Homeಮುಖಪುಟ'ತಮ್ಮ ಕಚೇರಿಗೆ ಬಂದು ಹೇಳಿಕೆ ದಾಖಲಿಸಿಕೊಳ್ಳಬಹುದು...'; ಇಡಿ ಅಧಿಕಾರಿಗಳಿಗೆ ಪತ್ರ ಬರೆದ ಸೊರೇನ್

‘ತಮ್ಮ ಕಚೇರಿಗೆ ಬಂದು ಹೇಳಿಕೆ ದಾಖಲಿಸಿಕೊಳ್ಳಬಹುದು…’; ಇಡಿ ಅಧಿಕಾರಿಗಳಿಗೆ ಪತ್ರ ಬರೆದ ಸೊರೇನ್

- Advertisement -
- Advertisement -

‘ಜನವರಿ 20ರಂದು ತಮ್ಮ ಸಚಿವಾಲಯಕ್ಕೆ ಬಂದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು’ ಎಂದು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳಿಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಜನವರಿ 16 ರಿಂದ 20ರ ನಡುವೆ ಪ್ರಕರಣದ ವಿಚಾರಣೆಗೆ ಲಭ್ಯವಾಗುವಂತೆ ಇಡಿ ಶನಿವಾರ ಅವರಿಗೆ ಪತ್ರವನ್ನು ಕಳುಹಿಸಿದೆ ಎಂದು ಮೂಲಗಳು ಹೇಳಿದ್ದು, ಸೊರೇನ್ ತನಿಖಾ ಸಂಸ್ಥೆಯ ಏಳು ಸಮನ್ಸ್‌ಗಳನ್ನು ತಪ್ಪಿಸಿದ ನಂತರ ಇಡಿ ಈ ಪತ್ರವನ್ನು ಕಳುಹಿಸಿದೆ.

ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ಸೊರೇನ್ ಅವರ ಉತ್ತರದ ಪತ್ರ ಸಲ್ಲಿಸಿದ್ದು, ಅವರು ಜನವರಿ 20 ರಂದು ರಾಂಚಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪ್ರಕರಣದ ಕುರಿತು ತಮ್ಮ ಹೇಳಿಕೆಯನ್ನು ದಾಖಲಿಸಲು ಲಭ್ಯವಿರುತ್ತಾರೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಭೂ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆಗೆ ಸಂಬಂಧಿಸಿದಂತೆ, ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ 2011ರ ಬ್ಯಾಚ್ ಐಎಎಸ್ ಅಧಿಕಾರಿ ಛಾವಿ ರಂಜನ್ ಸೇರಿದಂತೆ 14 ಮಂದಿಯನ್ನು ಈ ಪ್ರಕರಣದಲ್ಲಿ ಸಂಸ್ಥೆ ಇದುವರೆಗೆ ಬಂಧಿಸಿದೆ.

ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಂಧು ಟಿರ್ಕಿ ಮಾತನಾಡಿ, ‘ಬುಡಕಟ್ಟು ಸಿಎಂ ಒಬ್ಬರನ್ನು ಕೇಂದ್ರ ಸಂಸ್ಥೆ ಟಾರ್ಗೆಟ್ ಮಾಡುತ್ತಿರುವ ರೀತಿಗೆ ಬುಡಕಟ್ಟು ಸಮುದಾಯ ಸಿಟ್ಟಿಗೆದ್ದಿದೆ. ಪ್ರತಿ 12 ವರ್ಷಗಳಿಗೊಮ್ಮೆ ಸಮುದಾಯವು ಬೇಟೆಯಾಡುತ್ತದೆ. ಅವರು ಕೋಪಗೊಂಡರೆ ಇಡಿ ಅಥವಾ ಸಿಬಿಐ ಅನ್ನು ನೋಡುವುದಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ; ಜಾತಿ ಆಧಾರಿತ ಬಹಿಷ್ಕಾರಕ್ಕೆ ಪ್ರೋತ್ಸಾಹ; ಪೇಜಾವರ ಶ್ರೀ, ಅಜಿತ್ ಹನುಮಕ್ಕನವರ್ ವಿರುದ್ಧ ದೂರು ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...