Homeಮುಖಪುಟಮುಡಾ ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿಲ್ಲ, ರಾಜಕೀಯ ದುರುದ್ದೇಶಕ್ಕೆ ಇಡಿ ವರದಿಯಲ್ಲಿ ನನ್ನ ಹೆಸರು: ಸಿಎಂ

ಮುಡಾ ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿಲ್ಲ, ರಾಜಕೀಯ ದುರುದ್ದೇಶಕ್ಕೆ ಇಡಿ ವರದಿಯಲ್ಲಿ ನನ್ನ ಹೆಸರು: ಸಿಎಂ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ (ಮುಡಾ) ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿಲ್ಲ, ರಾಜಕೀಯ ದುರುದ್ಙೇಶದಿಂದ ಜಾರಿ ನಿರ್ದೇಶನಾಲಯ (ಇಡಿ) ವರದಿಯಲ್ಲಿ ನನ್ನ ಹೆಸರು ಉಲ್ಲೇಖಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ ಕ್ರಮ ಕಾನೂನು ಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಡಿಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಿದ್ದಾರೆ. ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ” ಎಂದರು.

“ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಪತ್ನಿಗೆ ಇಡಿಯವರ ನೋಟೀಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ, ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ” ಎಂದರು.

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಯಾವುದೇ ಹಣ ವರ್ಗಾವಣೆ ನಡೆದಿಲ್ಲ ಎಂದು ಹೈಕೋರ್ಟ್ ಗಮನಿಸಿದೆ. ಇದು ಪಿಎಂಎಲ್‌ಎ ಅಡಿಯಲ್ಲಿ ಬರುವುದಿಲ್ಲ. ಇದು ಇಡೀ ಮುಡಾ ಪ್ರಕರಣಕ್ಕೆ ಅನ್ವಯಿಸುತ್ತದೆ” ಎಂದು ಅವರು ಹೇಳಿದರು.

“ಇದನ್ನು ಹೈಕೋರ್ಟ್ ಗಮನಿಸಿದೆ ಮತ್ತು ನಟೇಶ್‌ಗೆ ನೋಟಿಸ್ ಜಾರಿ ಮಾಡಲು, ಅವರ ಮನೆಯನ್ನು ಶೋಧಿಸಲು, ಅವರನ್ನು ಸಮನ್ಸ್ ಮಾಡಲು ಜಾರಿ ನಿರ್ದೇಶನಾಲಯ ತೆಗೆದುಕೊಂಡ ಕ್ರಮ ಕಾನೂನುಬದ್ಧವಲ್ಲ, ಅದು ತಪ್ಪು” ಎಂದು ಅವರು ಹೇಳಿದರು.

ಗುರುವಾರ ಬಿಡುಗಡೆಯಾದ ಇಡಿ ವರದಿಯಲ್ಲಿ ಉಲ್ಲೇಖಿಸಲಾದ ಅವರ ಹೆಸರು ಮತ್ತು ಅವರ ಕುಟುಂಬ ಸದಸ್ಯರ ಹೆಸರುಗಳ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿದೆ ಎಂದು ತೋರಿಸಲು ಪುರಾವೆ ಏನು? ಅದರಲ್ಲಿ ಯಾವುದೇ ಅಕ್ರಮವಿಲ್ಲ” ಎಂದರು.

“ಗುರುವಾರ (ಜನವರಿ 30) ಇಡಿ ಬಿಡುಗಡೆ ಮಾಡಿದ ವರದಿಯು ಮುಟ್ಟುಗೋಲು ವರದಿಯಾಗಿದೆ. ಅವರು ಉದ್ದೇಶಪೂರ್ವಕವಾಗಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದರಿಂದ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಏಕೆಂದರೆ, ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ನನ್ನ ಹೆಸರನ್ನು ಕೆಡಿಸಲು, ಜನರಿಗೆ ಸುಳ್ಳು ಸಂದೇಶ ನೀಡಲು ಇದರ ಹಿಂದೆ ಗಂಭೀರ ರಾಜಕೀಯ ಪ್ರಯತ್ನ ಮತ್ತು ದುರುದ್ದೇಶಪೂರಿತ ಉದ್ದೇಶವಿದೆ. ಅವರು ಅದರಲ್ಲಿ ಯಶಸ್ವಿಯಾಗುವುದಿಲ್ಲ” ಎಂದು ಅವರು ಹೇಳಿದರು.

“ನಾವು ನ್ಯಾಯಾಲಯವನ್ನು ಸಂಪರ್ಕಿಸಿದ್ದೇವೆ. ನನ್ನ ಪತ್ನಿಗೆ ಇಡಿ ಸಮನ್ಸ್ ಜಾರಿ ಸಂಬಂಧ ನ್ಯಾಯಾಲಯ ಎರಡು ಬಾರಿ ತಡೆಯಾಜ್ಞೆ ನೀಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ನನ್ನ ವಿರುದ್ಧ ಮೊಕದ್ದಮೆ ಹೂಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಲೋಕಾಯುಕ್ತರು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತವು ಸ್ವತಂತ್ರ ಸಂಸ್ಥೆಯಲ್ಲವೇ” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...