Homeಕರ್ನಾಟಕನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

ನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

- Advertisement -
- Advertisement -

ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ನನ್ನ ಚಲನವಲನಗಳ ಬಗ್ಗೆ ತಿಳಿಯಲು ನಾಗಪುರದಿಂದ ತಂಡವನ್ನು ಕಳುಹಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

”ನನ್ನ ಚಲನವಲನ ಗಮನಿಸಲು ನಾಗಪುರದಿಂದ ತಂಡ ಬಂದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಒಂದು ವೇಳೆ ಬಂದಿದ್ದರೆ ನನ್ನ ಚಲನವಲನ ಗಮನಿಸುವುದರೊಳಗಾಗಿ ಚುನಾವಣೆಯೇ ಮುಗಿದಿರುತ್ತದೆ” ಎಂದು ಶೆಟ್ಟರ್ ಹೇಳಿದರು.

”ಬಿಜೆಪಿಯವರು ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅವಮಾನದ ಬಗ್ಗೆ ರಾಹುಲ್ ಗಾಂಧಿ ಜೊತೆ ಗಂಭೀರ ಚರ್ಚೆ ಮಾಡಲಾಗಿದೆ. ಅವರು ಕೂಡ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದೂ, ನಾನು ಮಾಹಿತಿ ನೀಡಿದ್ದೇನೆ” ಎಂದರು.

”ನಾಗಪುರದಲ್ಲಿ ಅಷ್ಟೊಂದು ಎಕ್ಸಪರ್ಟ್ ತಂಡಗಳು ಇದ್ದಿದದ್ದರೆ, ಇತ್ತೀಚೆಗೆ ಅಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಏಕೆ ಸೋಲನ್ನು ಅನುಭವಿಸುತ್ತಿತ್ತು?” ಎಂದು ಪ್ರಶ್ನಿಸಿದ್ದಾರೆ.

”ಚುನಾವಣೆ ಎಂದ ಮೇಲೆ ನಕರಾತ್ಮಕ ಹಾಗೂ ಧನಾತ್ಮಕ ಅಭಿಪ್ರಾಯಗಳು ಬಂದೇ ಬರುತ್ತವೆ. ನನ್ನ ಬಗ್ಗೆಯೂ ಇದೀಗ ನೆಗೆಟೀವ್ ಅಭಿಪ್ರಾಯಗಳು ಬಂದಿವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ಹಲವು ನೆಗೇಟಿವ್ ಅಭಿಪ್ರಾಯಗಳನ್ನು ನಾನು ಎದುರಿಸಿದ್ದೇನೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದರು.

”ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಮಾನ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಐವತ್ತು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಾರೆ. ಹಾಗೆಯೆ ಹಾನಗಲ್‌, ಹುಬ್ಬಳ್ಳಿ-ಧಾರವಾಡದಲ್ಲೂ ಪ್ರಚಾರ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಅಲ್ಲದೆ ನನಗೂ ಪ್ರಚಾರಕ್ಕಾಗಿ ಕರೆಯುತ್ತಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಜೊತೆ ಶೆಟ್ಟರ್ ಮುಕ್ತ ಚರ್ಚೆ:

”ರಾಹುಲ್ ಗಾಂಧಿ ಅವರು ರಾಜ್ಯ ರಾಜಕಾರಣ ಹಾಗೂ ಇತರ ವಿಷಯಗಳ ಬಗ್ಗೆ ಮುಕ್ತವಾಗಿ ನನ್ನೊಂದಿಗೆ ಚರ್ಚಿಸಿದರು. ಬಿಜೆಪಿ ಒಳಗಿನ ಬೆಳವಣಿಗೆ ಮತ್ತು ಲಿಂಗಾಯತರ ಕಡೆಗಣನೆ ಬಗ್ಗೆಯೂ ಚರ್ಚೆ ನಡೆಯಿತು. ಆಗ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಜೊತೆಗಿದ್ದರು” ಎಂದು ಪ್ರಶ್ನೆಯೊಂದಕ್ಕೆ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

”ಹಾನಗಲ್‌ನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಗೆ ಬರುವಂತೆ ನನಗೂ ಆಹ್ವಾನ ನೀಡಿದ್ದಾರೆ. ಉತ್ತರ ಕರ್ನಾಟಕದ ವಿವಿಧೆಡೆ ಪ್ರಚಾರಕ್ಕೆ ಬರುವಂತೆ ಒತ್ತಡ ಬರುತ್ತಿದೆ. ಈ ಕುರಿತು ನನ್ನೊಂದಿಗೆ ಚರ್ಚಿಸಿ ವೇಳಾಪಟ್ಟಿ ಸಿದ್ದಪಡಿಸುವುದಾಗಿ ಕಾಂಗ್ರೆಸ್‌ನ ವೇಣುಗೋಪಾಲ್ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ರಾಹುಲ್ ಅವರು ಪ್ರಚಾರ ಮಾಡುವ ಸಾಧ್ಯತೆ ಇದ್ದು, ರಾಜ್ಯದ ನಾಯಕರು ಅದನ್ನು ಖಚಿತಪಡಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

”ಕಾಂಗ್ರೆಸ್ ಈ ಸಲ‌ ಐವತ್ತಕ್ಕೂ ಹೆಚ್ಚು ಸೀಟುಗಳನ್ನು ಲಿಂಗಾಯತ ಸಮುದಾಯಕ್ಕೆ ನೀಡಿದೆ‌. ನನ್ನ ಕ್ಷೇತ್ರದಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ನ ಅಲ್ತಾಫ‌ ಕಿತ್ತೂರ ಅವರೊಂದಿಗೆ ಪಕ್ಷದ ಮುಖಂಡರು ಈಗಾಗಲೇ ಮಾತನಾಡಿದ್ದಾರೆ. ನಾನೂ ಸಹ ಮಾತುಕತೆ ನಡೆಸಲಿದ್ದೇನೆ. ಸದ್ಯದಲ್ಲೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...