Homeಮುಖಪುಟರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ್ದು ಸರ್ವಾಧಿಕಾರಿ ನಡೆ”

- Advertisement -
- Advertisement -

“ಕಾಂಗ್ರೆಸ್ ನಾಯಕ, ಮಯನಾಡ್ ಸಂಸದ ರಾಹುಲ್‌ ಗಾಂಧಿಯವರ ವಿರುದ್ಧ ಸೂರತ್‌ ಕೋರ್ಟ್ ನೀಡಿದ ತೀರ್ಪಿನಲ್ಲೇ ತಪ್ಪಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್‌ ಅವರನ್ನು ಲೋಕಸಭಾ ಸೆಕ್ರೆಟರಿಯೇಟ್‌ ಅನರ್ಹಗೊಳಿಸಿರುವ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಅವರು, “ಕ್ರಿಮಿನಲ್ ಮಾನನಷ್ಟ ಎಂಬುದನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕಿದೆ. ಬ್ರಿಟಿಷರ ಕಾಲದ ಕಾನೂನು ಇದಾಗಿದೆ. ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣದಲ್ಲಿ ಕ್ರಿಮಿನಲ್‌ ಮಾನನಷ್ಟ ಅಂಶ ಒಳಗೊಂಡಿಲ್ಲ” ಎಂದು ತಿಳಿಸಿದರು. (‘ಮೋದಿ’ ಸರ್‌ನೇಮ್‌ ಬಳಸಿದ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ 2019ರಲ್ಲಿ ದಾಖಲಾಗಿತ್ತು.)

“ಹೀಗಾಗಿ ಸೂರತ್‌ ಕೋರ್ಟ್ ನೀಡಿರುವ ತೀರ್ಪು ತಪ್ಪಾಗಿದೆ. ಅಲ್ಲದೆ ಮೂವತ್ತು ದಿನಗಳ ಕಾಲ ತೀರ್ಪಿಗೆ ತಡೆಯನ್ನೂ ನೀಡಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವಾಗ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವುದು ಅಪ್ರಜಾಸತ್ತಾತ್ಮಕ ಮತ್ತು ಸಂವಿಧಾನ ವಿರೋಧಿ ನಡೆ” ಎಂದು ಆತಂಕ ವ್ಯಕ್ತಪಡಿಸಿದರು.

“ವಿರೋಧ ಪಕ್ಷಗಳನ್ನು ಸದೆಬಡಿಯುವ ನೀತಿ ಇದಾಗಿದೆ. ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಗಳಷ್ಟೇ ವಿರೋಧ ಪಕ್ಷಗಳು ಮುಖ್ಯವಾಗಿವೆ. ವಿರೋಧ ಪಕ್ಷಗಳೇ ಇರಬಾರದು ಎಂಬಂತೆ ಈ ನಿಲುವು ತೆಗೆದುಕೊಳ್ಳಲಾಗಿದೆ. ಇದು ಸರ್ವಾಧಿಕಾರದ ಲಕ್ಷಣವಾಗಿದೆ” ಎಂದು ಎಚ್ಚರಿಸಿದರು.

“ಒಂದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ, ಕಾನೂನು ಸುವ್ಯವಸ್ಥೆ ಇರುವ ದೇಶದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

ರಾಹುಲ್‌ಗೆ ವಿಧಿಸಿದ ಶಿಕ್ಷೆ ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ – ಅರವಿಂದ್ ನಾರಾಯಣ್

ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದು ಮಾನನಷ್ಟ ಅಪರಾಧದ ಮಿತಿಯಿಂದ ಹೊರಗಿರುವಂತಿದೆ. IPC ಯ ಸೆಕ್ಷನ್ 499 ರ ಪ್ರಕಾರ, ಮಾನನಷ್ಟವು ತನ್ನ ಖ್ಯಾತಿಗೆ ಧಕ್ಕೆಯಾಗಿದೆ ಎಂದು ಭಾವಿಸುವ ವ್ಯಕ್ತಿಗೆ ಮಾತ್ರ ಸಂಬಂಧಿಸಿದೆ. ಹಾಗಾಗಿ ಮಾನನಷ್ಟ ಮೊಕದ್ದಮೆ ಹೂಡಲು ಸಮರ್ಥರೆಂದರೆ ನರೇಂದ್ರ ಮೋದಿ, ನೀರವ್ ಮೋದಿ ಅಥವಾ ಲಲಿತ್ ಮೋದಿ ಮಾತ್ರ. ಮೋದಿ ಹೆಸರಿನ ಯಾವುದೇ ಮೂರನೇ ವ್ಯಕ್ತಿಗೆ ಮಾನನಷ್ಟ ಅಪರಾಧವನ್ನು ಆವಾಹಿಸಿಕೊಳ್ಳುವ ಅರ್ಹತೆ ಇಲ್ಲ. ಏಕೆಂದರೆ ಮೋದಿ ಉಪನಾಮವಿರುವ ಎಲ್ಲಾ ವ್ಯಕ್ತಿಗಳನ್ನು ಮಾನನಷ್ಟಗೊಳಿಸುವ ಯಾವುದೇ ಸಾಮಾನ್ಯ ಅಪರಾಧವಿಲ್ಲ ಎಂದು ಕಾನೂನು ತಜ್ಞರು ಮತ್ತು ವಕೀಲರಾದ ಅರವಿಂದ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿಯೊಂದಿಗೆ ಮಾತನಾಡಿದ ಅವರು “ಕಪಿಲ್ ಸಿಬಲ್ ವಿಲಕ್ಷಣ ತೀರ್ಪು ಎಂದು ವಿವರಿಸಿದ ಸೂರತ್ ನ್ಯಾಯಾಲಯದ ತೀರ್ಪು ಬಂದ ಒಂದು ದಿನದೊಳಗೆ ರಾಹುಲ್ ಅವರನ್ನು ಅನರ್ಹಗೊಳಿಸಲು ಲೋಕಸಭೆ ಸೆಕ್ರೆಟರಿಯೇಟ್ ಮುಂದಾಗಿರುವುದು ಅಸಹಜವಾದ ಆತುರದ ನಡೆಯಾಗಿದೆ” ಎಂದಿದ್ದಾರೆ.

ಸೆಕ್ರೆಟರಿಯೇಟ್‌ನ ಈ ಕ್ರಮವು ದುರುದ್ದೇಶದಿಂದ ಕೂಡಿದೆ ಎಂದು ತೋರುತ್ತದೆ, ವಿಶೇಷವಾಗಿ ಸೂರತ್ ನ್ಯಾಯಾಲಯವು ಸ್ವತಃ ತನ್ನ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಅವಕಾಶವನ್ನು ನೀಡಿದೆ. ಅವರು ಮೇಲ್ಮನವಿ ಸಲ್ಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಸಂದರ್ಭದಲ್ಲಿ ಜನಪ್ರತಿನಿಧಿ ಕಾಯಿದೆಯಡಿಯಲ್ಲಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲು ಕಾನೂನು ಅಧಿಕಾರಗಳ ಅನಿಯಂತ್ರಿತ ಶೈಲಿಯ ಆತುರದ ಅಧಿಕಾರದ ಚಲಾವಣೆಯಾಗಿದೆ ಎಂದಿದ್ದಾರೆ.

ಮೇಲಿನ ಕೋರ್ಟುಗಳು ಮಾನನಷ್ಟ ನಿಬಂಧನೆಯ ನಿಯಮಗಳೊಳಗೆ ಯಾವುದೇ ಅಪರಾಧವನ್ನು ಮಾಡಿಲ್ಲ ಎಂಬುದನ್ನು ಗಮನಿಸಿ ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡುತ್ತವೆ ಎಂದು ಆಶಿಸುತ್ತೇನೆ ಎಂದು ಅರವಿಂದ್ ನಾರಾಯಣ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಸ್ಥಾನ ಅನರ್ಹ: ಕಿಡಿಕಾರಿದ ಕಾಂಗ್ರೆಸ್, ಪ್ರತಿಪಕ್ಷಗಳು

ಕ್ರಿಮಿನಲ್ ಮಾನನಷ್ಟ ಕಾಯ್ದೆಯೇ ಅನುಚಿತ: ಎಚ್.ಎನ್.ನಾಗಮೋಹನದಾಸ್‌

“ಭಾರತ ದೇಶದ ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಲು ಮೂರು ಮಾರ್ಗಗಳನ್ನು ಬ್ರಿಟಿಷರು ಅನುಸರಿಸಿದರು. ಮೊದಲನೇ ಮಾರ್ಗ- ಜನರ ಏಕತೆಯನ್ನು ಧರ್ಮ, ಜಾತಿ, ಭಾಷೆ, ಪ್ರದೇಶಗಳ ಆಧಾರದ ಮೇಲೆ ಒಡೆದು ಆಳುವುದು. ಎರಡನೇ ಅಂಶ- ಕ್ರೌರ್ಯ, ಹಿಂಸೆಯನ್ನು ನೀಡಿ ಜನರಲ್ಲಿ ಭಯ ಹುಟ್ಟಿಸುವುದು. ಮೂರನೇ ಅಂಶ- ದಮನಕಾರಿ ಬರ್ಬರ ಕಾಯ್ದೆಗಳನ್ನು ಜಾರಿಗೊಳಿಸುವುದು. ಈ ಮೂರನೇ ಅಂಶದಲ್ಲಿ ದೇಶದ್ರೋಹ, ನ್ಯಾಯಾಂಗ ನಿಂದನೆ, ಕ್ರಿಮಿನಲ್ ಮಾನನಷ್ಟ ಕಾನೂನುಗಳು ಸೇರಿವೆ. ಈ ಮೂರು ಕಾಯ್ದೆಗಳು ಮತ್ತು ಮೂರು ಕ್ರಮಗಳು ಬ್ರಿಟಿಷರು ಅನುಸರಿಸಿರುವ ನೀತಿಗಳಾಗಿವೆ” ಎಂದು ಎಚ್.ಎನ್.ನಾಗಮೋಹನದಾಸ್‌ ಅಭಿಪ್ರಾಯಪಟ್ಟರು.

“ಕ್ರಿಮಿನಲ್ ಮಾನನಷ್ಟ ಕಾಯ್ದೆಯನ್ನು ಈವರೆಗೆ ಸದ್ಬಳಕೆ ಮಾಡಿಕೊಂಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡಿದ್ದೇ ಹೆಚ್ಚು. ಸಿವಿಲ್‌ ಮಾನನಷ್ಟ ದಾಖಲಿಸಲು ಅವಕಾಶವಿದೆ. ಈ ಮೂಲಕ ವ್ಯಕ್ತಿಯೊಬ್ಬ ತನಗಾದ ನಷ್ಟವನ್ನು ವಸೂಲಿ ಮಾಡಿಕೊಳ್ಳಬೇಕು. ಇದಕ್ಕೆ ಕ್ರಿಮಿನಲ್‌ ಆಯಾಮವನ್ನು ಕೊಡುವ ಅವಶ್ಯಕತೆ ಏನಿದೆ? ಕ್ರಿಮಿನಲ್‌ ಆಯಾಮ ನೀಡಿದ್ದು ಬ್ರಿಟಿಷರ ಆಡಳಿತ. ಅದು ದಬ್ಬಾಳಿಕೆ ಮತ್ತು ದೌರ್ಜನ್ಯ ನೀತಿ. ಈ ಕಾನೂನನ್ನು ಮುಂದುವರಿಸಿಕೊಂಡು ಬರುವುದು ಸರಿಯಲ್ಲ” ಎಂದು ಹೇಳಿದರು.

“ಸಿವಿಲ್ ಮಾನನಷ್ಟ ಕಾನೂನು ಇರಲಿ, ಅದಕ್ಕೆ ಯಾರ ವಿರೋಧವೂ ಇಲ್ಲ; ಆದರೆ ಕ್ರಿಮಿನಲ್‌ ಮಾನನಷ್ಟದ ಅವಶ್ಯಕತೆ ಇಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...