Homeಕರ್ನಾಟಕದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

- Advertisement -
- Advertisement -

“ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಇಂದು ನಡೆದ ‘ಸಂವಿಧಾನ ಸಂರಕ್ಷಿಸಿ ಮನುಸ್ಮೃತಿ ಹಿಮ್ಮೆಟ್ಟಿಸೋಣ’ ಜಾಗೃತಿ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, “ಮನುವಾದದ ಕುರಿತು ನಮ್ಮ ವೇದಿಕೆಗಳಲ್ಲಿ ಹೆಚ್ಚು ಚರ್ಚೆ ಮಾಡಿಲ್ಲ.. ಆದಿವಾಸಿಗಳು, ಆರ್ಯರು, ದ್ರಾವಿಡರ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಮನುಸ್ಮೃತಿ ಏನು ಹೇಳುತ್ತಿದೆ ಎಂಬ ಬಗ್ಗೆ ನಾವು ಮಾತನಾಡುತ್ತಿಲ್ಲ, ಅದರಲ್ಲಿ ಶೂದ್ರರಿಗೆ ಯಾವ ಸ್ಥಾನಮಾನ ಇದೆ ಎಂಬುದರ ಕುರಿತು ನಾವು ಚರ್ಚೆ ಮಾಡಬೇಕು” ಎಂದು ದಸಂಸ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

“ಆರ್‌ಎಸ್‌ಎಸ್‌ ಕುರಿತು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ಸಾಕಷ್ಟು ಮಾತನಾಡಿದ್ದಾರೆ. ಆರ್‌ಎಸ್‌ಎಸ್‌ ನೋಂದಣಿ ಮಾಡಿಸಿಕೊಳ್ಳದೆ, ಲಕ್ಷಾಂತರ ರೂಪಾಯಿ ದೇಣೆಗೆ ಪಡೆಯುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು. ಅವರನ್ನು ಓರ್ವ ಕೆಟ್ಟ ಪದಗಳಿಂದ ನಿಂದಿಸಿದ್ದನ್ನು ನಾನು ಗಮನಿಸಿದ್ದೇನೆ. ನಮ್ಮ ಯಾವ ನಾಯಕರೂ ಇದಕ್ಕೆ ಸರಿಯಾಗಿ ಪ್ರತಿಕ್ರಿಯೆ ಕೊಡಲಿಲ್ಲ. ಖರ್ಗೆ ಅವರ ಪ್ರತಿಕ್ರಿಯೆ ಸರಿಯಾಗಿದೆ ಎಂಬ ಕಾರಣಕ್ಕೆ ನಾನೂ ಸಾರ್ವಜನಿಕವಾಗಿ ಸಮರ್ಥನೆ ಮಾಡಿಕೊಂಡಿದ್ದೇನೆ. ಅದಕ್ಕಾಗಿ ಪ್ರಶ್ನೆಗಳನ್ನೂ ಎದುರಿಸಿದ್ದೇನೆ” ಎಂದರು.

“ದಲಿತ ಸಮುದಾಯಕ್ಕೆ ಅಪಾಯ ಎದುರಾದಾಗ ಧೈರ್ಯವಾಗಿ ಮಾತನಾಡುವುದೇ ನಿಜವಾದ ನಾಯಕತ್ವ, ಅಧಿಕಾರ ಅಥವಾ ಇನ್ಯಾವುದಾದರೂ ಆಸೆಯಿಂದ ಮಾತನಾಡದೇ ಸುಮ್ಮನಿರುವುದೂ ಕೂಡ ಮನುವಾದಕ್ಕೆ ಸಮವಾಗುತ್ತದೆ. ಸಂಘಪರಿವಾರಕ್ಕೆ ತಿರುಗೇಟು ನೀಡಬೇಕು ಎಂಬ ಕಾರಣಕ್ಕೆ ನಾನು ಎರಡು ದಿನಗಳ ಕಾಲ ಮನುಸ್ಮೃತಿಯನ್ನು ಅಧ್ಯಯನ ಮಾಡಿ, ಅದರಲ್ಲಿ ಸುಮಾರು 25 ಅಂಶಗಳನ್ನು ಪಟ್ಟಿ ಮಾಡಿದ್ದೇನೆ. ಮನುಸ್ಮೃತಿಯಲ್ಲಿರುವ ಹುನ್ನಾರವನ್ನು ನಾವು ಅರ್ಥ ಮಾಡಿಕೊಳ್ಳದೆ ಇರುವುದರಿಂದಲೇ, ಇಂದು ಜಾತಿಜಾತಿ ಎಂದು ನಮ್ಮೊಳಗೆ ಜಗಳ ಮಾಡಿಕೊಳ್ಳುತ್ತಿದ್ದೇವೆ. ಮನುಸ್ಮೃತಿ ಬರೆದವನು ಚಿತ್ಪಾವನ ಬ್ರಾಹ್ಮಣ ಸಮುದಾಯಕ್ಕೆ ಸೇರಿದವನು, ಈ ಬಗ್ಗೆ ನಮ್ಮಲ್ಲಿ ಎಷ್ಟು ಜನಕ್ಕೆ ಗೊತ್ತಿದೆ” ಎಂದು ಪ್ರಶ್ನಿಸಿದರು.

ಮೋದಿಯಿಂದ ದಲಿತರಿಗೆ ಪರೋಕ್ಷ ಎಚ್ಚರಿಕೆ

“ನವೆಂಬರ್ 26 ರ ಸಂವಿಧಾನ ಸಮರ್ಪಣಾ ದಿನದಿಂದು ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಹಾರಿಸಿದರು. ಈ ಮೂಲಕ, ನಾವು ಸಂವಿಧಾನವನ್ನು ಧಿಕ್ಕರಿಸುತ್ತೇವೆ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಆದರೆ, ಈ ಬಗ್ಗೆ ನಮ್ಮಲ್ಲಿ ಯಾರ ರಕ್ತವೂ ಕುದಿಯುತ್ತಿಲ್ಲ ಎಂಬುದೇ ಬೇಸರದ ವಿಷಯ. ಡಿಸೆಂಬರ್ 6 ರಂದೇ, ಬಾಬಾ ಸಾಹೇಬರ ಪರಿನಿಬ್ಬಾಣ ದಿನದಂದು ಅವರು ಬಾಬ್ರಿ ಮಸೀದಿ ಕೆಡವಿದ್ದರು. ಸಂಘಪರಿವಾರದವರು ಹಿಂದೂ ಸಮುದಾಯದ ಹೆಸರಿನಲ್ಲಿ ಬಾಬ್ರಿ ಮಸೀದಿ ಹೊಡೆದರು. ಅವರ ಈ ಹುನ್ನಾರ ಮತ್ತು ಮುಂದೆ ಬರುವ ಅಪಾಯವನ್ನು ನಾವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದು ಎಚ್ಚರಿಕೆ ನೀಡಿದರು.

“ಇಂದು ರಾಜ್ಯದಲ್ಲಿ ಮೀಸಲಾತಿ ಹೆಸರಿನಲ್ಲಿ ಹುನ್ನಾರ, ಒಳ ಮೀಸಲಾತಿ ವಿಚಾರದಲ್ಲಿ ಕುತಂತ್ರ ನಡೆಯುತ್ತಿದೆ. 2012ರ ವರೆಗೆ ಸಂಘಪರಿವಾರದವರು ಒಳಮೀಸಲಾತಿ ವಿಚಾರವಾಗಿ ಮಾತನಾಡೇ ಇಲ್ಲ. ರಾಜ್ಯದ ಹೊಲೆ-ಮಾದಿಗರು ಈವರೆಗೆ ಕಿತ್ತಾಡಿಲ್ಲ. ಇಡೀ ಒಳಮೀಸಲಾತಿಯ ಹೋರಾಟದ ಶಕ್ತಿ ದಲಿತ ಚಳವಳಿ, ಒಳಮೀಸಲಾತಿ ಆಯೋಗ ರಚನೆ ಆಗುವುದಕ್ಕೂ ದಲಿತ ಚಳವಳಿಯೇ ಕಾರಣ. ಆಯೋಗ ರಚನೆಯಾಗಿ ವರದಿ ಬಂದ ನಂತರ ಸಂಘಪರಿವಾರ ಪ್ರವೇಶ ಪಡೆಯಿತು. ನಮ್ಮಲ್ಲಿ ಕೆಲವರು ಬಾಯಿ ಮಾತಿಗೆ ಮಾತ್ರ ಅಂಬೇಡ್ಕರ್, ಜೈಭೀಮ್ ಮತ್ತು ಬಿ.ಕೃಷ್ಣಪ್ಪ ಹೆಸರು ಹೇಳುವವರಿದ್ದಾರೆ. ಅವರು ಸಂಘಪರಿವಾರದ ವಿರುದ್ಧ ಅಂದು ಮಾತನಾಡಲೇ ಇಲ್ಲ. ಅವರು ಅಂದು ಮಾತನಾಡದ ಕಾರಣಕ್ಕೆ ಇಂದು ವಾದಿರಾಜ್ ಎಂಬ ಸಂಘಪರಿವಾದವನೊಬ್ಬ ಹೊಲೆಮಾದಿಗರ ನಡುವೆ ಬೆಂಕಿ ಹಚ್ಚುತ್ತಿದ್ದಾನೆ. ಭೋವಿ-ಲಂಬಾಣಿಗಳು ಮತ್ತು ಅಲೆಮಾರಿಗಳ ನಡುವೆ ಒಡಕು ಮೂಡಿಸುತ್ತಾ, ದಲಿತ ಸಮುದಾಯದ 101 ಜಾತಿಗಳ ಒಗ್ಗಟ್ಟು ಮುರಿಯುವ ಕೆಲಸ ಮಾಡುತ್ತಿದ್ದಾನೆ” ಎಂದು ಆಕ್ರೋಶ ಹೊರಹಾಕಿದರು.

ಜಾತಿ-ಉಪಜಾತಿಯ ಅಮಲಿನಲ್ಲಿ ದಲಿತ ಚಳವಳಿ

“ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನ್ನಾಗಿ ಮಾಡಿದೆ. ನಮ್ಲಲ್ಲಿ ಹೊಲೆಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಸಮುದಾಯಗಳನ್ನೂ ಒಳಗೊಂಡಿದೆ. ರಾಯಚೂರಿನಲ್ಲಿ ಲಂಬಾಣಿಗಳಿಗೆ ಮನೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹೋರಾಟ ಮಾಡಿ ಹಕ್ಕುಪತ್ರ ಕೊಡಿಸಿದ್ದೇವೆ. ಕುಂಬಾರ ಶೇಷಗಿರಿಯಪ್ಪ, ಅನುಸೂಯಮ್ಮ ಅವರ ಪರವಾಗಿ ಹೋರಾಟ ಮಾಡಿದೆ. ಮಂಡಲ್ ಕಮಿಷನ್ ಜಾರಿಯಾಗಬೇಕು ಎಂದು ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಚಿನ್ನಪ್ಪ ರೆಡ್ಡಿಯನ್ನು ಕರೆಸಿ ಹೋರಾಟ ಮಾಡಿದ್ದು ಇದೇ ದಲಿತ ಚಳವಳಿ. ಶೋಷಿತರ ಪರವಾಗಿ ಹೋರಾಟ ಮಾಡಿದ ಮಾದರಿ ಚಳವಳಿಗೆ ಜಾತಿ-ಉಪಜಾತಿಯ ಅಮಲು ಸೇರಿಕೊಂಡಿದೆ. ದಲಿತ ನಾಯಕರು ಜಾತಿಯ ಸಂಕೋಲೆಗೆ ಸಿಲುಕಿಕೊಂಡು ಈ ಸಮುದಾಯಗಳನ್ನು ಒಟ್ಟುಗೂಡಿಸದೇ ಇರುವುದು ದುರಂತ. ಈ ಬಗ್ಗೆ ತಿಳಿದಿರುವ ಸಂಘಪರಿವಾರ ಇಂದು ಒಳಮೀಸಲಾತಿ ವಿಚಾರದಲ್ಲಿ ಕೈಯಾಡಿಸುತ್ತಿದೆ” ಎಂದು ಅವರು ಬೇಸರ ಹೊರಹಾಕಿದರು.

“ಬಾಬಾ ಸಾಹೇಬರು ಮತ್ತು ಬುದ್ಧನ ಬಗ್ಗೆ ಮಾತನಾಡುವ ಎಲ್ಲ ದಲಿತ ನಾಯಕರು ಒಳಮೀಸಲಾತಿ ಪರವಾಗಿ ಮಾತನಾಡಬೇಕು. ಏಕೆಂದರೆ, ಇದೇ ಸಹೋದರತ್ವ, ಹಂಚಿಕೊಂಡು ತಿನ್ನುವ ತತ್ವ. ಹಂಚಿಕೊಂಡು ತಿನ್ನುವುದೇ ಮಾನವಧರ್ಮ, ಇದೇ ಸಂವಿಧಾನ. ನಾವು ಈ ಕೆಲಸವನ್ನು ತುರ್ತಾಗಿ ಮಾಡಲೇಬೇಕಿದೆ. ನಮ್ಮಲ್ಲಿರುವ ಹಿರಿಯ ದಲಿತ ನಾಯಕರನ್ನು ಈ ಬಗ್ಗೆ ನಾವು ಪ್ರಶ್ನೆ ಮಾಡಬೇಕಿದೆ. ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ಒಂದು ವರ್ಷಗಳ ಕಾಲ ಪ್ರೀಢಂ ಪಾರ್ಕಿನಲ್ಲಿ ಮಳೆ-ಬಿಸಿಲು ಎಂಬುದನ್ನೂ ಲೆಕ್ಕಿಸದೆ ಮೀಸಲಾತಿ ಹೆಚ್ಚಳಕ್ಕೆ ಹಠ ಮಾಡಿ ಕುಳಿತರು. ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ದಲಿತ ಸಂಘರ್ಷ ಸಮಿತಿ ಕೂಡ ರಾಜ್ಯದಾದ್ಯಂತ ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಿತ್ತು” ಎಂದು ನೆನಪಿಸಿಕೊಂಡರು.

“ದಲಿತ ಸಂಘಟನೆ ಯಾರದ್ದೋ ಮನೆಯ ಸ್ವತ್ತಲ್ಲ, ದಲಿತ ಸಂಘರ್ಷ ಸಮಿತಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಪ್ಪಿಸಬೇಕು. ನಾವು ವಿದ್ಯಾರ್ಥಿಗಳಿದ್ದಾಗಲೇ ಚಳವಳಿಗೆ ಬಂದವರು. ಆದರೆ, ಇಂದಿನ ವಿದ್ಯಾರ್ಥಿಗಳನ್ನು ನಾವು ಚಳವಳಿಗೆ ತರಲು ಸಾದ್ಯವಾಗುತ್ತಿಲ್ಲ. ಅವರೆಲ್ಲಾ ಸಂಘಪರಿವಾರದ ಕಪಿಮುಷ್ಠಿಗೆ ಸಿಲುಕಿದ್ದಾರೆ.. ಈ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ಯುವನಾಯಕರಿಗೆ ನಾನು ನಾಯಕತ್ವ ಬಿಟ್ಟುಕೊಡಲು ತಯಾರಿದ್ದೇನೆ” ಎಂದು ಅವರು ಘೋಷಿಸಿದರು.

ನಾವ್ಯಾರೂ ಅಸ್ಪೃಶ್ಯರಲ್ಲ: ಎಂ.ದೇವದಾಸ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ದಲಿತ ನಾಯಕ ಎಂ.ದೇವದಾಸ್ ಮಾತನಾಡಿ, “ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಈ ದೇಶದಲ್ಲಿ ನಾವ್ಯಾರೂ ಅಸ್ಪೃಶ್ಯರಲ್ಲ. ನಮ್ಮನ್ನು ಅಸ್ಪೃಶ್ಯರನ್ನಾಗಿ ಮಾಡಿದ್ದು ಮಧ್ಯಪ್ರಾಚ್ಯದಿಂದ ವಲಸೆ ಬಂದ ಆರ್ಯರು. ನಮ್ಮಲ್ಲಿದ್ದ ಭಿನ್ನಾಭಿಪ್ರಾಯಗಳನ್ನು ಬಳಸಿಕೊಂಡು ಅವರು ಇಲ್ಲಿಯೇ ಶಾಶ್ವತವಾಗಿ ಉಳಿದುಕೊಂಡು, ಇಂದು ದೇಶದ ಅಧಿಕಾರ ಹಿಡಿಯುವ ಹಂತಕ್ಕೆ ಬಂದಿದ್ದಾರೆ. ಈ ದೇಶದಲ್ಲಿ ಭಗವಾನ್ ಬುದ್ದರಿಂದ ಸಮಾನತೆ ಬಂದಿತ್ತು. ಆದರೆ, ಆರ್ಯರು ಮತ್ತು ಬ್ರಾಹ್ಮಣರ ಪ್ರಾಬಲ್ಯ ಹೆಚ್ಚಾದ ಬಳಿಕ ಅಸ್ಪೃಶ್ಯತೆ ಹೆಚ್ಚಾಯಿತು” ಎಂದರು.

“ಗಾಂಧಿ ನೇತೃತ್ವದಲ್ಲಿ ರಾಜಕೀಯ ಹೋರಾಟ ನಡೆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಯಿತು. ಕೆರೆಯ ನೀರು ಮುಟ್ಟುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅಂಬೇಡ್ಕರ್ ಕೈಗೊಂಡರು. ಮನುಸ್ಮೃತಿಯನ್ನು ಸುಡುವ ಮೂಲಕ ಪ್ರತಿರೋಧ ತೋರಿದರು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದವರು, ಬ್ರಿಟಿಷರಿಗೆ ಕ್ಷಮಾಪಣೆ ಬರೆದವರು ಹಿಂದುತ್ವದ ಮೂಲಕ ದೇಶವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಯುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸಂವೀಧಾನದ ಮೇಲಿನ ದಾಳಿ ಹೆಚ್ಚಾಗಿದೆ. ಸಂವಿಧಾನ ಬದಲಿಸುವುದೇ ನಮ್ಮ ಕೆಲಸ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ನಾವು ಈ ಬಗ್ಗೆ ಎಚ್ಚರವಾಗಿರಬೇಕು” ಎಂದರು.

“ನಮ್ಮ ಮಕ್ಕಳು ಲಾಠಿ ಹಿಡಿಯಬಾರದು, ನಮ್ಮ ಯುವಕರು ಪೆನ್ನು ಹಿಡಿಯಬೇಕು. ನಮ್ಮ ಮಕ್ಕಳು ಸಂಘಪರಿವಾರಕ್ಕೆ ಹೋಗದಂತೆ ತಡೆಯಬೇಕಾಗಿದೆ. ಹಿಂದೂ ದೇವರುಗಳ ಸೃಷ್ಟಿಕರ್ತರು ಬ್ರಾಹ್ಮಣರು. ನಮ್ಮ ಮನೆಯಲ್ಲಿ ನೂರಾರು ದೇವರುಗಳನ್ನು ಇಟ್ಟುಕೊಳ್ಳುವ ಮೂಲಕ ನಾವು ಧಾರ್ಮಿಕ ಗುಲಾಮಗಿರಿಗೆ ದಾಸರಾಗಿದ್ದೇವೆ. ನಮಗೆ ಭಗವಾನ್ ಬುದ್ಧ ಮಾತ್ರ ಸಾಕು, ನಮ್ಮನ್ನು ಆರ್ಥಿಕ ಗುಲಾಮಗಿರಿಗೆ ತಳ್ಳುವ ಈ ಹಿಂದುತ್ವ ದೇವರುಗಳು ಬೇಡ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...