Homeಎಕಾನಮಿಬಿಟ್‌ಕಾಯಿನ್ ಅನ್ನು ಕರೆನ್ಸಿ ಎಂದು ಪರಿಗಣಿಸುವ ಪ್ರಸ್ತಾಪವಿಲ್ಲ: ನಿರ್ಮಲ ಸೀತಾರಾಮನ್

ಬಿಟ್‌ಕಾಯಿನ್ ಅನ್ನು ಕರೆನ್ಸಿ ಎಂದು ಪರಿಗಣಿಸುವ ಪ್ರಸ್ತಾಪವಿಲ್ಲ: ನಿರ್ಮಲ ಸೀತಾರಾಮನ್

- Advertisement -
- Advertisement -

ಬಿಟ್‌ಕಾಯಿನ್ ಅನ್ನು ಭಾರತದಲ್ಲಿ ಕರೆನ್ಸಿಯನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ. ಬಿಟ್‌ಕಾಯಿನ್ ವಹಿವಾಟಿನ ಬಗ್ಗೆ ಸರ್ಕಾರವು ಡೇಟಾವನ್ನು ಸಂಗ್ರಹಿಸುವುದಿಲ್ಲ ಎಂದು ಸಹ ಅವರು ಸದನಕ್ಕೆ ತಿಳಿಸಿದ್ದಾರೆ.

ದೇಶದಲ್ಲಿ ಬಿಟ್‌ಕಾಯಿನ್ ಅನ್ನು ಕರೆನ್ಸಿಯಾಗಿ ಗುರುತಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಹೊಂದಿದೆಯೇ ಎಂಬ ಪ್ರಶ್ನೆಗೆ ಅವರು “ಇಲ್ಲ ಸರ್” ಎಂದು ಉತ್ತರಿಸಿದ್ದಾರೆ.

ಬಿಟ್‌ಕಾಯಿನ್ ಡಿಜಿಟಲ್ ಕರೆನ್ಸಿಯಾಗಿದ್ದು ಅದು ಜನರು ಸರಕು ಮತ್ತು ಸೇವೆಗಳನ್ನು ಖರೀದಿಸಲು ಬ್ಯಾಂಕ್‌ಗಳು, ಕ್ರೆಡಿಟ್ ಕಾರ್ಡ್ ವಿತರಕರು ಅಥವಾ ಇತರ ಮೂರನೇ ವ್ಯಕ್ತಿಗಳನ್ನು ಒಳಗೊಳ್ಳದೆ ಹಣವನ್ನು ವಿನಿಮಯ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಇಂದಿನಿಂದ ಆರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021 ಅನ್ನು ಪರಿಚಯಿಸಲು ಸರ್ಕಾರ ಯೋಜಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟು ರಚಿಸುವುದು. ಮಸೂದೆಯು ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ. ಆದಾಗ್ಯೂ, ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ನೀಡುವುದು ಮಸೂದೆಯ ಗುರಿಯಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...