Homeರಾಷ್ಟ್ರೀಯದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ:...

ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ಅವರ ಹೇಳಿಕೆ ತಿರುಚಿ ಬರೆದ ‘ಇಂಡಿಯಾ ಟುಡೆ’!

- Advertisement -
- Advertisement -

ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ, ಇವೆರೆಡೂ ಒಂದೇ ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರು ಪ್ರತಿಪಾದಿಸಿದ್ದಾರೆ.

ಅವರು ತನ್ನ ಮುಂಬರುವ ‘ವಿರಾಟ ಪರ್ವಂ’ ಚಿತ್ರದ ಬಗ್ಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡುತ್ತಾ, ಮುಸ್ಲಿಂ ಎಂಬ ಕಾರಣಕ್ಕೆ ನಡೆದ ಗುಂಪು ಹತ್ಯೆಯ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಯಿ ಪಲ್ಲವಿ ಅವರು ರಾಣಾ ದಗ್ಗುಬಾಟಿ ಅವರೊಂದಿಗೆ ತೆರೆ ಹಂಚಿಕೊಂಡಿರುವ ‘ವಿರಾಟ ಪರ್ವಂ’ ಚಿತ್ರವು ಜೂನ್ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂಬರುವ ಚಿತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಸಾಯಿ ಪಲ್ಲವಿ ಅವರಿಗೆ ರಾಜಕೀಯ ಒಲವಿನ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸುತ್ತಾ ಅವರು, “ತಾನು ಸೈದ್ಧಾಂತಿಕವಾಗಿ ತಟಸ್ಥೆಯಾಗಿದ್ದು, ನಾನು ಬೆಳೆದ ವಾತಾವರಣ ಅದೇ ರೀತಿ ಇತ್ತು” ಎಂದು ಹೇಳಿದ್ದಾರೆ. ಎಡಪಂಥೀಯ ಅಥವಾ ಬಪಂಥೀಯರಲ್ಲಿ, ಯಾರು ಸರಿ ಯಾರು ತಪ್ಪು ಎಂದು ಹೇಳಲಾರೆ, ನಾವು ಒಳ್ಳೆಯವರಾಗಬೇಕು ಎಂದು ಅವರು ಹೇಳಿದ್ದಾರೆ.

“ನಾನು ತಟಸ್ಥ ವಾತಾವರಣದಲ್ಲಿ ಬೆಳೆದಿದ್ದೇನೆ. ನಾನು ಎಡಪಂಥೀಯ ಮತ್ತು ಬಲಪಂಥೀಯರ ಬಗ್ಗೆ ಕೇಳಿದ್ದೇನೆ. ಆದರೆ, ಯಾರು ಸರಿ, ಯಾರು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ದಿ ಕಾಶ್ಮೀರಿ ಫೈಲ್ಸ್‌ ಚಿತ್ರವನ್ನೇ ನೋಡಿ, ಪಂಡಿತರನ್ನು ಹೇಗೆ ಕೊಂದರು ಎನ್ನುವುದನ್ನು ಅದು ತೋರಿಸುತ್ತದೆ. ಇತ್ತೀಚೆಗೆ ಕೊರೊನಾ ಸಮಯದಲ್ಲಿ ದನ ಸಾಗಿಸುತ್ತಿದ್ದರು. ಅದರ ಡ್ರೈವರ್‌ ಮುಸ್ಲಿಂ ಆಗಿದ್ದರು ಎಂಬ ಕಾರಣಕ್ಕೆ ಕೊಂದ ಘಟನೆ ನಡೆದಿತ್ತು. ಆ ವ್ಯಕ್ತಿಯನ್ನು ಕೊಂದ ಬಳಿಕ ದಾಳಿಕೋರರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಕಾಶ್ಮೀರದಲ್ಲಿ ನಡೆದದ್ದಕ್ಕೂ ಇತ್ತೀಚೆಗೆ ನಡೆದದ್ದಕ್ಕೂ ವ್ಯತ್ಯಾಸವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

“ತನ್ನ ಕುಟುಂಬವು ತನಗೆ ಒಳ್ಳೆಯ ವ್ಯಕ್ತಿಯಾಗಲು ಕಲಿಸಿದೆ. ನಾವು ತುಳಿತಕ್ಕೊಳಗಾದವರನ್ನು ರಕ್ಷಿಸಬೇಕು. ಅವರ ನಿಲುವು ಮುಖ್ಯವಲ್ಲ, ನೀವು ಒಳ್ಳೆಯ ಮನುಷ್ಯನಾಗಿದ್ದರೆ ಸಾಕು” ಎಂದು ಸಾಯಿ ಪಲ್ಲವಿ ಅವರು ಹೇಳಿದ್ದಾರೆ.

ಸಾಯಿ ಪಲ್ಲವಿ ಅವರ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋವು ಕಾರಣಕ್ಕೆ ಮುಸ್ಲಿಮರ ಮೇಲೆ ನಡೆಯುತ್ತಿರುವ ಗುಂಪುಹತ್ಯೆಯನ್ನು ಒಂದೇ ಎಂದು ಹೇಳಿದ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯರು ಅವರ ಮೇಲೆ ದಾಳಿಯನ್ನೂ ಮಾಡುತ್ತಿದ್ದಾರೆ. ಜೊತೆಗೆ ಅವರು ‘ದನಕಳ್ಳಸಾಗಾಣಿಕೆ’ ಮಾಡುವವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರ ಹೇಳಿಕೆಯನ್ನು ತಿರುಚಿ ಅವರ ಮೇಲೆ ದಾಳಿ ಮಾಡಲಾಗುತ್ತಿದೆ.

ಇಂಗ್ಲಿಷ್‌ ಸುದ್ದಿ ವಾಹಿನಿ ಇಂಡಿಯಾ ಟುಡೇ ಕೂಡಾ, ಅವರ ಹೇಳಿಕೆಯನ್ನು ತಿರುಚಿ, “ಕಾಶ್ಮೀರ ಹತ್ಯಾಕಾಂಡ ಮತ್ತು ‘ದನ ಕಳ್ಳ ಸಾಗಾಣಿಕೆ’ ಮಾಡಿದ್ದಕ್ಕೆ ಮಾಡಿದ ಹತ್ಯೆ, ಈ ಎರಡೂ ಅಪರಾಧಗಳು ಒಂದೇ ಎಂದು ನಟಿ ಸಾಯಿ ಪಲ್ಲವಿ ಹೇಳಿದ್ದಾರೆ” ಎಂಬ ಹೆಡ್‌ಲೈನ್‌ನಲ್ಲಿ ಸುದ್ದಿ ಮಾಡಿದೆ.

ಇಂಡಿಯಾ ಟುಡೆ ವರದಿ

ವಾಸ್ತವದಲ್ಲಿ ಸಾಯಿ ಪಲ್ಲವಿ ಅವರು ‘ದನ ಸಾಗಾಣಿಕೆ’ ಎಂಬ ಪದವನ್ನಷ್ಟೆ ಬಳಸಿದ್ದಾರೆ. ‘ದನ ಕಳ್ಳಸಾಗಾಣಿಕೆ’ ಎಂದು ಅವರು ಹೇಳಿಯೆ ಇಲ್ಲ. ಆದರೆ ಬಲಪಂಥೀಯರು ಅವರ ಹೇಳಿಕೆಯನ್ನು ತಿರುಚಿ ಮುಸ್ಲಿಮರ ಮೇಲೆ ನಡೆಯುತ್ತಿರುವ ‘ಗುಂಪು ಹತ್ಯೆಯನ್ನು’ ಸಮರ್ಥಿಸಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...