Homeಮುಖಪುಟ'ಕಾರುಗಳ ಮೇಲೆ ಕಬ್ಬಿಣದ ಸರಳುಗಳು ಬಿದ್ದಾಗ ದೊಡ್ಡ ಶಬ್ದವಿರಲಿಲ್ಲ..'; ದೆಹಲಿ ವಿಮಾನ ನಿಲ್ದಾಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

‘ಕಾರುಗಳ ಮೇಲೆ ಕಬ್ಬಿಣದ ಸರಳುಗಳು ಬಿದ್ದಾಗ ದೊಡ್ಡ ಶಬ್ದವಿರಲಿಲ್ಲ..’; ದೆಹಲಿ ವಿಮಾನ ನಿಲ್ದಾಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

- Advertisement -
- Advertisement -

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ನಲ್ಲಿ ಛಾವಣಿಯ ಒಂದು ಭಾಗದ ರಾಡ್‌ಗಳು ಕುಸಿದು ಬಿದ್ದಾಗ ಏನೂ ಮುರಿಯುವ ದೊಡ್ಡ ಶಬ್ದವಿರಲಿಲ್ಲ ಎಂದು ಘಟನೆಯ ಸ್ಥಳದಲ್ಲಿದ್ದ ಕ್ಯಾಬ್ ಚಾಲಕ ಶುಕ್ರವಾರ ತಿಳಿಸಿದ್ದಾರೆ.

ಸ್ಥಳದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ರಾಡ್‌ಗಳು ಬಿದ್ದ ನಂತರವೆ ಘಟನೆ ನಡೆದಿರುವ ಬಗ್ಗೆ ಜನರಿಗೆ ತಿಳಿಯಿತು. ಸ್ಥಳದಲ್ಲಿದ್ದವರು ಸಹಾಯಕ್ಕಾಗಿ ಕೂಗಿಕೊಂಡಿದ್ದರಿಂದ ಗೊಂದಲ ಉಂಟಾಯಿತು ಎಂದು ಅವರು ಹೇಳಿದರು.

ಶುಕ್ರವಾರ ದೆಹಲಿಯಲ್ಲಿ ಭಾರೀ ಮಳೆಯ ನಡುವೆ, ಟರ್ಮಿನಲ್-1 ನಿರ್ಗಮನ ಪ್ರದೇಶದಲ್ಲಿನ ಮೇಲ್ಛಾಣವಣಿಯು ಮುಂಜಾನೆ 5 ಗಂಟೆಯ ಸುಮಾರಿಗೆ ಕುಸಿದು, ಆರು ಮಂದಿ ಗಾಯಗೊಂಡಿದ್ದು; ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೇಲ್ಛಾವಣಿ ಕುಸಿದಿದ್ದರಿಂದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ ಕಾರುಗಳಿಗೆ ಹಾನಿಯಾಗಿದೆ.

ಘಟನೆ ನಡೆದಾಗ ಕಡಿಮೆ ಜನರು ಮತ್ತು ಕಡಿಮೆ ದಟ್ಟಣೆಯಿದ್ದರು ಎಂದು ಸ್ಥಳದಲ್ಲಿದ್ದ ಇನ್ನೊಬ್ಬ ಕ್ಯಾಬ್ ಚಾಲಕ ಹೇಳಿದರು.

ಕರ್ತವ್ಯದಲ್ಲಿದ್ದ ಹಲವಾರು ಸಿಆರ್‌ಪಿಎಫ್ ಸಿಬ್ಬಂದಿ ಕೂಡಲೇ ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಸ್ಥಳೀಯ ಪೊಲೀಸರಿಗೆ ಮತ್ತು ಅಗ್ನಿಶಾಮಕ ಇಲಾಖೆಗೆ ಎಚ್ಚರಿಕೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಬೀಮ್‌ಗಳು ತುಂಬಾ ಭಾರವಾಗಿರುವುದರಿಂದ, ನಾವು ಅಗ್ನಿಶಾಮಕ ಇಲಾಖೆಯನ್ನು ತಕ್ಷಣವೇ ‘ಅರ್ಥ್‌ ಮೂವರ್ಸ್‌’ ಕಳುಹಿಸಲು ಹೇಳಿದೆವು. ಅಗ್ನಿಶಾಮಕ ಟೆಂಡರ್‌ಗಳು ಮತ್ತು ಅವರ ಅಧಿಕಾರಿಗಳು ಸಹ 5.30 ರ ಸುಮಾರಿಗೆ ಯಂತ್ರಗಳೊಂದಿಗೆ ಸ್ಥಳಕ್ಕೆ ತಲುಪಿದರು” ಎಂದು ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೇಳಿದರು.

ಉಪ ಪೊಲೀಸ್ ಕಮಿಷನರ್ (ಐಜಿಐ) ಉಷಾ ರಂಗಣ್ಣಿ ಮಾತನಾಡಿ, ಛಾವಣಿ ಕುಸಿದ ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಘಟನಾ ಸ್ಥಳದ ಬಳಿ ಯಾರೂ ನಿಲ್ಲದಂತೆ ಖಚಿತಪಡಿಸಿಕೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ.

“ಪೊಲೀಸ್ ಮತ್ತು ಸರ್ಕಾರದ ವಿವಿಧ ತಂಡಗಳು ತನಿಖೆಗಾಗಿ ಈ ಸ್ಥಳಕ್ಕೆ ಭೇಟಿ ನೀಡುತ್ತವೆ. ನಾವು ಉದ್ದೇಶಕ್ಕಾಗಿ ಪ್ರದೇಶವನ್ನು ಸುತ್ತುವರೆದಿದ್ದೇವೆ. ನಮ್ಮ ಪೊಲೀಸ್ ಸಿಬ್ಬಂದಿ, ಭದ್ರತಾ ಪಡೆಗಳು ಮತ್ತು ಡಿಎಫ್‌ಎಸ್‌ಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು” ಎಂದು ಡಿಸಿಪಿ ಹೇಳಿದರು.

ಪ್ರಸ್ತುತ, ಎಲ್ಲ ಎಲಿವೇಟರ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಪ್ರಯಾಣಿಕರಿಗೆ ಮೆಟ್ಟಿಲುಗಳನ್ನು ಬಳಸಲು ಸೂಚಿಸಲಾಗಿದೆ ಎಂದು ಡಿಸಿಪಿ ರಂಗಾನಿ ತಿಳಿಸಿದ್ದಾರೆ.

ಗಾಯಗೊಂಡವರನ್ನು ಆರಂಭದಲ್ಲಿ ಹರಿಯಾಣದ ಗುರುಗ್ರಾಮ್‌ನಲ್ಲಿರುವ ಮೇದಾಂತ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಇಲ್ಲಿನ ಸಫ್ದರ್‌ಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ಕಳಪೆ ಮೂಲಸೌಕರ್ಯಕ್ಕೆ ಕ್ರಿಮಿನಲ್ ನಿರ್ಲಕ್ಷ್ಯ ಕಾರಣ..’; ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತಕ್ಕೆ ಖರ್ಗೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...