Homeಮುಖಪುಟಅವರು ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ: ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ಕೆಟ್ಟದಾಗಿ...

ಅವರು ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ: ಶಾಹೀನ್ ಬಾಗ್ ಪ್ರತಿಭಟನಾಕಾರರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಬಿಜೆಪಿ ಸಂಸದ

- Advertisement -
- Advertisement -

ಪಶ್ಚಿಮ ದೆಹಲಿಯ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ದೆಹಲಿ ಚುನಾವಣಾ ಪ್ರಚಾರದ ವೇಳೆ ಶಾಹೀನ್‌ ಬಾಗ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದು ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಲಕ್ಷಾಂತರ ಜನರು ಶಾಹೀನ್ ಬಾಗ್‌ನಲ್ಲಿ ಸೇರುತ್ತಾರೆ.  ಅವರು ನಿಮ್ಮ ಮನೆಗಳಿಗೆ ಪ್ರವೇಶಿಸುತ್ತಾರೆ, ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ, ಅವರನ್ನು ಕೊಲ್ಲುತ್ತಾರೆ. ಮೋದಿಜಿ ಮತ್ತು ಅಮಿತ್ ಶಾ ನಾಳೆ ನಿಮ್ಮನ್ನು ಉಳಿಸಲು ಬರುವುದಿಲ್ಲ… ಇಂದು ಸಮಯವಿದೆ ದೆಹಲಿಯ ಜನರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ತಮ್ಮ ನಾಲಿಗೆಯನ್ನು ಹರಿಯಬಿಟ್ಟಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ವಿಕಾಸ್ಪುರಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು ದೆಹಲಿಯ ಶಹೀನ್ ಬಾಗ್‌ನಲ್ಲಿನ ಪ್ರತಿಭಟನಾಕಾರರನ್ನು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯಲ್ಲಿ ತೆರವುಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಕೇವಲ ಮತ್ತೊಂದು ಚುನಾವಣೆಯಲ್ಲ. ಇದು ಒಂದು ರಾಷ್ಟ್ರದ ಐಕ್ಯತೆಯನ್ನು ನಿರ್ಧರಿಸುವ ಚುನಾವಣೆಯಾಗಿದೆ. ಫೆಬ್ರವರಿ 11 ರಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಒಂದು ಗಂಟೆಯೊಳಗೆ ನೀವು ಅಲ್ಲಿ ಒಬ್ಬ ಪ್ರತಿಭಟನಾಕಾರರನ್ನು ಕಾಣುವುದಿಲ್ಲ. ಹಾಗೆಯೇ ಒಂದು ತಿಂಗಳೊಳಗೆ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಒಂದೇ ಒಂದು ಮಸೀದಿಯನ್ನು ಉಳಿಸವುದಿಲ್ಲ”ಎಂದು ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಹೇಳಿದ್ದಾರೆ.

ಸಿಎಎ ವಿರುದ್ಧ ನಿರಂತರ ವಿರೋಧವನ್ನು ಎದುರಿಸುತ್ತಿರುವ ಬಿಜೆಪಿ ಪಕ್ಷವು ಚುನಾವಣೆಯನ್ನು ನಿಭಾಯಿಸಲು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಾಗಾಗಿ ಅದು ಶಾಹೀನ್ ಬಾಗ್ ಪ್ರತಿಭಟನೆಯನ್ನು ದೆಹಲಿ ಚುನಾವಣಾ ಪ್ರಚಾರದ ವಿಷಯವನ್ನಾಗಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಮತ್ತು ಎಎಪಿಯನ್ನು ಅದರೊಂದಿಗೆ ಸೇರಿಸಿ ಜನರನ್ನು ಗೆದ್ದುಕೊಳ್ಳಲು ಪಕ್ಷವು ಯಶಸ್ವಿಯಾಗಬಹುದು ಎಂದು ಬಿಜೆಪಿಯ ಉನ್ನತ ನಾಯಕರು ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪರ್ವೇಶ್ ವರ್ಮಾ ಅವರ ಹೇಳಿಕೆಯು ಅದನ್ನು ಪ್ರತಿಬಿಂಬಿಸುತ್ತಿದೆ.  ಈ ಹಿಂದೆ ಬಿಜೆಪಿ ಅಭ್ಯರ್ಥಿ ಕಪಿಲ್‌ ಮಿಶ್ರಾ ದೆಹಲಿ ಚುನಾವಣೆಯಲ್ಲಿ ಭಾರತ ಪಾಕ್‌ ಯುದ್ಧಕ್ಕೆ ಹೋಲಿಸಿದ್ದರು. ಹಾಗಾಗಿ ಚುನಾವಣಾ ಆಯೋಗ ಅವರನ್ನು ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಿಂದ ಬ್ಯಾನ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...