Homeಮುಖಪುಟಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

- Advertisement -
- Advertisement -

ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಕೆಲವು ಹಳ್ಳಿಗಳ ಕನ್ನಡದ ಹೆಸರನ್ನು ಬದಲಾಯಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಕೇರಳ ಸರ್ಕಾರಕ್ಕೆ ಪತ್ರವನ್ನು ಬರೆಯುವುದಾಗಿಯೂ ಹೇಳಿದ್ದರು. ಈಗ ಕನ್ನಡದ ಹೆಸರು ಬದಲಾವಣೆ ಇಲ್ಲವೆಂದು ಕೇರಳದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟಪಡಿಸಿದ್ದಾರೆ.

ಕೇರಳ ಸರ್ಕಾರ ಗ್ರಾಮಗಳ ಕನ್ನಡದ ಹೆಸರನ್ನು ಬದಲಾಯಿಸುವ ಯಾವ ಆದೇಶಗಳನ್ನು, ಅಧಿಸೂಚನೆಗಳನ್ನು ಹೊರಡಿಸಿಲ್ಲ ಎಂದು ಅವರು ತಿಳಿಸಿದ್ದು, ಒಂದು ವೇಳೆ ಕೇರಳ ಸರ್ಕಾರ ಊರುಗಳ ಹೆಸರನ್ನು ಬದಲಾಯಿಸಲು ಮುಂದಾದರೆ ಹೋರಾಟವನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಟವನ್ನು ನಡೆಸುತ್ತಲೇ ಬಂದಿದ್ದೇನೆ. ಕೆಲವು ನಾಯಕರು ಭಾಷೆಯ ವಿಷಯದಲ್ಲಿ ಗೊಂದಲವನ್ನು ಹುಟ್ಟಿಸುವ ಹೇಳಿಕೆಯನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಿಗೆ ಕರೆ ಮಾಡಿ ಊರುಗಳ ಕನ್ನಡ ಹೆಸರನ್ನು ಬದಲಾಯಿಸುವ ಪ್ರಸ್ತಾಪದ ಕುರಿತು ವಿಚಾರಿಸಿದ್ದೇನೆ. ಕೇರಳ ಸರ್ಕಾರದ ಮುಂದೆ ಅಂತಹ ಪ್ರಸ್ತಾಪಗಳಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ. ಒಂದು ವೇಳೆ ಕಾಸರಗೋಡಿನಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುವ ಯಾವುದಾದರೂ ಘಟನೆ ನಡೆದರೆ ಅದರ ವಿರುದ್ಧ ಹೋರಾಟ ನಡೆಸುತ್ತೇನೆ. ಕನ್ನಡಿಗನಾಗಿ ಕನ್ನಡದ ಹಿತಾಸಕ್ತಿಗಳ ರಕ್ಷಣೆಗೆ ಬದ್ಧರಾಗಿರುವುದಾಗಿ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಕೇರಳ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಕನ್ನಡ ಪ್ರೇಮಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದು, ಇಷ್ಟುಬೇಗ ಕೇರಳದಿಂದ ಪ್ರತಿಕ್ರಿಯೆ ಬಂದಿರುವುದು ಸಂತೊಷದ ವಿಷಯ ಎಂದು ತಿಳಿಸಿದ್ದಾರೆ. ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಕುಮಾರಸ್ವಾಮಿಯವರು ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

 

ಕೇರಳ ಸರ್ಕಾರ ಕಾಸರಗೋಡು ಜೆಲ್ಲೆಯ ಊರುಗಳ ಕನ್ನಡ ಹೆಸರನ್ನು ಮಲಾಯಳೀಕರಣಗೊಳಿಸುವ ತೀರ್ಮಾನವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಿನ್ನೆ ಕೇರಳ ಸರ್ಕಾರವನ್ನು ಒತ್ತಾಯಿಸಿದ್ದರು.

 

ಕನ್ನಡದ ಊರುಗಳ ಹೆಸರನ್ನು ಮಲಯಾಳೀಕರಣಗೊಳಿಸುತ್ತಿರುವ ವಿಷಯದ ಕುರಿತಾಗಿ  ಮಾಹಿತಿಯನ್ನು ಸಂಗ್ರಹಿಸಿ ಕೆಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನೀಡಲಾಗುವದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಭಾಷೆಯಂತಹ ಸೂಕ್ಷ್ಮ ವಿಷಯದಲ್ಲಿ ನಿನ್ನೆ ಹುಟ್ಟಿಕೊಂಡಿದ್ದ ಚರ್ಚೆ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಪ್ರಯತ್ನದ ಫಲವಾಗಿ ಯಾವುದೇ ವಿವಾದಗಳಿಲ್ಲದೇ ಬಗೆಹರಿದಿದೆ. ಅಶ್ರಫ್‌ ಅವರು ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಕೇರಳ ವಿಧಾನ ಸಭೆಯಲ್ಲಿ ಕನ್ನಡ ಭಾಷೆಯಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...