Homeಮುಖಪುಟನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ಕೇಂದ್ರ ಸರ್ಕಾರ ಮೊಂಡುತನ ಮಾಡದೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಹಾಗಾಗಿ ನವೆಂಬರ್ 26-27 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸುತ್ತೇವೆ.

- Advertisement -
- Advertisement -

ರೈತವಿರೋಧಿ, ದಲಿತ-ಕಾರ್ಮಿಕ-ಜನ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ನವೆಂಬರ್ 26-27 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ ತಿಳಿಸಿದ್ದಾರೆ.

ಶಿವಮೊಗ್ಗದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಮೊಂಡುತನ ಮಾಡದೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ನಿಲ್ಲಿಸಬೇಕು. ಇಲ್ಲದಿದ್ದರೆ ಅವರು ರೈತರ ತೀವ್ರ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ” ಎಂದರು.

ದೇಶದ 240ಕ್ಕೂ ಹೆಚ್ಚು ಸಂಘಟನೆಗಳು ನವೆಂಬರ್ 26-27 ರಂದು ದೆಹಲಿ ಚಲೋಗೆ ಕರೆ ನೀಡಿದ್ದೇವೆ. ಅಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಆದರೆ ದೆಹಲಿ ಸೇರಿದಂತೆ ಹಲವೆಡೆ ಕೊರೊನಾ ಹೆಚ್ಚಿನ ರೀತಿಯಲ್ಲಿ ಹರಡುತ್ತಿರುವುದು ನಾವು ಸಾಂಕೇತಿಕ ಸಂಖ್ಯೆಯಲ್ಲಿ ದೆಹಲಿಗೆ ತೆರಳುತ್ತಿದ್ದು, ಉಳಿದವರು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದಿದ್ದಾರೆ.

ಪಂಜಾಜ್ ಹರಿಯಾಣ ಸೇರಿದಂತೆ ದೇಶಾದ್ಯಂತ ರೈತರ ಕಳೆದೆರಡು ತಿಂಗಳಿನಿಂದ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸಹ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿದ್ದು, ತನ್ನ ನಿಲುವುನಿಂದ ಹಿಂದೆ ಸರಿಯುತ್ತಿಲ್ಲ. ಹಾಗಾಗಿ ರೈತರಿಗೆ ಪ್ರತಿಭಟನೆ, ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ. ಚಳವಳಿ ತೀವ್ರಗೊಳ್ಳಲಿದೆ ಎಂದು ಬಸವರಾಜಪ್ಪ ತಿಳಿಸಿದ್ದಾರೆ.

ನವೆಂಬರ್ 26 ರಂದು ಅಖಿಲ ಭಾರತ ಮುಷ್ಕರದ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಕೋರಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗುವುದು ಎಂದು ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕೆ.ಎಲ್ ಅಶೋಕ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಕಾರ್ಯದರ್ಶಿ ಟಿ.ಎಸ್ ಹಾಲೇಶಪ್ಪ, ನಿರಂತರ ಸಂಘಟನೆಯ ಟಿ.ಅನಿಲ್ ಕುಮಾರ್, ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷರಾದ ನಾರಾಯಣ ಎಂ ಮತ್ತು ಜಿಲ್ಲಾ ಕಾರ್ಯದರ್ಶಿ ಹನುಮಕ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ಸೂರಿಗಾಗಿ ಹೋರಾಟ – ಉಸ್ತುವಾರಿ ಸಚಿವರ ಭರವಸೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...