Homeಕರ್ನಾಟಕಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೋವಿಡ್ ಸೋಂಕಿಗೆ ಸಂಬಂಧಪಟ್ಟಂತೆ ಸದ್ಯಕ್ಕೆ ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಮೇ.26) ಹೇಳಿದ್ದಾರೆ.

ಕೋವಿಡ್ ಸಂಬಂಧ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ಸಿಎಂ, ಮುಂಜಾಗೃತ ಕ್ರಮವಾಗಿ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಿ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ. ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ಸಿಎಂ ಆದೇಶಿಸಿದ್ದಾರೆ.

ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ. ಶಾಲೆಗಳೂ ಈ ಬಗ್ಗೆ ಗಮನಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಸಿಎಂ, ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ, ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ ಎಂದು ತಿಳಿಸಿದ್ದಾರೆ.

SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರದಲ್ಲಿ 56 ಪ್ರಕರಣಗಳು ವರದಿಯಾಗಿವೆ ಎಂದಿದ್ದಾರೆ.

ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋವಿಡ್ ಸಹಾಯವಾಣಿ ಪ್ರಾರಂಭಿಸಲು ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಿಎಂ, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ತೋರಬಾರದು. ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆಗಳು ಸರ್ವ ಸನ್ನದ್ಧವಾಗಿ ಇರಬೇಕು ಎಂದಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ.
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ ಎಂದ ಸಿಎಂ, ವ್ಯಾಕ್ಸಿನ್‌ಗಳನ್ನು ಸಿದ್ದವಾಗಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆಯೂ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಕೋವಿಡ್ ಅಂಕಿ-ಅಂಶ

ಆರೋಗ್ಯ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ, ಸೋಮವಾರ (26 ಮೇ 2025) ರಾಜ್ಯದಲ್ಲಿ ಹೊಸದಾಗಿ 37 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಜನವರಿಯಿಂದ ದಾಖಲಾದ ಪಾಸಿಟಿವ್ ಪ್ರಕರಣಗಳ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಸೋಮವಾರ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಜನವರಿಯಿಂದ ಗುಣಮುಖರಾದ ಒಟ್ಟು ಸೋಂಕಿತರ ಸಂಖ್ಯೆ 54 ಆಗಿದೆ. ರಾಜ್ಯದಲ್ಲಿ ಪ್ರಸ್ತುತ 80 ಸಕ್ರಿಯ ಕೋವಿಡ್ ಪ್ರಕರಣಗಳಿವೆ. 1 ಜನವರಿ 2025ರಿಂದ 26 ಮೇ 2025ವರೆಗೆ ಒಂದು ಸಾವು ಸಂಭವಿಸಿದೆ.

ಮೇ 25ರಿಂದ 26ರ ನಡುವೆ 24 ಗಂಟೆಗಳ ಅವಧಿಯಲ್ಲಿ 191 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 171 ಜನರಿಗೆ ಆರ್‌ಟಿಪಿಸಿಆರ್ 20 ಜನರಿಗೆ ಆರ್‌ಎಟಿ ಪರೀಕ್ಷೆ ಮಾಡಲಾಗಿದೆ.

ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು ಪ್ರಕರಣ: ಮೂವರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...