Homeಕರ್ನಾಟಕಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂಬ ಯಾವುದೇ ಕಾನೂನಿಲ್ಲ: ಚಿತ್ರದುರ್ಗ ಎಸ್‌ಪಿ

ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂಬ ಯಾವುದೇ ಕಾನೂನಿಲ್ಲ: ಚಿತ್ರದುರ್ಗ ಎಸ್‌ಪಿ

- Advertisement -
- Advertisement -

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಇನ್ನೂ ಮುರುಘಾ ಶರಣರ ಬಂಧನವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ” ಎಂದಿದ್ದಾರೆ ಎಸ್‌ಪಿ.

“ಪೋಕ್ಸೋ ಪ್ರಕರಣ ದಾಖಲಾದಾಗ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಾಗುತ್ತದೆ” ಎಂದು ಕಾನೂನು ತಜ್ಞರು ತಾಳುತ್ತಿರುವ ಅಭಿಪ್ರಾಯಗಳನ್ನು ಅವರ ಗಮನಕ್ಕೆ ತಂದಾಗ, “ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸಬೇಕೆಂದು ಯಾವುದೇ ಕಾಯ್ದೆ ಇಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಪುನರಾವರ್ತಿಸಿದರು.

ಕಾನೂನು ತಜ್ಞರು ಏನಂತಾರೆ? ಒಡನಾಡಿ ಸಂಸ್ಥೆ ಹೇಳಿದ್ದೇನು?

“ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮಕ್ಕಳು ಯಾರ ಬಳಿ ಈ ಬಗ್ಗೆ ಹೇಳುತ್ತಾರೋ, ಅವರೇ ಪೊಲೀಸರಿಗೆ ಮಾಹಿತಿ ನೀಡಬೇಕು. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವುದು ತಿಳಿದಿದ್ದೂ ಸುಮ್ಮನಿದ್ದರೆ, ನಂತರದ ದಿನಗಳಲ್ಲಿ ಆ ಕುರಿತು ಹೇಳಿದರೆ, ಆ ವ್ಯಕ್ತಿಯನ್ನು ಕೂಡ ಬಂಧಿಸಬಹುದು ಎಂದು ಈ ಕಾಯಿದೆ ಹೇಳುತ್ತದೆ. ಪೋಕ್ಸೊ ಕಾಯಿದೆ ಹೇಗಿದೆ ಅಂದರೆ, ಮೊದಲು ಯಾರ ವಿರುದ್ಧ ಆರೋಪ ಕೇಳಿ ಬಂದಿದೆಯೋ ಆ ವ್ಯಕ್ತಿಯ ಬಂಧನ, ನಂತರ ತನಿಖೆ” ಎನ್ನುತ್ತಾರೆ ಅಂಜಲಿ ರಾಮಣ್ಣ.

“ಪೋಕ್ಸೋ ಪ್ರಕಣದಲ್ಲಿ, ಇಬ್ಬರು ಬಾಲಕಿಯರು ನೇರವಾಗಿ ಬಂದು ದೂರು ನೀಡಿದಾಗ ಆರೋಪಿಯನ್ನು ಬಂಧಿಸಲೇಬೇಕು. ಆರೋಪಿ ಎಷ್ಟೇ ಪ್ರಬಾವಿ ಸ್ಥಾನದಲ್ಲಿದ್ದರೂ ಅವರನ್ನು ಬಂಧಿಸಬೇಕು. ಇಂಥ ಪ್ರಕಣಗಳಲ್ಲಿ ಸಾಮಾನ್ಯ ಜನರನ್ನು ಬಂಧಿಸಿದಂತೆ ಪ್ರಭಾವಿ ವ್ಯಕ್ತಿಗಳನ್ನು ಬಂಧಿಸುವ ಪದ್ಧತಿ ನಮ್ಮಲ್ಲಿ ಇಲ್ಲ. ಬದಲಿಗೆ ಆರೋಪ ಮಾಡಿದವರ ಮೇಲೆಯೇ ಅನುಮಾನ ವ್ಯಕ್ತಪಡಿಸುವ ಪ್ರವೃತ್ತಿ ನಡೆದುಕೊಂಡು ಬಂದಿದೆ” ಎಂದು ವಕೀಲರಾದ ರಾಜಲಕ್ಷ್ಮಿ ಅಂಕಲಗಿ ವಿಷಾದಿಸಿದ್ದಾರೆ.

ಪ್ರಕರಣ ದಾಖಲಾಗಲು ಸಹಾಯಹಸ್ತ ಚಾಚಿದ ಮೈಸೂರಿನ ಒಡನಾಡಿ ಸಂಂಸ್ಥೆಯ ಪರಶು ಅವರು ವಿಳಂಬ ನೀತಿಯನ್ನು ಖಂಡಿಸಿದ್ದಾರೆ. “ಮುರುಘಾ ಶ್ರೀ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಬೇಕಿತ್ತು. ಆದರೆ, ಪೊಲೀಸರು ಆ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದ್ದಾರೆ. ಪೊಲೀಸರ ವಿಳಂಬ ಧೋರಣೆಯನ್ನು ನಾವು ಗಮನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಈ ವಿಳಂಬ ಪ್ರಶ್ನಿಸಿ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಎಫ್‌ಐಆರ್‌ ದಾಖಲಾಗಿ, ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆದು ದಿನ ಉರುಳಿದರೂ ಪೊಲೀಸರು ಕ್ರಮ ಜರುಗಿಸದೇ ಇರುವ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಕೆಲಸ ಮಾಡಿದ ಅನುಭವವೂ ಪರಶು ಅವರಿಗಿದೆ.

“ಈಗ ನಮ್ಮ ಮುಂದೆ ಎರಡು ಆಯ್ಕೆಗಳಿವೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಪೊಲೀಸರು ತಡ ಮಾಡಿದ್ದಕ್ಕೆ ಸಂಬಂಧಿಸಿದಂತೆಯೇ ನಾವು ಮತ್ತೊಂದು ಪ್ರಕರಣ ದಾಖಲಿಸಬಹುದು. ಇದೇ ಆಧಾರದ ಮೇಲೆ ನಾವು ಸಿಬಿಐ ತನಿಖೆಗೂ ಒತ್ತಾಯಿಸಬಹುದು. ಇವೆರಡೂ ಆಯ್ಕೆಗಳೂ ನಮ್ಮ ಮುಂದಿವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಂಬಂಧಪಟ್ಟ ಕಾಯ್ದೆ ಅಡಿ ದೂರು ದಾಖಲಾಗಿದ್ದರು ವ್ಯಕ್ತಿಯ ಬಂಧನವಾಗದಿದ್ದರೆ ಪೊಲೀಸರ ಮೇಲೆ ಖಾಸಗಿ ದೂರು ಸಲ್ಲಿಸಬಹುದಲ್ಲವೇ ….ಎಸ್ ಪಿ ಮೇಲೆ ಯಾಕೆ ದೂರು ಸಲ್ಲಿಸಬಾರದು….?

  2. ಚಿತ್ರದುರ್ಗದ ಎಸ್‌. ಪಿ., ಆರೋಪಿ ಮುರುಗಾ ಶರಣರ ಪ್ರಭಾವಕ್ಕೆ ಬಲಿಯಾಗಿರುವುದು, ಸ್ಪಷ್ಟವಾಗಿ ಕಾಣುತ್ತಿರುವುದರಿಂದ, ಈಗ ಈ ಎಸ್‌ ಪಿ.ಯನ್ನೂ ಆರೋಪಿಯನ್ನಾಗಿಸಿ, ನ್ಯಾಯಾಲಯಕ್ಕೆ ದೂರು ಸಲ್ಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...