Homeಮುಖಪುಟಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಎದುರಿಸಲು ಕಾಂಗ್ರೆಸ್ ಹೊರತುಪಡಿಸಿ ವಿರೋಧ ಪಕ್ಷಗಳ ಒಕ್ಕೂಟ ಸಾಧ್ಯವಿಲ್ಲ ಎಂದು ಸಂಸದ ಮತ್ತು ಶಿವಸೇನಯ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ಬಳಿಕೆ ಅವರ ಈ ಹೇಳಿಕೆ ಬಂದಿದೆ.

ಕಳೆದ ಕೆಲವು ದಿನಗಳಿಂದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಯುಪಿಎ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದರು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿ ಮೈತ್ರಿಕೂಟದ ಮಹಾವಿಕಾಸ್ ಅಘಾಡಿ ಅಧಿಕಾರದಲ್ಲಿದ್ದು ಎನ್‌ಸಿಪಿ ಮುಖಂಡ ಶರದ್ ಪವಾರ್‌ ಕೂಡ ಮಮತಾ ಬ್ಯಾನರ್ಜಿ ಜೊತೆಗಿನ ಸಭೆ ನಂತರ ಅವರಿಗೆ ದನಿಗೂಡಿಸಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ಶಿವಸೇನೆಯ ಸಂಜಯ್ ರಾವತ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ನಾವು ರಾಜಕೀಯ ಬೆಳವಣಿಗೆಗಳ ಕುರಿತು ಬಹಳ ದೀರ್ಘ ಸಮಯ ಚರ್ಚಿಸಿದ್ದೇವೆ. ವಿರೋಧ ಪಕ್ಷಗಳ ಒಗ್ಗಟ್ಟಿನ ಕುರಿತು ಮಾತನಾಡಿದ್ದೇವೆ. ನಾವು (ಶಿವಸೇನೆ) ಯಾವಾಗಲೂ ವಿರೋಧ ಪಕ್ಷಗಳ ಮೈತ್ರಿಯಲ್ಲಿ, ಕಾಂಗ್ರೆಸ್ ಇಲ್ಲದೆ ಅದು ಸಾಧ್ಯವಿಲ್ಲ ಎಂಬ ನಿಲುವಿಗೆ ಬದ್ಧರಾಗಿದ್ದೇವೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

2024ರ ಚುನಾವಣೆಗೆ ವಿರೋಧ ಪಕ್ಷಗಳನ್ನು ಒಟ್ಟುಸೇರಿಸುವ ಕೆಲಸ ಆಗಬೇಕಿದೆ. ಈ ಕುರಿತು ರಾಹುಲ್ ಗಾಂಧಿಯವರು ಬಹಿರಂಗವಾಗಿ ಒಗ್ಗೂಡಿಸುವ ಕೆಲಸಕ್ಕೆ ಮುನ್ನುಗ್ಗಬೇಕೆಂದು ತಿಳಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

2024ರಲ್ಲಿ ಹಲವಾರು ವಿರೋಧ ಪಕ್ಷಗಳ ಒಕ್ಕೂಟಗಳಿದ್ದರೆ ಜನರಿಗೆ ಪರ್ಯಾಯ ಅನಿಸುವುದಿಲ್ಲ. ಆದ್ದರಿಂದ, ಕಾಂಗ್ರೆಸ್ ಜೊತೆಗಿನ ಒಕ್ಕೂಟವು ಐಕ್ಯತೆಯನ್ನು ಖಚಿತಪಡಿಸುತ್ತದೆ. ಕಾಂಗ್ರೆಸ್ ಇಲ್ಲದೆ ಐಕ್ಯತೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಈ ವಿರೋಧ ಪಕ್ಷಗಳ ಒಕ್ಕೂಟವನ್ನು ಯಾರು ಮುನ್ನಡೆಸಬೇಕು ಎಂಬ ಪ್ರಶ್ನೆಗೆ ಈಗಲೇ ಉತ್ತರಿಸಲು ಸಾಧ್ಯವಿಲ್ಲ. ಮೊದಲು ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು. ನಂತರ ಕೂತು ತೀರ್ಮಾನ ಮಾಡೋಣ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...