Homeಮುಖಪುಟಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

ಪೆಟ್ರೋಲ್, ಡೀಸೆಲ್ GST ಅಡಿಯಲ್ಲಿ ತರುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

ಒಂದೆ ವರ್ಷದಲ್ಲಿ ಪೆಟ್ರೋಲ್ ಡಿಸೆಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ಪಟ್ಟು ಹೆಚ್ಚಿರುವುದನ್ನು ಕೇಂದ್ರವು ಒಪ್ಪಿಕೊಂಡಿದೆ.

- Advertisement -
- Advertisement -

ಹೆಚ್ಚುತ್ತಿರುವ ಮತ್ತು ದಾಖಲೆಯ ಬೆಲೆ ಏರಿಕೆಯ ನಡುವೆಯೂ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ಜೆಟ್ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಜಿಎಸ್‌ಟಿ ಅಡಿಯಲ್ಲಿ ತರುವಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ.

“ಪ್ರಸ್ತುತ, ಕಚ್ಚಾ ಪೆಟ್ರೋಲಿಯಂ, ಪೆಟ್ರೋಲ್, ಡೀಸೆಲ್, ಎಟಿಎಫ್ ಮತ್ತು ನೈಸರ್ಗಿಕ ಅನಿಲವನ್ನು ಜಿಎಸ್ಟಿ ಅಡಿಯಲ್ಲಿ ತರುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದಿಲ್ಲ” ಎಂದು ಸಚಿವೆ ಸೀತಾರಾಮನ್ ಲೋಕಸಭೆಯಲ್ಲಿನ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

“ಈ ಉತ್ಪನ್ನಗಳನ್ನು ಜಿಎಸ್‌ಟಿ ಅಡಿಯಲ್ಲಿ ತರುವುದು ಯಾವಾಗಿನಿಂದ ಎಂಬ ಬಗ್ಗೆ, ಜಿಎಸ್‌ಟಿ ಮಂಡಳಿ ಶಿಫಾರಸು ಮಾಡಬೇಕು ಎಂದು ಕಾನೂನು ತಿಳಿಸುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್‌ಟಿ ಮಂಡಳಿಯು ಇದುವರೆಗೆ ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂಬ ಶಿಫಾರಸು ಮಾಡಿಲ್ಲ’’ ಎಂದು ಸೀತಾರಾಮನ್ ಹೇಳಿದ್ದಾರೆ.

ಸದನದಲ್ಲಿ ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹಣಕಾಸು ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್, ಪೆಟ್ರೋಲ್ ಮೇಲಿನ ಅಬಕಾರಿ ಸುಂಕವು ಒಂದು ವರ್ಷಗಳ ಹಿಂದೆ ಒಂದು ಲೀಟರ್‌ಗೆ 19.98 ರೂ. ಇತ್ತು, ಈಗ ಅದು 32.9 ರೂ.ಆಗಿದೆ. ಅದೇ ರೀತಿ ಡೀಸೆಲ್‌‌ ಅಬಕಾರಿ ಸುಂಕವನ್ನು 15.83 ರೂ. ನಿಂದ 31.8 ರೂ.ಗೆ ಏರಿಸಲಾಗಿದೆ ಎಂದು ಹೇಳಿದ್ದಾರೆ.

“ಪ್ರಸಕ್ತ ಹಣಕಾಸಿನ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ವೆಚ್ಚಗಳ ಸಂಪನ್ಮೂಲಗಳನ್ನು ಉತ್ಪಾದಿಸಲು ಅಬಕಾರಿ ಸುಂಕದ ದರವನ್ನು ಮಾಪನಾಂಕ ಮಾಡಲಾಗಿದೆ” ಎಂದು ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...