Homeಮುಖಪುಟಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ ಕಂಪನಿಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿರುವ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

’ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ’ ಎಂದು ಎಚ್ಚರಿಸಿದ್ದಾರೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

’ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು ‘ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ..? ಎಂದು ಆನಂದ್‌ ಸಿಂಗ್‌ ವಿರುದ್ಧ ಕಿಡಿಕಾರಿದ್ದಾರೆ.

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ..? ಎಂದು ಪ್ರಶ್ನಿಸಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ’ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

’ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ’ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ.


ಇದನ್ನೂ ಓದಿ: ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶವನ್ನೇ ಕೊಳ್ಳೆ ಹೊಡೆಯುತ್ತಿರುವವರಿಗೆ ಮೂರು ಸಾವಿರ ಎಕರೆ ನಗಣ್ಯ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...