದಂತೆ ರಾಜ್ಯವು ಖಚಿತಪಡಿಸಿಕೊಳ್ಳಬೇಕು.” ಎಂದು ಹೈಕೋರ್ಟ್ ಆದೇಶ ನೀಡಿತ್ತು.


ಇದನ್ನೂ ಓದಿ: ಹರಿಯಾಣ: ದೆಹಲಿ ಸಮೀಪದ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ, ಬಳಕೆ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...