Homeಕರ್ನಾಟಕಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ನಡೆದಿದೆ: ಬೊಮ್ಮಾಯಿ

ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ನಡೆದಿದೆ: ಬೊಮ್ಮಾಯಿ

- Advertisement -
- Advertisement -

‘ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರನ್ನು ಮುಗಿಸುತ್ತಾರೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಮುಗಿಸಿದ್ದರು. ಈಗ ವರುಣದಲ್ಲಿ ಮುಗಿಸಲು ಹೇಗೆ ಹುನ್ನಾರ ಮಾಡಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿದೆ” ಎಂದಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಹೇಗೆ ಮುಗಿಸಿದ್ದಾರೆ ಗೊತ್ತಿಲ್ವಾ? ಈ ರೀತಿಯ ಮಾತುಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ” ಎಂದು ಟೀಕಿಸಿದ್ದಾರೆ.

ಶಿವಕುಮಾರ್‌ ಅವರಿಗೆ ಈಗ ಮಾತನಾಡಲು ಯಾವುದೇ ವಿಚಾರ ಇಲ್ಲ. ಹೀಗಾಗಿ ನಾಮಪತ್ರ ತಿರಸ್ಕರಿಸಲು ಪ್ರಭಾವ ಬೀರಿದ್ದರು ಎಂದು ಸುಳ್ಳು ಹೇಳುತ್ತಿದ್ದಾರೆ. ಶುಕ್ರವಾರವೇ ಎಲ್ಲ ಪ್ರಕ್ರಿಯೆ ಮುಗಿದಿದೆ. ಯಾರ ನಾಮಪತ್ರವೂ ತಿರಸ್ಕೃತವಾಗಿಲ್ಲ. ಅವರ ಆರೋಪ ಸುಳ್ಳು ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಂಗ್ರೆಸ್‌ ಗುಂಡಿಯಲ್ಲಿ ನೀರೇ ಇಲ್ಲ. ಮೊದಲು ಅದನ್ನು ನೋಡಿಕೊಳ್ಳಲಿ. 2013ರಲ್ಲಿ ಲಿಂಗಾಯತರು ವಿಭಜನೆಯಾಗಿರಲಿಲ್ಲ. ಹೊಸ ರಾಜಕೀಯ ಪಕ್ಷ ಅಸ್ತಿತ್ವಕ್ಕೆ ಬಂದಿತ್ತು. ಲಿಂಗಾಯತರು ಜಾಗೃತರಾಗಿದ್ದಾರೆ. ಶಿವಕುಮಾರ್‌ ಅವರ ಹೇಳಿಕೆಗಳಿಂದ ಮತ್ತಷ್ಟು ಗಟ್ಟಿಯಾಗಿದ್ದಾರೆ” ಎಂದಿದ್ದಾರೆ.

“ನನ್ನ ನಾಮಪತ್ರ ತಿರಸ್ಕೃತ ಆಗಬೇಕೆಂದು ಬಿಜೆಪಿ, ಮುಖ್ಯಮಂತ್ರಿ ಕಚೇರಿ ಮತ್ತು ಕಾನೂನು ಘಟಕ ಷಡ್ಯಂತ್ರ ರೂಪಿಸಿದ್ದವು” ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ನಾಮಪತ್ರ ಜೊತೆ ಸಲ್ಲಿಸಿದ ನನ್ನ ಪ್ರಮಾಣಪತ್ರ ಅತಿ ಹೆಚ್ಚು ಡೌನ್‌ಲೋಡ್ ಆಗಿದೆ. ನಾಮಪತ್ರ ಪರಿಶೀಲನೆಯ ವೇಳೆ ದೊಡ್ಡ ಕಾನೂನು ತಂಡ ಕನಕಪುರದಲ್ಲಿ‌ ನಿಂತುಕೊಂಡಿತ್ತು. ನನ್ನ ನಾಮಪತ್ರವನ್ನು ತಿರಸ್ಕೃತಗೊಳಿಸಬೇಕು ಎನ್ನುವುದು ಉದ್ದೇಶವಾಗಿತ್ತು’ ಎಂದು ದೂರಿದ್ದರು.

‘ನನ್ನ ಮಾತ್ರವಲ್ಲದೆ, ಕಾಂಗ್ರೆಸ್ ಪಕ್ಷದ ಹಲವು ಅಭ್ಯರ್ಥಿಗಳ ನಾಮಪತ್ರದ ಜೊತೆಗೆ ಸಲ್ಲಿಸಿದ ಪ್ರಮಾಣಪತ್ರವನ್ನು ಡೌನ್‌ಲೋಡ್‌ ಮಾಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು’ ಎಂದು ಮನವಿ ಮಾಡಿದ್ದರು.

“ಸವದತ್ತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೇರಿದಂತೆ ಹಲವು ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರದಲ್ಲಿ ಸಮಸ್ಯೆ ಇದೆ. ನನ್ನ ನಾಮಪತ್ರ ತಿರಸ್ಕೃತಗೊಳಿಸಲು ಪ್ರಯತ್ನ ಮಾಡಿದರು. ನನಗೆ ಹೀಗಾದರೆ, ಸಾಮಾನ್ಯ ಅಭ್ಯರ್ಥಿಗಳ ಕತೆ ಏನು? ಚುನಾವಣಾ ಆಯೋಗ ಯಾವುದೇ ಒತ್ತಡಕ್ಕೆ ಮಣಿಯಬಾರದು. ಮುಖ್ಯಮಂತ್ರಿ ಕಚೇರಿ ಮೂಲಕವೇ ಡೌನ್‌ಲೋಡ್ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಕಚೇರಿಯ ದೂರವಾಣಿ ಮಾಹಿತಿ ಪಡೆದುಕೊಂಡು ತನಿಖೆ ‌ಮಾಡಬೇಕು” ಎಂದು ಒತ್ತಾಯಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...