Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

- Advertisement -
- Advertisement -

ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫೆಬ್ರವರಿ 19ರಂದು ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಹುಕೋನ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯ ವಿಧಾನಸಭೆಯಲ್ಲಿ ಎಐಎಡಿಎಂಕೆ ಜೊತೆಗಿದ್ದ ವಿರೋಧ ಪಕ್ಷಗಳಾದ ಎಐಎಡಿಎಂಕೆ ಜೊತೆಗಿದ್ದ ಬಿಜೆಪಿ, ಡಾ ಎಸ್ ರಾಮದಾಸ್ ನೇತೃತ್ವದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಡಿಎಂಡಿಕೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ.

ಈ ಎಲ್ಲಾ ಪಕ್ಷಗಳು ಸ್ಥಳೀಯ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ- ಕಾಂಗ್ರೆಸ್‌ ಮೈತ್ರಿಕೂಟವನ್ನು ಸ್ವತಂತ್ರವಾಗಿ ಎದುರಿಸಲು ಸಜ್ಜಾಗಿವೆ.

ಡಿಎಂಕೆ ತನ್ನ ಮಿತ್ರಪಕ್ಷಗಳ ಜೊತೆಗೇ ಸ್ಪರ್ಧಿಸುತ್ತಿದೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪಕ್ಷವು ಮತ್ತದೇ ಜಯವನ್ನು ಪುನರಾವರ್ತಿಸುವ ಭರವಸೆಯೊಂದಿಗೆ ತನ್ನ ಮಿತ್ರಪಕ್ಷಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ರಾಜ್ಯ ರಾಜಧಾನಿ ಚೆನ್ನೈನ ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಒಟ್ಟು 200 ವಾರ್ಡ್‌ಗಳ ಪೈಕಿ 165 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿರುವ ಡಿಎಂಕೆ, ಮಿತ್ರ ಪಕ್ಷಗಳೊಂದಿಗಿನ ಸೀಟು ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಉಳಿದ 35 ಸ್ಥಾನಗಳನ್ನು ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಎಡಪಕ್ಷಗಳಿಗೆ ಹಂಚಿದೆ.

ಕೊಯಮತ್ತೂರಿನಲ್ಲಿಯೂ ಎಡಪಕ್ಷಗಳಿಗೆ ಅಲ್ಪಸ್ವಲ್ಪ ಸೀಟುಗಳನ್ನು ಡಿಎಂಕೆ ಹಂಚಿದೆ. ಇದರಿಂದಾಗಿ ಅಸಮಾಧಾನಗೊಂಡಿದ್ದ ಎಡಪಕ್ಷಗಳು ಡಿಎಂಕೆಯ ಮತ್ತೊಂದು ಮಿತ್ರ ಪಕ್ಷ ಕೆಎಂಡಿಕೆ ಬೆಂಬಲ ಪಡೆದು ಕಣ್ಣಂಪಾಳ್ಯಂ ಪಟ್ಟಣ ಪಂಚಾಯತ್‌ನ 15 ವಾರ್ಡ್‌ಗಳ ಪೈಕಿ 11 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ.

ಚೆನ್ನೈ ಪಾಲಿಕೆಯ 200 ವಾರ್ಡ್‌ಗಳಲ್ಲಿಯೂ ಬಿಜೆಪಿ ಸ್ಪರ್ಧಿಸುತ್ತಿದೆ. ಎಐಎಡಿಎಂಕೆ ಮೈತ್ರಿಯಲ್ಲಿ ಸೀಟು ಹಂಚಿಕೆ ಮಾತುಕತೆಯ ವೇಳೆ ಬಿಜೆಪಿಗೆ ನೀರೀಕ್ಷಿಸಿದ್ದಷ್ಟು ಸೀಟುಗಳನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದ ಕಾರಣ ಮೈತ್ರಿಯಲ್ಲಿ ಬಿರುಕು ಮೂಡಿದೆ. ಹೀಗಾಗಿ, ಬಿಜೆಪಿ ಚೆನ್ನೈ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ಪರ್ಧಿಸಲು ಮುಂದಾಗಿದೆ. ಅದೇ ರೀತಿಯಲ್ಲಿ ಉಳಿದ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ: ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಮಂಗಳವಾರ ಮಡಿಪಕ್ಕಂನಲ್ಲಿ ಹತ್ಯೆಗೀಡಾದ ಡಿಎಂಕೆ ಪಕ್ಷದ ಪದಾಧಿಕಾರಿ ಸೆಲ್ವಂ ಅವರ ಪತ್ನಿ ಸಮೀನಾ ಸೆಲ್ವಂ ಅವರನ್ನು ಚೆನ್ನೈ ಪಾಲಿಕೆಯ ಮಡಿಪಕ್ಕಂ ವಾರ್ಡ್ (ನಂ.188)ನಿಂದ ಡಿಎಂಕೆ ಕಣಕ್ಕಿಳಿಸಿದೆ.

ಮಾಜಿ ರಾಜ್ಯ ಸಚಿವ ಪರುತಿ ಇಳಂವಝುತಿ ಅವರ ಪುತ್ರ, ಡಿಎಂಕೆ ಯುವ ಘಟಕದ ಸದಸ್ಯ ಪರುತಿ ಇಳಮಸುರುತಿ ಅವರನ್ನು ಚೆನ್ನೈ ಪಾಲಿಕೆಯ ವಾರ್ಡ್ ನಂ.99ರಿಂದ ಡಿಎಂಕೆ ಕಣಕ್ಕಿಳಿಸಿದೆ. ಅವರು ಎಐಎಡಿಎಂಕೆಯಿಂದ ಕಣಕ್ಕಿಳಿದಿರುವ ಮಾಜಿ ಐಎಎಸ್ ಅಧಿಕಾರಿ ಶಿವಕಾಮಿ ಅವರನ್ನು ಎದುರಿಸಲಿದ್ದಾರೆ.

ಚೆನ್ನೈ ಕಾರ್ಪೊರೇಷನ್‌ನಲ್ಲಿ ಎಲ್ಲಾ ಸಮುದಾಯಗಳ ಸದಸ್ಯರಿಗೆ ಅವಕಾಶ ಕಲ್ಪಿಸಲು ತಮ್ಮ ಪಕ್ಷವು ಹೆಚ್ಚಿನ ಪ್ರಯತ್ನಗಳನ್ನು ಮಾಡಿದೆ ಎಂದು ಡಿಎಂಕೆ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಡಿಎಂಕೆ ಸೇರಿದಂತೆ ಎಐಎಡಿಎಂಕೆ ಮತ್ತು ಬಿಜೆಪಿ ಈ ಚುನಾವಣೆಗೆ ತೃತೀಯಲಿಂಗಿಗಳನ್ನೂ ಕಣಕ್ಕಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

ಡಿಎಂಕೆಯ ಸದಸ್ಯೆ, ತೃತೀಯಲಿಂಗಿ ಆರ್ ಗಂಗಾ ಅವರು ವೆಲ್ಲೂರಿನ ವಾರ್ಡ್ 37 ರಿಂದ ಸ್ಪರ್ಧಿಸಿದರೆ, ಎಐಎಡಿಎಂಕೆಯ ಜಯದೇವಿ ವೆಲ್ಲೂರಿನ ವಾರ್ಡ್ 112ರಿಂದ ಮತ್ತು ಬಿಜೆಪಿಯ ರಾಜಮ್ಮ ಅವರು ತಿರುವಿ ಕಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇತರ ಪಕ್ಷಗಳಾದ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ, ನಟ-ನಿರ್ದೇಶಕ ಸೀಮಾನ್ ಅವರ ನಾಮ್ ತಮಿಳರ್ ಕಚ್ಚಿ ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಕೂಡ ಕಣದಲ್ಲಿವೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ 200 ವಾರ್ಡ್‌ಗಳಲ್ಲಿ 16 ಸ್ಥಾನಗಳು ಪರಿಶಿಷ್ಟ ಜಾತಿ (ಸಾಮಾನ್ಯ) ಮತ್ತು 16 ಸ್ಥಾನಗಳು ಎಸ್‌ಸಿ (ಮಹಿಳೆ) ಅಭ್ಯರ್ಥಿಗಳಿಗೆ ಮೀಸಲಾಗಿದ್ದು, 84 ಮಹಿಳೆಯರಿಗೆ (ಸಾಮಾನ್ಯ) ಮೀಸಲಾಗಿದೆ. 21 ಕಾರ್ಪೋರೇಷನ್‌ಗಳು, 138 ಪುರಸಭೆಗಳು, 490 ಪಟ್ಟಣ ಪಂಚಾಯಿತಿಗಳು ಮತ್ತು 649 ನಗರ ಸ್ಥಳೀಯ ಸಂಸ್ಥೆಗಳ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಫೆಬ್ರವರಿ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಫೆಬ್ರವರಿ 19ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 22 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...