Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...