Homeಮುಖಪುಟ'ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲವಿದೆ..'; ಶಂಭು ಗಡಿಯಲ್ಲಿ ವಿನೇಶಾ ಫೋಗಟ್ ವಾಗ್ದಾನ

‘ರೈತರ ಪ್ರತಿಭಟನೆಗೆ ಸಂಪೂರ್ಣ ಬೆಂಬಲವಿದೆ..’; ಶಂಭು ಗಡಿಯಲ್ಲಿ ವಿನೇಶಾ ಫೋಗಟ್ ವಾಗ್ದಾನ

- Advertisement -
- Advertisement -

ಹರಿಯಾಣ ವಿಧಾನಸಭೆ ಚುನಾವಣೆಗೆ ಒಂದು ತಿಂಗಳ ಬಾಕಿ ಇರುವಾಗ, ಒಲಿಂಪಿಕ್ ಕುಸ್ತಿಪಟು ವಿನೇಶಾ ಫೋಗಟ್ ಶನಿವಾರ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ತನ್ನ ನಿರಂತರ ಬೆಂಬಲ ನೀಡುವ ವಾಗ್ದಾನ ನೀಡಿದ್ದಾರೆ. ಅವರು ಅಲ್ಲಿ ರೈತರ ಆಂದೋಲನದ 200ನೇ ದಿನದ ಆಚರಣೆಯಲ್ಲಿ ಭಾಗವಹಿಸಿದ್ದರು. “ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ” ಎಂದು ಅವರು ಹೇಳಿದರು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಗೆ ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ರೈತರು ‘ದೆಹಲಿ ಚಲೋ’ ಆಂದೋಲನ ನಡೆಸುತ್ತಿದ್ದು, ದೆಹಲಿಗೆ ಆಗಮಿಸುತ್ತಿದ್ದ ಅವರನ್ನು ಶಂಭು ಗಡಿಯಲ್ಲಿ ತಡೆಯಲಾಗಿದೆ. 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ನಿಂದ ಅನರ್ಹಗೊಂಡ ಫೋಗಟ್ ಅವರನ್ನು ರೈತರು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ ಎಂದು ಒತ್ತಿ ಹೇಳಿದ ವಿನೇಶಾ, “ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ರೈತರ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ನೀವೆಲ್ಲರೂ ಇಷ್ಟು ದಿನ ಪ್ರತಿಭಟನೆ ನಡೆಸುತ್ತಿರುವುದನ್ನು ನೋಡಲು ನೋವಾಗುತ್ತದೆ. ಕೆಲವೊಮ್ಮೆ ನಾವು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗದೆ ಅಸಹಾಯಕರಾಗುತ್ತೇವೆ. ನಾವು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತೇವೆ. ಆದರೆ, ನಮ್ಮ ಸ್ವಂತ ಕುಟುಂಬಕ್ಕಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು ನಾನು ಸರ್ಕಾರವನ್ನು ಕೋರುತ್ತೇನೆ” ಎಂದು ಅವರು ಹೇಳಿದರು.

ರಾಜಕೀಯ ರಂಗಕ್ಕೆ ಬರುತ್ತೀರಾ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ವಿನೇಶಾ ಪ್ರತಿಕ್ರಿಯಿಸಲು ನಿರಾಕರಿಸಿದರು. “ನನಗೆ ರಾಜಕೀಯದ ಬಗ್ಗೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ; ಮಹಾರಾಷ್ಟ್ರ| ಗೋಮಾಂಸ ಸಾಗಾಟ ಆರೋಪ : ರೈಲಿನಲ್ಲಿ ಹಿರಿಯ ವ್ಯಕ್ತಿ ಮೇಲೆ ಸಹ ಪ್ರಯಾಣಿಕರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...