ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಹತ್ರಾಸ್‌ಗೆ ಭೇಟಿ ನೀಡಿ, ಕಾಲ್ತುಳಿತದಿಂದ ಮೃತಪಟ್ಟ ಹಾಗೂ ಗಾಯಗೊಂಡ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು. “ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಲ್ಲ ಎಂದು ಮೃತರ ಸಂಬಂಧಿಕರು ಹೇಳಿದ್ದು, ಕಾಲ್ತುಳಿತಕ್ಕೆ ಕಾರಣವಾಯಿತು” ಎಂದು ಅವರು ಹೇಳಿದರು.
ಮಂಗಳವಾರ ಹತ್ರಾಸ್ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ್ದು, ಹೆಚ್ಚಾಗಿ ಮಹಿಳೆಯರು ಬಳಿಯಾಗಿದ್ದಾರೆ.
“ದುರಂತವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ; ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.
“ಇದೊಂದು ದುಃಖದ ಘಟನೆ; ಹಲವಾರು ಜನರು ಸಾವನ್ನಪ್ಪಿದ್ದಾರೆ. ನಾನು ಇದನ್ನು ರಾಜಕೀಯ ದೃಷ್ಟಿಕೋನದಿಂದ ಹೇಳಲು ಬಯಸುವುದಿಲ್ಲ. ಆದರೆ, ಆಡಳಿತದ ಕಡೆಯಿಂದ ಲೋಪಗಳಿವೆ, ಮುಖ್ಯ ವಿಷಯವೆಂದರೆ ಅವರು ಬಡವರಾಗಿರುವುದರಿಂದ ಗರಿಷ್ಠ ಪರಿಹಾರವನ್ನು ನೀಡಬೇಕು. ಪರಿಹಾರದಲ್ಲಿ ವಿಳಂಬವಾದರೆ, ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ನಾನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೇಳುತ್ತೇನೆ. ನಾನು ಸತ್ತವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದೇನೆ, ಅವರು ಆಘಾತಕ್ಕೊಳಗಾಗಿದ್ದಾರೆ ಮತ್ತು ನಾನು ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ” ಎಂದು ಅವರು ಭೇಟಿಯ ನಂತರ ಹೇಳಿದರು.
ರಾಹುಲ್ ಗಾಂಧಿಯವರ ಜೊತೆಗಿದ್ದ ಕಾಂಗ್ರೆಸ್ ನಾಯಕ ಡ್ಯಾನಿಶ್ ಅಲಿ, ಯುಪಿ ಸರ್ಕಾರವು ದುರಂತವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಹೇಳಿದರು.
“ಇದೊಂದು ದುರದೃಷ್ಟಕರ ಘಟನೆ. ನಾವು ಬೆಳಗ್ಗೆ 5 ಗಂಟೆಗೆ ರಾಹುಲ್ ಗಾಂಧಿ ಅವರೊಂದಿಗೆ ಹೊರಟೆವು. ಸಂತ್ರಸ್ತರ ಕಥೆಗಳು ಹೃದಯ ವಿದ್ರಾವಕವಾಗಿವೆ… ಆಡಳಿತದ ಯಾವುದೇ ಜವಾಬ್ದಾರಿಯನ್ನು ನಿಗದಿಪಡಿಸಲಾಗಿಲ್ಲ ಅಥವಾ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ” ಎಂದು ಅವರು ಹೇಳಿದರು.
आज नेता प्रतिपक्ष श्री राहुल गांधी जी हाथरस हादसे के पीड़ित परिवारों से मिले और उन्हें भरोसा दिलाया कि इस दुख की घड़ी में हम सब साथ हैं।
पीड़ितों से मुलाकात के बाद राहुल गांधी जी ने राज्य सरकार से अपील की कि पीड़ित परिवारों के लिए यह बहुत मुश्किल समय है। उन्हें उचित मुआवजा और… pic.twitter.com/hFS2fzzk7q
— Priyanka Gandhi Vadra (@priyankagandhi) July 5, 2024
ಭೋಲೆ ಬಾಬಾ ಅವರಿಗೆ ಅರ್ಪಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯ ಆರು ಸಂಘಟಕರನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಅಚ್ಚರಿ ಎಂದರೆ, ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರಿಲ್ಲ.
ಶುಕ್ರವಾರ ಬೆಳಗ್ಗೆ ರಾಹುಲ್ ಗಾಂಧಿ ಹತ್ರಾಸ್‌ಗೆ ತೆರಳಿದರು. ದಾರಿಯಲ್ಲಿ ಎರಡು ಅಲಿಗಢ್ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕಾಲ್ತುಳಿತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಭೇಟಿ ಮಾಡಿದರು.
ಇದನ್ನೂ ಓದಿ; ಅಲಿಘರ್‌ನ ಪಿಲಾಖ್ನಾ ಗ್ರಾಮದಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್


