Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....