Homeಕರ್ನಾಟಕಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

“ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ”

- Advertisement -
- Advertisement -

“ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ಮೂರನೇ ಸಂಚು ನಡೆದಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಮುಲ್ ಜತೆ ನಂದಿನಿ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಹೇಳಿಕೆ ನೀಡಿದ್ದು ಮೊದಲ ಸಂಚಾಗಿತ್ತು. ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಎರಡನೇ ಸಂಚಾಗಿತ್ತು. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ” ಎಂದು ಅವರು ಆರೋಪಿಸಿದ್ದಾರೆ.

ಅಮುಲ್‌ ಹಾಲು, ಮೊಸರು ಮಾರಾಟಕ್ಕಾಗಿ ನಂದಿನಿ ಹಾಲು, ಮೊಸರಿನ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿದ್ದಾರೆ.

“ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್‌ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್‌ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ” ಎಂದು ದೂರಿದ್ದಾರೆ.

“ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದಿದ್ದಾರೆ.

“ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್‌ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ” ಎಂದು ಟೀಕಿಸಿದ್ದಾರೆ.

“ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್‌.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್‌.ಡಿ.ರೇವಣ್ಣ ಅವರು ಕೆ.ಎಂ.ಎಫ್‌. ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್‌ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಷ್ಟೇ ಅಲ್ಲ;‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್‌ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ” ಎಂದು ಎಚ್ಚರಿಸಿದೆ.

“ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದು ಕರೆ ನೀಡಿದ್ದಾರೆ.

“ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್‌ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಮನವಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...