Homeಕರೋನಾ ತಲ್ಲಣವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ.ಗಳ ಅವ್ಯವಹಾರ ನಡೆದಿದ್ದು ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆಯೆಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು.

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.
ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ.

ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ.

ರಾಜ್ಯದಲ್ಲಿ 9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ. ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಎಚ್ಚರಿಸಿದ್ದಾರೆ.


ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...