Homeಮುಖಪುಟಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿಯ ವಿರುದ್ದ ಕೂಡಾ ಯಾವುದೆ ಚಾರ್ಜ್‌ಶೀಟ್ ದಾಖಲಿಸಲಾಗಿಲ್ಲ ಎಂದು ಏಜೆನ್ಸಿಯು ತಿಳಿಸಿದೆ

- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶದ ಮೇರೆಗೆ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ನಡೆದಿದೆ ಎಂಬ ಆರೋಪಕ್ಕೆ, ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA) ಅಡಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯು ಈ ಹೇಳಿಕೆಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.

ಕಳೆದ ಅಕ್ಟೋಬರ್‌ನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿದ್ದ ಸ್ವಪ್ನಾ ಅವರನ್ನು ದೀರ್ಘವಾಗಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ವಿಚಾರಣೆಯಲ್ಲಿ, ಅಂತಹ ಯಾವುದೇ ವಿಷಯ ತಿಳಿದು ಬಂದಿಲ್ಲ. ಸ್ವಪ್ನಾ ಸುರೇಶ್ ನಮಗೆ ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಬೇರೆ ಯಾವುದೇ ತನಿಖಾ ಏಜೆನ್ಸಿಯ ತನಿಖೆಯ ಕುರಿತು ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಎನ್‌ಐಎ ಮೂಲಗಳು ತಿಳಿಸಿದೆ.

ಇದನ್ನೂ ಓದಿ: ಸರ್ಕಾರ ಮೌನವಾಗಿದೆ ಎಂದರೆ ಮುಂದೆ ಏನೋ ಸಂಭವಿಸಲಿದೆ: ರಾಕೇಶ್ ಟಿಕಾಯತ್ ಕಳವಳ

ಈ ವರ್ಷದ ಜನವರಿಯಲ್ಲಿ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಕೂಡಾ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ವಿರುದ್ಧ ಯಾವುದೆ ಪ್ರಕರಣ ದಾಖಲಿಸಿಲ್ಲ. ಸ್ವಪ್ನಾ ಅವರೊಂದಿಗಿನ ಸಂಪರ್ಕಕ್ಕಾಗಿ ಶಿವಶಂಕರ್ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು ಮತ್ತು ಅವರನ್ನು ಜಾರಿ ನಿರ್ದೇಶನಾಲಯವೂ ಬಂಧಿಸಿತ್ತು.

ಕಳೆದ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಶಿವಶಂಕರ್ ಅವರನ್ನು ವಿಚಾರಣೆ ನಡೆಸಿತ್ತು. ಇದಾಗಿ ಒಂದು ತಿಂಗಳ ನಂತರ, ಮನಿ ಲಾಂಡರಿಂಗ್ ಆರೋಪದ ಮೇಲೆ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಈ ವೇಳೆ ಶಿವಶಂಕರ್ ಮುಖ್ಯಮಂತ್ರಿ ಕಚೇರಿಯ ಭಾಗವಾಗಿದ್ದಾಗ ಅನುಮೋದನೆ ಪಡೆದ ಹಲವಾರು ಪ್ರಮುಖ ಸರ್ಕಾರಿ ಯೋಜನೆಗಳ ಬಗ್ಗೆ ಇದು ತನಿಖೆಯನ್ನು ಪ್ರಾರಂಭಿಸಿತ್ತು.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಶಿವಶಂಕರ್‌ನನ್ನು ಬಂಧಿಸಲು ಅಥವಾ ಆರೋಪಿಸಲು ಸಾಕಷ್ಟು ಪುರಾವೆಗಳು ದೊರೆತಿಲ್ಲ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

“ಜೂನ್ 2019 ರಿಂದ ಆರೋಪಿಗಳು ಉದ್ದೇಶಪೂರ್ವಕವಾಗಿ ಸಂಚು ಹೂಡಿ, ತಿರುವನಂತಪುರಂನ ಯುಎಇ ಕಾನ್ಸುಲೇಟ್ ಜನರಲ್‌ನಲ್ಲಿ ರಾಜತಾಂತ್ರಿಕರನ್ನು ಬಳಸಿಕೊಂಡು ಆಮದು ಸರಕು ಮೂಲಕ 167 ಕೆ.ಜಿ. ಚಿನ್ನವನ್ನು ನವೆಂಬರ್ 2019 ಮತ್ತು ಜೂನ್ 2020 ರ ನಡುವೆ ಯುಎಇಯಿಂದ ಕಳ್ಳಸಾಗಣೆ ಮಾಡಲಾಗಿದೆ. ವಿಶೇಷವೆಂದರೆ, ಈ ಪ್ರಕರಣದ ಪ್ರಮುಖ ಆರೋಪಿಗಳು ಬಹ್ರೇನ್, ಸೌದಿ ಅರೇಬಿಯಾ ಮತ್ತು ಮಲೇಷ್ಯಾದಂತಹ ದೇಶಗಳಿಂದ ಹೆಚ್ಚಿನ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯೋಜಿಸಿದ್ದರು” ಎಂದು ಸ್ವಪ್ನಾ ಮತ್ತು ಇತರ 19 ಜನರ ವಿರುದ್ಧ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಎನ್‌ಐಎ ತಿಳಿಸಿತ್ತು.

2020 ರ ಜುಲೈ 5 ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್‌ನಲ್ಲಿ ಯುಎಇಯಿಂದ ಬಂದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಿಂದ 14.82 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಯಿತು.

ಈ ಪ್ರಕರಣದ ತನಿಖೆಗಾಗಿ ಆರಂಭದಲ್ಲಿ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಲಾಗಿತ್ತು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಎನ್‌ಐಎಯು 21 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ | Naanu Gauri

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ...

0
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು...
Wordpress Social Share Plugin powered by Ultimatelysocial