Homeಕರ್ನಾಟಕಸೌಜನ್ಯ ಪ್ರಕರಣ:ಸಂತೋಷ್ ರಾವ್ ತಂದೆಯ ಪಾದ ಪೂಜೆ ಮಾಡಿ ಕ್ಷಮೆಯಾಚನೆ

ಸೌಜನ್ಯ ಪ್ರಕರಣ:ಸಂತೋಷ್ ರಾವ್ ತಂದೆಯ ಪಾದ ಪೂಜೆ ಮಾಡಿ ಕ್ಷಮೆಯಾಚನೆ

- Advertisement -
- Advertisement -

ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಭೇಟಿ ಮಾಡಿ ಸಾಂತ್ವನವನ್ನು ಹೇಳಿದ್ದಾರೆ.

ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ, ಸುಧಾಕರ ರಾವ್  ಮತ್ತು  ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಸಂತೋಷ್ ರಾವ್ ಅವರ ತಂದೆ  ಸುಧಾಕರ ರಾವ್ ಅವರಿಗೆ ಗುರುವಂದನೆ ಸಲ್ಲಿಸಿದ್ದಾರೆ.

ಇದಲ್ಲದೆ ಸುಧಾಕರ ಅವರಿಗೆ ತಲೆಗೂದಲು ಕ್ಷೌರ ಮಾಡಿಸಿ, ಹೊಸಬಟ್ಟೆ ತೊಡಿಸಿ ಪಾದಪೂಜೆ ಮಾಡಿದ್ದಾರೆ. ಬಳಿಕ ಅವರ ಮನೆಗೆ ಸುಣ್ಣಬಣ್ಣ ಬಳಿಯಲಾಗಿದೆ.

ಬಳಿಕ ಮಾತನಾಡಿದ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ,ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಂತೋಷ್‌ ರಾವ್ ಮತ್ತು ಕುಟುಂಬ ಮಾನಸಿಕವಾಗಿ, ದೈಹಿಕವಾಗಿ ನೊಂದುಕೊಂಡಿದೆ.ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು ಸಾಗಿಸಿದೆ.ಇಂತಹ ಪರಿಸ್ಥಿತಿಯಲ್ಲಿ ಸಮಾಜದ ಪರವಾಗಿ ಸಂತೋಷ್ ರಾವ್ ಕುಟುಂಬದ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಸಂತೋಷ್ ರಾವ್ ವಿಚಾರದಲ್ಲಿ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸಂಸ್ಥೆ ನೆರವು ನೀಡಲಿದೆ. ಸಂಬಂಧಪಟ್ಟ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸಂತೋಷ್‌ರಾವ್‌ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಧರ್ಮಾಧಿಕಾರಿಯ ಮಂಪರು ಪರೀಕ್ಷೆಗೆ ಮಾಡೋದ್ರಲ್ಲಿ ತಪ್ಪೇನಿದೆ?; ಪ್ರಕಾಶ್ ರಾಜ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...