Homeಕರ್ನಾಟಕಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಹಲವು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದೆ ರೈತರು ಕಂಗಾಲಾಗಿದ್ದಾರೆ.

- Advertisement -
- Advertisement -

ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆನಾಶದಿಂದಾಗಿ ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು ನಗರದ ಹಲವೆಡೆ ಮನೆಗೋಡೆಗಳು ಕುರಿದು ಬಿದ್ದಿವೆ. ಕಾಡುಗೋಡಿ ಸಮೀಪದ ರೈಲ್ವೆ ಹಳಿ ಸಮೀಪದ ಅಂಗಡಿಯೊಂದು ಕುಸಿದಿದ್ದು, ಕಟ್ಟಡದಲ್ಲೇ ಮಲಗಿದ್ದ ವೃದ್ಧರೊಬ್ಬರನ್ನು ಮುಂಜಾಗ್ರತೆ ವಹಿಸಿ ರಕ್ಷಿಸಲಾಗಿದೆ. ಶಂಕರಮಠ ವಾರ್ಡ್‌ನ ಆಂಜನೇಯ ಗುಡ್ಡ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಾದರಾಯನಪುರದ ಹರಿಶ್ಚಂದ್ರ ದೇವಸ್ಥಾನ ಸಮೀಪ ಮಂಜುಗಡ್ಡೆ ತಯಾರಿಕಾ ಕಾರ್ಖಾನೆಯ ಗೋದಾಮಿನ ಗೋಡೆ ನೆಲಕ್ಕುರುಳಿದ್ದು, ಪಕ್ಕದಲ್ಲಿದ್ದ ಆಟೋಗಳು ಜಖಂಗೊಂಡಿವೆ.  ಹಲವೆಡೆ ಮರಗಳು ಮುರಿದುಬಿದ್ದಿರುವ ವರದಿಗಳಾಗಿವೆ. ಕ್ವೀನ್‌ ರಸ್ತೆ, ಮಹಾವೀರ ರಸ್ತೆಯಲ್ಲಿ ವಾರ್ತಾ ಇಲಾಖೆ ಕಚೇರಿ ಸಮೀಪ, ಥಣಿಸಂದ್ರ, ಕೆ.ಆರ್‌‌.ಪುರದಿಂದ ಟಿ.ಸಿ.ಪಾಳ್ಯಕ್ಕೆ ರಸ್ತೆ, ಬನಶಂಕರಿ 2ನೇ ಹಂತದಲ್ಲಿ ಮರಗಳು ಮುರಿದುಬಿದ್ದಿವೆ. ಬಹುತೇಕ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರಾ ಮಳೆಗೆ ರಸ್ತೆಗಳು ಕಾಣದಂತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ತತ್ತರ

ಮೈಸೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿವೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕಳೆದ ಅಕ್ಟೋಬರ್‌ 19ರಂದು ಬೆಟ್ಟದ ನಂದಿ ಮಾರ್ಗದಲ್ಲಿ ಮೊದಲ ಬಾರಿಗೆ ಕುಸಿತ ಉಂಟಾಗಿತ್ತು. ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಭಾರಿಗೆ ಬೆಟ್ಟ ಕುಸಿದಿದೆ. ರಸ್ತೆ ಕುಸಿತದಿಂದಾಗಿ ಕೆಲವೆಡೆ ಮರಗಳು ನೆಲಕ್ಕುರುಳಿವೆ.

ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿ ಮನೆ ಛಾವಣಿ ಕುಸಿದಿದೆ. ಅಶೋಕರಸ್ತೆಯಲ್ಲಿ ಮಳಿಗೆಯ ಗೋಡೆ ಕುಸಿದಿದೆ. ಅಶೋಕ ರಸ್ತೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಸಮೀಪದಲ್ಲೇ ಇದ್ದವರಿಗೆ ಗೋಡೆ ಅಲುಗಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ಮನೆಗೋಡೆ ಕುಸಿದು, ಬಡ ಕುಟುಂಬ ಕಂಗಾಲಾಗಿದೆ.

ಬೆಳೆನಾಶ, ರೈತ ಕಂಗಾಲು

ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ರಾಗಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ. 14,500 ಹೆಕ್ಟೇರ್‌ ಬೆಳೆ ಕೈತಪ್ಪಿದೆ ಎಂದು ತುಮಕೂರು ಜಿಲ್ಲಾ ವರದಿ ಹೇಳಿದೆ. ಚಿಕ್ಕ ಬಳ್ಳಾಪುರದಲ್ಲಿ 905.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ.

ಕೋಲಾರ ಜಿಲ್ಲೆಯೊಂದರಲ್ಲಿಯೇ ರಾಗಿ 36 ಸಾವಿರ ಹೆಕ್ಟೇರ್‌ ರಾಗಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ. 5.78 ಕೋಟಿ ಮೌಲ್ಯದ ತರಕಾರಿ, ಸುಮಾರು 1,370 ಹೆಕ್ಟೇರ್‌ಗಳಲ್ಲಿ ಕೊಳೆತು ಹೋಗುತ್ತಿದೆ. ರಾಗಿ, ಮುಸುಕಿನ ಜೋಳ, ನೆಲಗಡಲೆ, ತೊಗರಿ, ಭತ್ತ ಸೇರಿದಂತೆ 34,554 ಹೆಕ್ಟೇರ್‌ ಬೆಳೆ ರೈತರ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಚೆನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆಗಳಲ್ಲಿ 2,150 ಹೆಕ್ಟೇ‌ರ್‌ ಪ್ರದೇಶದ ಭತ್ತ ರೈತರ ಕೈ ಸೇರುವುದು ಅನುಮಾನ. ಶಿವಮೊಗ್ಗ ಜಿಲ್ಲೆಯಲ್ಲಿ ಕಟಾವಿಗೆ ಅಡ್ಡಿಉಂಟಾಗಿದೆ. ಜಿಲ್ಲೆಯಲ್ಲಿನ ಕೃಷಿ ಭೂಮಿಯಲ್ಲಿ 78,100 ಹೆಕ್ಟೇರ್‌‌ನಲ್ಲಿ ಭತ್ತ, 52,000 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕಟಾವು ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಹಾಸನ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಾಗಿ ಮತ್ತು ಮೆಕ್ಕೆಜೋಳ ಬೆಳೆದಿದ್ದ ರೈತರು ಪರಿತಪಿಸುತ್ತಿದ್ದಾರೆ. 675 ಹೆಕ್ಟೇರ್‌‌ ಮೆಕ್ಕೆಜೋಳ, 19,403 ಹೆಕ್ಟೇರ್‌‌ ರಾಗಿ ನೆಲಕಚ್ಚಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಪರಿಸ್ಥಿತಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಅಂದರಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಾಮರಾಜನಗರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ನ.19, 20ರಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೂರು ದಶಕಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದ ಎಂದು ವರದಿಗಳು ಹೇಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿರಿ: ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...