Homeಮುಖಪುಟಹರ್ಷಮಂದರ್‌ ಭಾಷಣದಲ್ಲಿ ಆಕ್ಷೇಪಾರ್ಹವಾದುದು ಏನೇನು ಇಲ್ಲ: ವಕೀಲ ದುಶ್ಯಂತ್

ಹರ್ಷಮಂದರ್‌ ಭಾಷಣದಲ್ಲಿ ಆಕ್ಷೇಪಾರ್ಹವಾದುದು ಏನೇನು ಇಲ್ಲ: ವಕೀಲ ದುಶ್ಯಂತ್

- Advertisement -
- Advertisement -

2019ರ ಡಿಸೆಂಬರ್ 16 ರಂದು ಜಾಮಿಯಾ ಮಿಲಿಯಾದಲ್ಲಿ ಮಾಡಿದ ಭಾಷಣವು ಸುಪ್ರೀಂ ಕೋರ್ಟ್ ಅನ್ನು ಅವಹೇಳನ ಮಾಡಿಲ್ಲ. ನ್ಯಾಯಾಂಗ ನಿಂದನೆ ಅಥವಾ ಆಕ್ಷೇಪಾರ್ಹವಾಗಿಲ್ಲೆ ಎಂದು ಸಾಮಾಜಿಕ ಕಾರ್ಯಕರ್ತ ಹರ್ಷಮಂದರ್‌ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಹರ್ಷಮಂದರ್‌ ಪರ ಹಾಜರಾದ ಹಿರಿಯ ವಕೀಲ ದುಶ್ಯಂತ್ ಡೇವ್ ಅವರು “ದೆಹಲಿ ಪೊಲೀಸರು ಎಡಿಟ್‌ ಮಾಡಿದ ಭಾಷಣದ ಆವೃತ್ತಿಯನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಭಾಷಣದ ಯಾವ ಭಾಗವು ಆಕ್ಷೇಪಾರ್ಹ ಎಂದು ಸ್ಪಷ್ಟವಾಗಿ ವಿವರಿಸುವಂತೆ ದೆಹಲಿ ಪೊಲೀಸರಿಗೆ ಒತ್ತಾಯಿಸಬೇಕೆಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹರ್ಷಮಂದರ್‌ ಮಾಡಿದ ಭಾಷಣ ನ್ಯಾಯಾಂಗನಿಂದನೆಯಲ್ಲ. ನಾನು ಸಂಪೂರ್ಣ ಭಾಷಣವನ್ನು ನೋಡಿದ್ದೇನೆ. ಭಾಷಣದ ಯಾವ ಭಾಗವು ಆಕ್ಷೇಪಾರ್ಹವಾಗಿದೆ” ಎಂದು ಡೇವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಮಾತನ್ನು ಈಗ ಕೇಳುವುದಿಲ್ಲ: ಹರ್ಷಮಂದರ್‌ PIL ತಿರಸ್ಕರಿಸಿದ ಸುಪ್ರೀಂ

ದೆಹಲಿ ಪೊಲೀಸರ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹರ್ಷಮಂದರ್‌ ಅವರ ಇನ್ನೊಂದು ಭಾಷಣದ ಪ್ರತಿ ತಮ್ಮ ಬಳಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಅದೇ ವ್ಯಕ್ತಿಯಿಂದ ತಿರಸ್ಕಾರದಿಂದ ಕೂಡಿದ ಇನ್ನೊಂದು ಭಾಷಣವನ್ನು ನಾವು ಕಂಡುಕೊಂಡಿದ್ದೇವೆ” ಎಂದು ಅವರು ಹೇಳಿದರು.

ಈ ಆರೋಪಗಳ ಮೂಲಕ ಸರ್ಕಾರವು ಮಾಹಿತಿದಾರನ್ನನ್ನು ಶೂಟ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಡೇವ್ ಆರೋಪಿಸಿದ್ದಾರೆ. ನ್ಯಾಯ ಕೇಳುವ ಹರ್ಷಮಂದರ್‌ರವರ ಹಕ್ಕನ್ನು ದಮನಿಸಲಾಗುತ್ತಿದೆ ಎಂದು ದೂರಿದ್ದಾರೆ.

“ಇದು ಗಂಭೀರ ವಿಷಯ. ನ್ಯಾಯಾಲಯ ಪ್ರವೇಶಿಸುವ ನನ್ನ ಹಕ್ಕನ್ನು ಮೊಟಕುಗೊಳಿಸಲಾಗುತ್ತಿದೆ. ಮೆಸೆಂಜರ್ ಅನ್ನು ಶೂಟ್ ಮಾಡಲು ಸರ್ಕಾರ ಬಯಸಿದೆ “ಎಂದು ಹರ್ಷಮಂದರ್‌ ಹೇಳಿದ್ದಾರೆ.

ನ್ಯಾಯಾಲಯವು ಆರೋಪಗಳಿಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಹರ್ಷಮಂದರ್‌‌ಗೆ ಸೂಚಿಸಿತು ಮತ್ತು ಪ್ರಕರಣವನ್ನು ಏಪ್ರಿಲ್ 15 ರಂದು ವಿಚಾರಣೆಗೆ ಮುಂದೂಡಿತು.

ಶಾನ್ಯ ದೆಹಲಿಯಲ್ಲಿ ಗಲಭೆ ಮತ್ತು ಹಿಂಸಾಚಾರವನ್ನು ಪ್ರಚೋದಿಸಿದ್ದಾಕ್ಕಿ ಕಪಿಲ್ ಮಿಶ್ರಾ ಮತ್ತು ಅನುರಾಗ್ ಠಾಕೂರ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ದ್ವೇಷ ಭಾಷಣದ ಮೇಲೆ ಎಫ್ಐಆರ್ ನೋಂದಾಯಿಸುವಂತೆ ಕೋರಿ ಹರ್ಷಮಂದರ್‌ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಮಾರ್ಚ್ 4 ರಂದು ಈ ವಿಷಯವು ಉನ್ನತ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಾಗ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ವಿರೋಧಿಸಿ ಹರ್ಷಮಂದರ್‌ ಮಾಡಿದ ಭಾಷಣದಲ್ಲಿ ತಾನು ಸುಪ್ರೀಂ ಕೋರ್ಟ್‌‌ಅನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...