Homeಮುಖಪುಟ69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದಂದು ಸಹ ಟ್ರ್ಯಾಕ್ಟರ್‌ ಪರೇಡ್‌ ನಡೆದಿತ್ತು!

69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದಂದು ಸಹ ಟ್ರ್ಯಾಕ್ಟರ್‌ ಪರೇಡ್‌ ನಡೆದಿತ್ತು!

- Advertisement -
- Advertisement -

ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ನಡೆಸುತ್ತಿರುವ ರೈತರು ಜ. 26ರಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುತ್ತಿರುವುದು ತಿಳಿದೇ ಇದೆ. ಆದರೆ 69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವಂದು ನಡೆದ ಪರೇಡ್‌ನಲ್ಲಿ ಟ್ಯಾಕ್ಟರ್‌ಗಳು ಸಂಚರಿಸಿದ್ದವು!

ಜ. 26ರಂದು ಗಣರಾಜ್ಯೋತ್ಸವಂದು ಪರೇಡ್‌ ನಡೆಸುವುದು ರೂಢಿ. ಆ ದಿನ ವಿದೇಶಿ ಗಣ್ಯರೊಬ್ಬರು ಅತಿಥಿಯಾಗಿ ಪಾಲ್ಗೊಳ್ಳುತ್ತಾರೆ ಮತ್ತು ಪರೇಡ್‌ಗೆ ಸಾಕ್ಷಿಯಾಗುತ್ತಾರೆ. ಆದರೆ ಈ ಬಾರಿ ಪರೇಡ್‌ ಸಂದರ್ಭದಲ್ಲಿ ರೈತರು ತಮ್ಮ ಹೋರಾಟದ ಭಾಗವಾಗಿ ಟ್ರ್ಯಾಕ್ಟರ್‌ ಪರೇಡ್ ನಡೆಸುವುದಾಗಿ ಘೋಷಿಸಿದ್ದಾರೆ. ಇದನ್ನು ಒಪ್ಪದ ಕೇಂದ್ರ ಸರ್ಕಾರ‌ ಈ ಪರೇಡ್ ದೇಶಕ್ಕೆ ಮಾಡುವ ಅವಮಾನ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ.

ಆದರೆ 1952ರಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಟ್ಯಾಕ್ಟರ್‌ಗಳ ಸಾಲು ಸಾಲು ಮೆರವಣಿಗೆ ನಡೆದಿತ್ತು ಎಂಬುದು ಈಗ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಟ್ರ್ಯಾಕ್ಟರ್‌ ಪರೇಡ್‌ ಹೊಸದಲ್ಲ. ಸರ್ಕಾರ ಇದನ್ನು ಅವಮಾನದ ಸಂಗತಿಯಾಗಿ, ಮುಜುಗರದ ವಿಷಯವಾಗಿ ನೋಡುವ ಅಗತ್ಯವಿಲ್ಲ. ಗಣತಂತ್ರ ಪ್ರತಿಯೊಬ್ಬನ ಹಕ್ಕನ್ನು ಎತ್ತಿಹಿಡಯುವ ದಿನ. ಹಾಗಾಗಿ ಅಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುವುದೂ ರೈತರ ಹಕ್ಕು ಎಂಬ ಪ್ರತಿಪಾದಿಸಲಾಗುತ್ತಿದೆ.

ಆಗ ಪರೇಡ್‌ನಲ್ಲಿ ಪಾಲ್ಗೊಂಡಿದ್ದ ಟ್ರ್ಯಾಕ್ಟರ್‌ನ ಕಪ್ಪುಬಿಳುಪಿನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ದೆಹಲಿ ಗಡಿಗಳಲ್ಲಿ ಜ. 26ರ ಪರೇಡ್‌ಗೆ ತಮ್ಮ ಟ್ರ್ಯಾಕ್ಟರ್‌ಗಳಿಗೆ ಅಲಂಕಾರ ಮಾಡುವ ಮೂಲಕ ಸಿದ್ಧತೆ ನಡೆಸುತ್ತಿರುವಾಗ ಐತಿಹಾಸಿಕ ಚಿತ್ರಗಳು ಹರಿದಾಡುತ್ತಿರುವುದು ರೈತರ ಹೋರಾಟಕ್ಕೆ ಹೊಸ ಹುರುಪು ತುಂಬಿದೆ.

ಇನ್ನು ಇಂದು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರ ಸಚಿವರೊಂದಿಗೆ ನಡೆದ 11 ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಇಂದಿನ ಸಭೆಯಲ್ಲಿ ಸಚಿವರು ಒತ್ತಾಯಿಸಿದ್ದು, ರೈತರು ಅದನ್ನು ನಿರಾಕರಿಸಿ ಮೂರು ಕಾಯ್ದೆಗಳ ಸಂಪೂರ್ಣ ರದ್ದತಿ ಮತ್ತು ಎಂಎಸ್‌ಪಿಗಾಗಿ ಹೊಸ ಕಾಯ್ದೆಗಾಗಿ ಆಗ್ರಹಿಸಿದ್ದಾರೆ.

ಹಾಗಾಗಿ ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ನಲ್ಲಿಯೇ ರೈತರ ಟ್ರಾಕ್ಟರ್ ರ್ಯಾಲಿ ನಡೆಯುತ್ತದೆ ಮತ್ತು ಅದು ಕಿಸಾನ್‌ಘಾಟ್‌ವರೆಗೂ ಮುಂದುವರೆಯಲಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಮುಖ್ಯಸ್ಥ ದರ್ಶನ್ ಪಾಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಗಣರಾಜ್ಯೋತ್ಸವ ನಡೆಯುವ ಸಮಯದಲ್ಲಿಯೇ ರೈತರ ಟ್ರಾಕ್ಟರ್ ಪೆರೇಡ್ ಸಹ ನಡೆಯಲಿದೆ.

  • ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...