Homeಮುಖಪುಟ"ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ": ಸಂಸದರ ಅಮಾನತು ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ

“ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ”: ಸಂಸದರ ಅಮಾನತು ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ

- Advertisement -
- Advertisement -

“ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವಿಚಿತ್ರವಾಗಿ ವರ್ತಿಸುತ್ತಾರೆ” ಎಂದು ಸಂಸತ್‌ನಿಂದ ವಿಪಕ್ಷಗಳ ಸಂಸದರನ್ನು ಅಮಾನತು ಮಾಡಿರುವ ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅವರು (ವಿಪಕ್ಷ ಸಂಸದರು) ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅಮಾನತು ಮಾಡಲಾಗಿದೆ. ಎಲ್ಲರೂ ಸಂಸತ್ತಿನ ನಿಯಮಗಳ ಪ್ರಕಾರ ವರ್ತಿಸಬೇಕು. ಅವರು ಹಾಗೆ ಮಾಡಿಲ್ಲ, ಅದಕ್ಕಾಗಿ ಅಮಾನತ್ತಾಗಿದ್ದಾರೆ. ಅದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದ್ದಾರೆ.

ಹೇಮಾ ಮಾಲಿನಿಯವರ ಈ ಹೇಳಿಕೆಯ ವಿಡಿಯೋ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ತೆಲಂಗಾಣದ ಕಾಂಗ್ರೆಸ್ ನಾಯಕ ಸಮಾ ರಾಮ ಮೋಹನ್ ರೆಡ್ಡಿ, “ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ. ಅದಕ್ಕಾಗಿ ಅಮಾನತುಗೊಂಡಿದ್ದಾರೆ. ಕೊನೆಗೂ ಬಿಜೆಪಿ ಸಂಸದೆ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸಂಸದರ ಅಮಾನತ್ತಿನ ಕಾರಣ ಬಹಿರಂಗಗೊಳಿಸಿದ್ದಾರೆ” ಎಂದು ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಯನ್ನು ಟೀಕಿಸಿದ ಹೇಮಾ ಮಾಲಿನಿ, “ಅವರು ಸಂಸತ್ ಕಾರ್ಯ ನಿರ್ವಹಿಸಲು ಬಿಡುವುದಿಲ್ಲ. ಮೋದಿ ಸರ್ಕಾರವನ್ನು ಕಿತ್ತು ಹಾಕೋದು ಅವರ ಉದ್ದೇಶ. ಆದರೆ, ಅದು ಸಫಲವಾಗುವುದಿಲ್ಲ” ಎಂದಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 14ರಿಂದ 18ರವರೆಗೆ ಸಂಸತ್ತಿನ ಉಭಯ ಸದನಗಳಿಂದ ಒಟ್ಟು 141 ಸಂಸದರನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 14ರಂದು ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು. ಈ ಮೂಲಕ ಅಮಾನತ್ತಾದ ಒಟ್ಟು ಸಂಸದರ ಸಂಖ್ಯೆ 92 ಆಗಿತ್ತು. ನಿನ್ನೆ(ಡಿ.19) ಉಭಯ ಸದನಗಳಿಂದ 49 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಅಮಾನತ್ತಾದ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ: ಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ಪ್ರವೇಶಿಸದಂತೆ ನಿರ್ಬಂಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...