‘ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಕಾಂಗ್ರೆಸ್ ಪಟ್ಟುಬಿಡುವುದಿಲ್ಲ. ಈ ಕಾಯ್ದೆಗಳಿಂದ ರೈತರಿಗೇನು ಪ್ರಯೋಜನವಿಲ್ಲ. ಇವು ರೈತರನ್ನು ಮುಗಿಸಿಬಿಡುವ ಕಾಯ್ದೆಗಳಾಗಿವೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ವಾದ್ರಾ ಅವರು ಇಂದು ದೆಹಲಿ ಲೆಫ್ಟಿನೆಂಟ್ ಗವೌರ್ನರ್ ಅನಿಲ್ ಬೈಜಾಲ್ ಅವರ ಅಧಿಕೃತ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
देश के अन्नदाता अपने अधिकार के लिए अहंकारी मोदी सरकार के ख़िलाफ़ सत्याग्रह कर रहे हैं।
आज पूरा भारत किसानों पर अत्याचार व पेट्रोल-डीज़ल के बढ़ते दामों के विरुद्ध आवाज़ बुलंद कर रहा है।
आप भी जुड़िये और इस सत्याग्रह का हिस्सा बनिये।#SpeakUpForKisanAdhikar pic.twitter.com/3EG34bUQxm
— Rahul Gandhi (@RahulGandhi) January 15, 2021
‘ನರೇಂದ್ರ ಮೋದಿ ಸರ್ಕಾರವು ಈ ಹಿಂದೆ ಭೂ ಸ್ವಾಧೀನ ಕಾಯ್ದೆಯ ಮೂಲಕ ರೈತರ ಭೂಮಿ ಕಸಿದುಕೊಳ್ಳಲು ಯತ್ನಿಸಿದಾಗ ಕಾಗ್ರೆಸ್ ಪಕ್ಷವು ಸಹ ಹೋರಾಡಿ ತಡೆದಿತ್ತು. ಪ್ರಸ್ತುತ ಬಿಜೆಪಿ ಮತ್ತವರ ಇಬ್ಬರು-ಮೂವರು ಸ್ನೇಹಿತರು ಸೇರಿ ರೈತರ ಮೇಲೆ ಹಲ್ಲೆ ನಡೆಸುತ್ತಿದ್ದು, ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ’ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ರೈತರ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ನಡೆಸುತ್ತಿರುವ `ಸ್ಪೀಕ್ ಅಪ್ ಫಾರ್ ಕಿಸಾನ್ ಅಧಿಕಾರ್’ ಆಂದೋಲನದ ಭಾಗವಾಗಿ ರೈತರ ಹಕ್ಕುಗಳ ದಿನದ ಪ್ರಯುಕ್ತ ಇಂದು ಕಾಗ್ರೆಸ್ ಪಕ್ಷದ ಕಾರ್ಯಕರ್ತರು ಎಲ್ಲಾ ರಾಜ್ಯಗಳ ರಾಜ್‌ಭವನ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಸಾವಿರಾರು ರೈತರು ಕಳೆದ 51 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತ ಪ್ರತಿನಿಧಿಗಳು ಕೇಂದ್ರ ಮಂತ್ರಿಗಳೊಂದಿಗೆ ಇಂದು ಒಂಬತ್ತನೇ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ