Photo Courtesy: IndiaTvNews

ರಾಜ್ಯ ಸೇರಿದಂತೆ ದೇಶಾದ್ಯಂತ ಮತ್ತೊಮ್ಮೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವೆಂಬ ನಿಯಮ ಹೇರಲಾಗುತ್ತಿದೆಯೇ ಎಂಬ ಉಹಾಪೋಹಗಳಿಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದಿದ್ದಾರೆ.

“ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಸಿಎಂ ಉದ್ಧವ್ ಠಾಕ್ರೆ “ಮಹಾರಾಷ್ಟ್ರದ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ” ಎಂಬ ನಿಯಮ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಇದೇ ನಿಯಮ ಜಾರಿಗೆ ತರುತ್ತಿದೆ ಎಂಬ ಗಾಳಿಸುದ್ದಿಗಳು ಹರಡಿದ್ದವು. ಇದಕ್ಕೆ ಸಿಎಂ ಇಂದು ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

LEAVE A REPLY

Please enter your comment!
Please enter your name here