Homeಮುಖಪುಟಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ - ವಕೀಲರ ಹೇಳಿಕೆ

ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸೆ.14 ರಂದು ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆ.29 ರಂದು ಯುವತಿ ಸಾವನ್ನಪ್ಪಿದಳು.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿನ ದಲಿತ ಬಾಲಕಿಯ ಮೇಲಿನ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಆಕೆಯನ್ನು ಸಾಮೂಹಿಕ ಅತ್ಯಾಚಾರಗೈದು ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ ಶೀಟ್ ಸಲ್ಲಿಸಿದೆ ಎಂದು ಸಂತ್ರಸ್ತೆಯ ಪರ ವಕೀಲರು ತಿಳಿಸಿದ್ದಾರೆ.

ಅಲ್ಲದೆ ಆರೋಪಿಗಳ ಮೇಲೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಹಾಕಲಾಗಿದೆ ಎಂದು ಸಂತ್ರಸ್ತೆಯ ಪರ ವಕೀಲರ ಹೇಳಿಕೆ ಆಧರಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹತ್ರಾಸ್ ಕೋರ್ಟ್‌ನಲ್ಲಿ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಸಿದ ನಂತರ ಈ ಹೇಳಿಕೆ ಹೊರಬಿದ್ದಿದೆ.

ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸೆ.14 ರಂದು ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆ.29 ರಂದು ಯುವತಿ ಸಾವನ್ನಪ್ಪಿದಳು. ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಪೊಲೀಸರು ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಬಲವಂತವಾಗಿ ಶವಸಂಸ್ಕಾರ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿತ್ತು. ಈ ಘಟನೆ ಖಂಡಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ದಾಖಲಾಗಿದ್ದವು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಮೇಲ್ಜಾತಿಗೆ ಸೇರಿದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಠಾಕೂರ್ ಸಮುದಾಯದವರಿಗೆ ಜಾತಿ ಸಭೆಗಳನ್ನು ನಡೆಸಲು ಅವಕಾಶ ನೀಡಿದೆ. ಸಂತ್ರಸ್ತೆಯ ಕುಟುಂಬಕ್ಕೆ ರಕ್ಷಣೆ ನೀಡದೇ, ಬಹಿರಂಗವಾಗಿ ಸವಾಲು ಹಾಕಲು ಅವಕಾಶ ನೀಡುತ್ತಿದೆ‘ ಎಂಬ ಆರೋಪ ಕೇಳಿಬಂದಿತ್ತು.

ನಂತರ ಅಲಹಾಬಾದ್ ಕೋರ್ಟ್ ಮೇಲ್ವೀಚಾರಣೆಯಲ್ಲಿ ಸಿಬಿಐ ಈ ಪ್ರಕರಣದ ತನಿಖೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...