Homeಮುಖಪುಟಇನ್ನೂ ಸಮಯವಿದೆ ಮೋದಿಜಿ...! - ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಎರಡನೇ ತಿಂಗಳನ್ನು ಪೂರ್ಣಗೊಳಿಸುವತ್ತ ಸಾಗುತ್ತಿದ್ದು, ರೈತರನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಭಾನುವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಇನ್ನೂ ಸಮಯವಿದೆ ಮೋದಿಜಿ, ಅನ್ನದಾತರನ್ನು ಬೆಂಬಲಿಸಿ, ಬಂಡವಾಳಶಾಹಿಗಳನ್ನು ತೊಲಗಿಸಿ” ಎಂದು ಹಿಂದಿಯಲ್ಲಿ ಮನವಿ ಮಾಡಿ, 2015 ರಲ್ಲಿ ತಾವು ಸಂಸತ್ತಿನಲ್ಲಿ ಮಾಡಿದ ಭಾಷಣದ ತುಣುಕನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ಇದನ್ನೂ ಓದಿ: ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

ಸಂಸತ್ತಿನಲ್ಲಿ 2015 ರ ಎಪ್ರಿಲ್‌ನಲ್ಲಿ “ರೈತರು ದೇಶದ ಶಕ್ತಿ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...