ನನ್ನನ್ನು ಬಂಧಿಸಲು ಲಿಂಗಾಯತ ಐಪಿಎಸ್‌ ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

“ನನ್ನನ್ನು ಬಂಧಿಸಲು ಲಿಂಗಾಯತ ಐಪಿಎಸ್‌ ಅಧಿಕಾರಿಗಳನ್ನು ಕಳುಹಿಸಿದ್ದರು” ಎಂದು ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2ಎ ಮೀಸಲಾತಿಗಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೋರಾಟ ಮಾಡುತ್ತಿರುವ ಪಂಚಮಸಾಲಿ ಸಮುದಾಯದ ಧರಣಿಯಲ್ಲಿ ಮಾತನಾಡಿದ ವಿಜಯಪುರದ ಬಿಜೆಪಿ ಶಾಸಕ ಯತ್ನಾಳ್, “ಯಡಿಯೂರಪ್ಪ ನನ್ನನ್ನು ಅವರ ಶತ್ರು ಎಂದುಕೊಂಡಿದ್ದಾರೆ. ಅವರಿಗೆ ಪೈಪೋಟಿ ನೀಡುತ್ತಿದ್ದೇನೆ ಎಂದು ಭಾವಿಸಿದ್ದಾರೆ. ಆದರೆ, ನಮ್ಮ ಹೋರಾಟ ಸರ್ಕಾರದ ವಿರುದ್ಧ ಅಲ್ಲ. ಪೊಲೀಸರ ವಿರುದ್ಧವೂ ಅಲ್ಲ. ಮೀಸಲಾತಿಗಾಗಿ ಮಾತ್ರ” ಎಂದು ಹೇಳಿದರು.

“ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ನನ್ನನ್ನು ಬಂಧಿಸಲು ಲಿಂಗಾಯತ ಐಪಿಎಸ್‌ ಅಧಿಕಾರಿಗಳನ್ನು ಕಳುಹಿಸಿದ್ದರು. ಎಷ್ಟು ದಿನ ವಿಜಯೇಂದ್ರ ಅವರ ಮಾತು ಕೇಳುತ್ತೀರಿ ಎಂದು ಹೇಳಿಕಳಿಸಿದೆ” ಎಂದು ಹೇಳಿದರು.

“ಬೇರೆ ಕಾರ್ಯ ನಿಮಿತ್ತ ನಾನು ದೆಹಲಿಗೆ ಹೋದರೆ, ಹೈಕಮಾಂಡ್‌ನವರೇ ಕರೆಸಿಕೊಂಡರು ಎಂದು ಸುಮ್ಮನೆ ಸುದ್ದಿ ಮಾಡಿಸಿದರು. ಇದೆಲ್ಲ ಮಾಡುವುದು ಬಿಟ್ಟು ಮೀಸಲಾತಿ ನೀಡುತ್ತೇವೆ ಎಂದು ಸ್ವಚ್ಛ ಮನಸಿನಿಂದ ಹೇಳಿ” ಎಂದು ಯಡಿಯೂರಪ್ಪನವರನ್ನು ಆಗ್ರಹಿಸಿದರು.

ಕೂಡಲಸಂಗಮ ಪೀಠದ ಪೀಠಾಧ್ಯಕ್ಷ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, “ಮೀಸಲಾತಿಗೆ ಒತ್ತಾಯಿಸಿ ರಾಜ್ಯದಾದ್ಯಂತ ಪತ್ರ ಚಳವಳಿ ನಡೆಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸಮುದಾಯದ ಜನರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಿದ್ದಾರೆ. ಮಾ.4ರವರೆಗೆ ಈ ಪ್ರತಿಭಟನೆ ಮುಂದುವರಿಯಲಿದೆ” ಎಂದರು.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ಕ್ಯಾಟಗರಿ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್‌ ಪಾದಯಾತ್ರೆ ನಡೆಸಿರುವ ಲಿಂಗಾಯತ ಪಂಚಮಸಾಲಿ ಸಮುದಾಯವು ಬೆಂಗಳೂರಿನಲ್ಲಿ ಭಾನುವಾರ ಮಹಾರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಿತ್ತು. ಈ ರ‍್ಯಾಲಿಯಲ್ಲಿ ಸಮುದಾಯದ ಜನ ಭಾರಿ ಸಂಖ್ಯೆಯಲ್ಲಿ ಸೇರಿದ್ದರು.

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಮಾತುಗಳನ್ನು ಇಲ್ಲಿ ಕೇಳಿ.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡಿದ್ದರು


ಇದನ್ನೂ ಓದಿ: ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here