Homeಕರೋನಾ ತಲ್ಲಣಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

- Advertisement -
- Advertisement -

“ಜನರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಗಮನಹರಿಸಬೇಕು. ಕೋವಿಡ್‌ನಿಂದ ಸತ್ತವರೆಷ್ಟು ಎಂದು ಚರ್ಚೆ ಮಾಡುತ್ತ ಕೋಲಾಹಲ ಎಬ್ಬಿಸಿದರೆ ಮತ್ತೆ ಅವರು ಹುಟ್ಟಿ ಬರುತ್ತಾರಾ? ಕೋವಿಡ್ ಸಾವಿನ ಸಂಖ್ಯೆಯ ಕುರಿತ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ …” ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ ಲಾಲ್ ಕಟ್ಟರ್ ವಿವಾದಕ್ಕೆ ಈಡಾಗಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಐದು ಸಾವುಗಳು ಸಂಭವಿಸಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಜ್ಯದಲ್ಲಿ ಕೋವಿಡ್ ಸಾವುಗಳ ಸಂಖ್ಯೆಯನ್ನು ಮುಚ್ಚಿಟ್ಟು ಕಡಿಮೆ ತೋರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಕೇಳಿದಾಗ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಐದು ಸಾವುಗಳನ್ನು ಉಲ್ಲೇಖಿಸಿದ ಅವರು, ಲಭ್ಯವಿರುವ ಮೂಲಸೌಕರ್ಯಗಳ ಮಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. “ನಾವು ಯಾವ ರೀತಿಯ ಪರಿಸ್ಥಿತಿಯಲ್ಲಿದ್ದೇವೆ ಎಂದು ನೋಡಿ. ಡೇಟಾದೊಂದಿಗೆ ಆಟ ಆಡಲು ನಾವು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸೋಮವಾರ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಐದು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿವೆ. ಆದರೆ ಇದನ್ನು ನಿರಾಕರಿಸಿದ ಜಿಲ್ಲಾಡಳಿತವು ಆಸ್ಪತ್ರೆ ವಿರುದ್ಧ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

“ಕೋವಿಡ್ ರೋಗಿಗಳು ಹೇಗೆ ಗುಣಮುಖರಾಗುತ್ತಿದ್ದಾರೆ ಎಂಬುದಕ್ಕೆ ಮಹತ್ವ ನೀಡಬೇಕು. ಅದು ಬಿಟ್ಟು ಕೋವಿಡ್ ಕುರಿತ ಸಾವಿನ ಸಂಖ್ಯೆ ಬಗ್ಗೆ ಚರ್ಚೆ ಮಾಡಿ ಕೋಲಾಹಲ ಎಬ್ಬಿಸಿದರೆ, ಸತ್ತವರೇನು ಪುನರ್ಜನ್ಮ ಪಡೆಯುತ್ತಾರಾ?’ ಎಂದು ಪ್ರಶ್ನೆ ಮಾಡಿದ ಖಟ್ಟರ್, ಸಾಂಕ್ರಾಮಿಕದ ಬಗ್ಗೆ ನಿಮಗೆ ಅಥವಾ ನನಗೆ ಏನೂ ತಿಳಿದಿರಲಿಲ್ಲ. ಈ ಕಾಲದಲ್ಲಿ, ನೀವು (ಮೀಡಿಯಾ), ರೋಗಿಗಳು ಮತ್ತು ಎಲ್ಲರ ಸಹಕಾರ ನಮಗೆ ಬೇಕು’ ಎಂದು ಮನವಿ ಮಾಡಿದರು.

ಹರಿಯಾಣದಲ್ಲಿ ಸೋಮವಾರ 11,504 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 75 ಸಾವುಗಳು ದಾಖಲಾಗಿವೆ. ಹೋಲಿಕೆಯಲ್ಲಿ ತಮ್ಮಲ್ಲಿ ಪ್ರಕರಣ ಮತ್ತು ಸಾವು ಕಡಿಮೆ ಎಂದು ತೋರಿಸಲು ಅನೇಕ ರಾಜ್ಯಗಳು ಕೋವಿಡ್ ಸಾವುನೋವುಗಳನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಉತ್ತರಪ್ರದೇಶ, ಹರಿಯಾಣ ಮತ್ತು ಇತರ ಕೆಲವು ಬಿಜೆಪಿ ಆಡಳಿತ ಇರುವ ಸರ್ಕಾರಗಳು ಹೀಗೆ ಮಾಡುತ್ತ ಬಂದಿವೆ ಎಂದು ಆರೋಪಿಸಲಾಗಿದೆ.

“ನಾವು ಪ್ರತಿ ಜೀವವನ್ನು ಉಳಿಸಲು ಪ್ರಯತ್ನಿಸುತ್ತೇವೆ. ಸಾವುಗಳು ಕಡಿಮೆಯಿವೆ ಅಥವಾ ಹೆಚ್ಚಾಗಿವೆ ಎಂದು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ವ್ಯವಸ್ಥೆಗಳನ್ನು ಸರಿಪಡಿಸಲು ನಾವು ಸಮರ್ಥರಾಗಿದ್ದೇವೆ. ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಮುಖ್ಯವಷ್ಟೇ” ಎಂದು ಖಟ್ಟರ್ ಹೇಳಿದ್ದಾರೆ.

ಕೋವಿಡ್ ರೋಗ ಮತ್ತು ಅದರ ಪರಿಣಾಮದ ಕುರಿತಾದ ಪ್ರಶ್ನೆಗಳಿಗೆ ತಮ್ಮ ಆಡಳಿತವು ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...